ತಮ್ಮದೇ ಸ್ವಂತ ಪಕ್ಷ ಕಟ್ಟಿ ರಾಜಕೀಯಕ್ಕೆ ಎಂಟ್ರಿಕೊಟ್ಟ ದಳಪತಿ ವಿಜಯ್! – ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?

ತಮ್ಮದೇ ಸ್ವಂತ ಪಕ್ಷ ಕಟ್ಟಿ ರಾಜಕೀಯಕ್ಕೆ ಎಂಟ್ರಿಕೊಟ್ಟ ದಳಪತಿ ವಿಜಯ್! – ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ?

ಲೋಕಸಣೆ ಚುನಾವಣೆಗೆ ಇನ್ನೂ ಎರಡು ತಿಂಗಳು ಮಾತ್ರ ಬಾಕಿ ಉಳಿದಿದೆ. ಈ ಹೊತ್ತಲ್ಲೇ ಸಿನಿಮಾ ನಟರೊಬ್ಬರು ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ವೊಬ್ಬರು ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ.

ಇದನ್ನೂ ಓದಿ: ಅಂದು ಕ್ರೀಡಾಸ್ಫೂರ್ತಿ ಬಗ್ಗೆ ಮಾತನಾಡಿದ್ದ ಬೆನ್‌ಸ್ಟೋಕ್‌ ಈಗ ಮಾಡಿದ್ದೇನು?- ಜಸ್ಪ್ರಿತ್ ಬುಮ್ರಾರನ್ನ ಸ್ಟಂಪ್ ಮಾಡೋಕೆ ಯತ್ನಿಸಿದ್ದು ಯಾಕೆ?

ಹೌದು, ಕಾಲಿವುಡ್ ಸ್ಟಾರ್ ವಿಜಯ್ ದಳಪತಿ ಅವರು ಇದೀಗ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ ಸಭೆಯಲ್ಲಿ ಅವರ ಅಭಿಮಾನಿಗಳ ಸಂಘ ವಿಜಯ್ ಮಕ್ಕಳ್ ಇಯಕ್ಕಂ ರಾಜಕೀಯ ಪಕ್ಷದ ರಚನೆಗೆ ಒಪ್ಪಿಗೆ ನೀಡಿದ ಬಳಿಕ ಶುಕ್ರವಾರ ತಮ್ಮ ರಾಜಕೀಯ ಪಕ್ಷದ ಹೆಸರನ್ನು ಘೋಷಿಸಿದ್ದಾರೆ. ತಮ್ಮದೇ ಸ್ವಂತ ಪಕ್ಷ ಕಟ್ಟಿ ಪಾಲಿಟಿಕ್ಸ್‌ಗೆ ಪಾದಾರ್ಪಣೆ ಮಾಡಿದ್ದಾರೆ. ‘ತಮಿಳಿಗ ವೆಟ್ರಿ ಕಳಗಂ’ (TVK) ಎಂದು ಪಕ್ಷಕ್ಕೆ ಹೆಸರನ್ನಿಟ್ಟಿದ್ದಾರೆ.

ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ನಟ ವಿಜಯ್, ನಮ್ಮ ಪಕ್ಷ ‘ತಮಿಳಗ ವೆಟ್ರಿ ಕಳಗಂ’ ನ್ನು ನೋಂದಾಯಿಸಲು ಚುನಾವಣಾ ಆಯೋಗಕ್ಕೆ ಇಂದು ಅರ್ಜಿ ಸಲ್ಲಿಸುತ್ತಿದ್ದೇವೆ, ಮುಂಬರುವ 2026 ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುವುದು ಮತ್ತು ಮೂಲಭೂತ ರಾಜಕೀಯ ಬದಲಾವಣೆ ತರುವುದು ನಮ್ಮ ಗುರಿಯಾಗಿದೆ ಎಂದಿದ್ದಾರೆ.

2024ರ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ!

ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಮತ್ತು ನಾವು ಯಾವುದೇ ಪಕ್ಷವನ್ನು ಬೆಂಬಲಿಸುವುದಿಲ್ಲ. ಸಾಮಾನ್ಯ ಮತ್ತು ಕಾರ್ಯಕಾರಿ ಮಂಡಳಿ ಸಭೆಗಾಗಿ ನಾವು ಈ ನಿರ್ಧಾರವನ್ನು ಮಾಡಿದ್ದೇವೆ ಎಂದು ಕೂಡ ಸ್ಪಷ್ಟನೆ ನೀಡಿದ್ದಾರೆ.

ನಟ ವಿಜಯ್ ಅವರ ಆಪ್ತರು ಹೇಳುವ ಪ್ರಕಾರ, ಕೇರಳ ಮತ್ತು ಕರ್ನಾಟಕದಲ್ಲಿ ಅವರ ಬಲವಾದ ಮತ್ತು ಸಂಘಟಿತ ಅಭಿಮಾನಿಗಳನ್ನು ಗಮನಿಸಿದರೆ ಪಕ್ಷದ ವ್ಯಾಪ್ತಿಯು ತಮಿಳುನಾಡು ರಾಜ್ಯವನ್ನು ಮೀರಿ ವಿಸ್ತರಿಸುವ ಸಾಧ್ಯತೆಯಿದೆ.

Shwetha M