ಬಜೆಟ್ನಲ್ಲಿ ಮಾಲ್ಡೀವ್ಸ್ಗೆ ಕೇಂದ್ರಸರ್ಕಾರದ ತಿರುಗೇಟು – ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡುವುದಾಗಿ ಘೋಷಣೆ
ಚೀನಾದತ್ತ ವಾಲುತ್ತಿರುವ ಮಾಲ್ಡೀವ್ಸ್ಗೆ ಕೇಂದ್ರ ಸರ್ಕಾರ ಬಜೆಟ್ನಲ್ಲಿಯೂ ತಿರುಗೇಟು ನೀಡಿದೆ. ಲಕ್ಷದ್ವೀಪವನ್ನು ಅಭಿವೃದ್ಧಿ ಮಾಡುವುದಾಗಿ ಘೋಷಣೆ ಮಾಡಿದೆ. ದೇಶೀಯ ಪ್ರವಾಸೋದ್ಯಮದ ಉತ್ಸಾಹವನ್ನು ಹೆಚ್ಚಿಸಲು ಲಕ್ಷದ್ವೀಪ ಸೇರಿದಂತೆ ಹಲವು ದ್ವೀಪಗಳಲ್ಲಿ ಬಂದರು ಸಂಪರ್ಕ, ಮೂಲಸೌಕರ್ಯ ಯೋಜನೆಗಳನ್ನು ಆರಂಭಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.
ಇದನ್ನೂ ಓದಿ: ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು – ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗಾಗಿ ಮನೆ ನಿರ್ಮಾಣ
ಲಕ್ಷದ್ವೀಪದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು ಬಜೆಟ್ನಲ್ಲಿ ಘೋಷಣೆ ಮಾಡಲಾಗಿದೆ. ರಾಜ್ಯಗಳಲ್ಲಿ ಪ್ರವಾಸೋದ್ಯಮ ಹೆಚ್ಚಳಕ್ಕೆ ಸಹಕಾರ ನೀಡಲಾಗುತ್ತೆ. ಜಾಗತಿಕ ಮಟ್ಟದಲ್ಲಿ ಪ್ರವಾಸೋದ್ಯಮ ಪ್ರಚಾರಕ್ಕೆ ಒತ್ತು ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ವಿಕಸಿತ ಭಾರತಕ್ಕೆ ಆಧುನಿಕ ಮೂಲಸೌಕರ್ಯಗಳ ಒದಗಿಸುವಿಕೆ,ಮುಂದಿನ 5 ವರ್ಷಗಳು ಸುವರ್ಣಾಕ್ಷರಗಳಲ್ಲಿ ಬರೆದಿಡುವ ಕಾಲ. ಮುಂದಿನ 5 ವರ್ಷ ಭಾರೀ ಅಭಿವೃದ್ಧಿ ಕಾಣುವ ವರ್ಷಗಳು ಎಂದು ವಿತ್ತ ಸಚಿವೆ ಹೇಳಿದರು. ಅವಕಾಶಗಳಿಗೆ ದೇಶದಲ್ಲಿ ಯಾವುದೇ ಕೊರತೆ ಇಲ್ಲ. ಆಕಾಶದೆತ್ತರಕ್ಕೆ ಅವಕಾಶಗಳು ನಮ್ಮ ದೇಶದಲ್ಲಿ ಇವೆ. ಮುಂದಿನ ಪೀಳಿಗೆಯನ್ನು ಗುರಿಯಾಗಿಸಿಕೊಂಡು ಯೋಜನೆಗಳು ಜಾರಿಗೊಳಿಸುತ್ತೇವೆ. ಹೂಡಿಕೆ ಹೆಚ್ಚಳಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಕ್ರಮಗಳುನ್ನು ತೆಗೆದುಕೊಳ್ಳಲಾಗಿದೆ. ಜಿಲ್ಲೆಗಳಲ್ಲಿ ಆರ್ಥಿಕ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.