ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಜನಪ್ರತಿನಿಧಿ ನ್ಯಾಯಾಲಯ – ಕೇಸ್‌ ಏನು?

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ರೂಪಾಯಿ ದಂಡ ವಿಧಿಸಿದ ಜನಪ್ರತಿನಿಧಿ ನ್ಯಾಯಾಲಯ – ಕೇಸ್‌ ಏನು?

ಸಿಎಂ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್‌ನ ಕೆಲ ನಾಯಕರಿಗೆ ಹೈಕೊರ್ಟ್‌ನ ಜನಪ್ರತಿನಿಧಿ ನ್ಯಾಯಾಲಯ ದಂಡ ವಿಧಿಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ನಾಯಿ ತಿನ್ನದೇ ಬಿಟ್ಟ ಬಿಸ್ಕತ್ತನ್ನು ತನ್ನ ಕಾರ್ಯಕರ್ತನಿಗೆ ಕೊಟ್ಟ ರಾಹುಲ್ ಗಾಂಧಿ!

2022ರಲ್ಲಿ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ ನಡೆಸಿತ್ತು. 2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ   ನಡೆಸಿತ್ತು. ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗುವಂತೆ ಸಮನ್ಸ್‌ ಜಾರಿ ಮಾಡಿದೆ.

ಬೆಂಗಳೂರು ನಗರದಲ್ಲಿ ಎಲ್ಲೆಂದರಲ್ಲಿ ಪ್ರತಿಭಟನೆ ನಡೆಸುವಂತಿಲ್ಲ. ಪೊಲೀಸರಿಂದ ಅನುಮತಿ ಪಡೆದವರಿಗೆ ಮಾತ್ರ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟಿಸಲು ಅವಕಾಶ ನೀಡಲಾಗುತ್ತದೆ. ಬೇರೆ ಕಡೆ ಪ್ರತಿಭಟನೆ ನಡೆಸಿ ಸಾರ್ವಜನಿಕರಿಗೆ ಸಮಸ್ಯೆ ಉಂಟಾದಲ್ಲಿ ಕೇಸ್‌ ಹಾಕಲಾಗುತ್ತದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿ ಕೆಲ ನಾಯಕರ ವಿರುದ್ಧ ದಂಡ ವಿಧಿಸಲಾಗಿದೆ.

Shwetha M