ಮದುವೆಯಾದ ಮೂರೇ ದಿನಕ್ಕೆ ತವರು ಸೇರಿದ ಪತ್ನಿ – ಮನನೊಂದು ಆತ್ಮಹತ್ಯೆಗೆ ಶರಣಾದ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ
ಅವರಿಬ್ಬರು ಕಳೆದ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಸಿದ ಜೋಡಿ ಹಕ್ಕಿಗಳು ಮೂರು ದಿನಗಳ ಹಿಂದೆ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದರು. ಆದ್ರೆ ಮದುವೆಯಾದ ಮೂರೇ ದಿನಕ್ಕೆ ಮಡದಿ ತವರು ಮನೆ ಸೇರಿದ್ದಾರೆ. ಮುದ್ದಿನ ಮಡದಿ ತನ್ನಿಂದ ದೂರವಾದಳೆಂದು ಮನನೊಂದು ಯುವಕ ಸಾವಿನ ಹಾದಿ ಹಿಡಿದಿದ್ದಾನೆ.
ಇದನ್ನೂ ಓದಿ: ಆಂಗ್ಲರನ್ನು ಮಣಿಸಿ ಸೋಲಿಗೆ ಸೇಡು ತೀರಿಸಿಕೊಂಡ ಭಾರತ – ಗೆದ್ದರೂ ರೊಚ್ಚಿಗೆದ್ದಿದ್ದೇಕೆ ರೋಹಿತ್ ಶರ್ಮಾ?
ಅಷ್ಟಕ್ಕೂ ಆಗಿದ್ದೇನು?
ಈ ಘಟನೆ ಚಿಕ್ಕಮಗಳೂರಿನ ತೇಗೂರು ಗ್ರಾಮದಲ್ಲಿ ನಡೆದಿದೆ. ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ವಿನೋದ್(24) ಹಾಗೂ ಅದೇ ಗ್ರಾಮದ ತನುಜಾ ಎಂಬ ಯುವತಿ ನಾಲ್ಕು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಇವರ ಪ್ರೀತಿಗೆ ಯುವತಿ ಮನೆಯವರ ಸಮ್ಮತಿ ಇರಲಿಲ್ಲ. ಹೀಗಾಗಿ ಯುವತಿ ಮನೆಯವರ ವಿರೋಧದ ನಡುವೆಯೇ ಇಬ್ಬರೂ ಓಡಿ ಹೋಗಿ ಮದುವೆಯಾಗಿದ್ದರು. ಡಿಸೆಂಬರ್ 10 ರಂದು ವಿನೋದ್ ಹಾಗೂ ತನುಜಾ ಮದುವೆಯಾಗಿದ್ದರು. ಇನ್ನೇನು ಪರಸ್ಪರ ಪ್ರೀತಿ ಮಾಡಿದ್ದ ಜೋಡಿ ಹಕ್ಕಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟು ಸಂಸಾರ ಶುರು ಮಾಡುವ ಹೊತ್ತಲ್ಲೇ ಪೊಲೀಸರು ನವ ಜೋಡಿಯನ್ನು ಠಾಣೆಗೆ ಕರೆ ತಂದಿದ್ದರು. ಯುವತಿಯ ಕುಟುಂಬಸ್ಥರ ದೂರಿನ ಮೇರೆಗೆ ಠಾಣೆಯಲ್ಲಿ ಪಂಚಾಯಿತಿ ನಡೆದಿದ್ದು ಯುವತಿ ತನ್ನ ತಾಯಿ ಮನೆಗೆ ಹೋಗುವುದಾಗಿ ಹೇಳಿಕೆ ನೀಡಿದ್ದಾಳೆ. ಮದುವೆಯಾದ ಮೂರೇ ದಿನಕ್ಕೆ ಗಂಡನನ್ನು ಬಿಟ್ಟು ತಾಯಿ ಜೊತೆ ಹೋಗುವುದಾಗಿ ಹೇಳಿ ಯುವತಿ ಉಲ್ಟಾ ಹೊಡೆದಿದ್ದಾಳೆ. ಇದರಿಂದ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಮನ ನೊಂದ ವಿನೋದ್ ಫೆಬ್ರವರಿ 2 ರಂದು ಆತ್ಮಹತ್ಯೆಗೆ ಯತ್ನಿಸಿದ್ದ ನೇಣು ಹಾಕಿಕೊಂಡಿದ್ದ ವಿನೋದ್ ರಕ್ಷಿಸಿ ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೋಮವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ವಿನೋದ್ ಮೃತಪಟ್ಟಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.