ಸಿಲಿಕಾನ್ ಸಿಟಿಯಲ್ಲಿ ಭೀಕರ ಅಗ್ನಿ ದುರಂತ – ಬೆಂಕಿಯ ಕೆನ್ನಾಲಿಗೆ ಹೊತ್ತಿ ಉರಿದ 2 ಅಂತಸ್ತಿನ ಕಟ್ಟಡ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಅಗ್ನಿ ಅವಘಡ ಸಂಭವಿಸುತ್ತಲೇ ಇದೆ. ಇದೀಗ ನಗರದಲ್ಲಿ ಮತ್ತೊಂದು ಅಗ್ನಿ ದುರಂತ ಸಂಭವಿಸಿದೆ. ಎರಡು ಅಂತಸ್ಥಿನ ಕಟ್ಟದ ಬೆಂಕಿ ಕೆನ್ನಾಲಿಗೆ ಹೊತ್ತಿ ಉರಿದಿದೆ.
ನಗರದ ಬಳೆಪೇಟೆಯ ಪೇಯಿಂಟ್ ಅಂಗಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಂತಸ್ಥಿನ ಕಟ್ಟದ ಹೊತ್ತಿ ಉರಿದಿದೆ. ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗಿದ್ದು, ಅಂಗಡಿ ಕಳೆದುಕೊಂಡ ಕುಟುಂಬ ಕಣ್ಣೀರಿಟ್ಟಿದೆ. ಬರೋಬ್ಬರಿ 30 ಲಕ್ಷಕ್ಕೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕಣ್ಣಿಗೆ ಬಣ್ಣದ ಲೆನ್ಸ್ ಹಾಕುವವರೇ ಗಮನಿಸಿ! – ಎಂತಹ ಲೆನ್ಸ್ ತಗೊಂಡ್ರೆ ಒಳ್ಳೇದು ಗೊತ್ತಾ?
ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಮಾಲೀಕ ಕೃಷ್ಣಮೂರ್ತಿ ಕುಟುಂಬ, ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. 20 ವರ್ಷಗಳಷ್ಟು ಹಳೆಯ ಬಿಲ್ಡಿಂಗ್ನಲ್ಲಿ ಇದೇ ಮೊದಲಬಾರಿಗೆ ಅಗ್ನಿ ಅನಾಹುತ ಸಂಭವಿಸಿದೆ ಎಂದು ಸಹ ಕೃಷ್ಣಮೂರ್ತಿ ತಿಳಿಸಿದ್ದಾರೆ.
ಇನ್ನೂ ಬೆಂಕಿ ನಂದಿಸುವ ಕಾರ್ಯಾಚರಣೆ ವೇಳೆ ಕಟ್ಟಡದ ಒಳಗೆ ಪ್ರವೇಶಿಸಿ ಅಲ್ಲಿಯೇ ಸಿಲುಕಿದ್ದ ಯುವಕನನ್ನು ಅಗ್ನಿ ಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ. ಸತತ ನಾಲ್ಕು ಗಂಟೆಗೂ ಹೆಚ್ಚು ಕಾಲ ಕಾರ್ಯಾಚರಣೆ ನಡೆಸಿದ ಸಿಬ್ಬಂದಿ, ಜೆಸಿಬಿ ಬಳಸಿ ಕಟ್ಟಡದ ಶಟರ್ ಮುರಿದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಘಟನೆಗೆ ನಿಖರ ಕಾರಣ ಏನು ಎಂಬುದು ತಿಳಿದುಬಂದಿಲ್ಲ. ಉಪ್ಪಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.