ಸಿಎಂ ಕಚೇರಿಗೆ ಬೀಗ ಜಡಿಯಲು ಮುಂದಾದ ಪ್ರತಿಭಟನಾಕಾರರು! – ಬಿಜೆಪಿ ನಾಯಕರು ಪೊಲೀಸ್‌  ವಶಕ್ಕೆ

ಸಿಎಂ ಕಚೇರಿಗೆ ಬೀಗ ಜಡಿಯಲು ಮುಂದಾದ ಪ್ರತಿಭಟನಾಕಾರರು! – ಬಿಜೆಪಿ ನಾಯಕರು ಪೊಲೀಸ್‌  ವಶಕ್ಕೆ

ರಾಜ್ಯದಲ್ಲಿ ಈ ಬಾರಿ ಬರದ ಪರಿಸ್ಥಿತಿ ಎದುರಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಸ್ವತಃ 222ಕ್ಕೂ ಹೆಚ್ಚು ತಾಲೂಕುಗಳನ್ನು ಬರಗಾಲ ಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿದ್ದರೂ, ಈವರೆಗೂ ಕುಡಿಯುವ ನೀರಿನ ಸಮಸ್ಯೆ ಸೇರಿದಂತೆ ಬರ ಪರಿಹಾರದ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಈ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಬಿಜೆಪಿ ನಾಯಕರು, ಶಾಸಕರು ವಿಧಾನಸೌಧದಲ್ಲಿನ ಮುಖ್ಯಮಂತ್ರಿ ಕಚೇರಿ ಬಳಿ ದೊಡ್ಡ ಹೈಡ್ರಾಮಾವನ್ನೇ ಸೃಷ್ಟಿ ಮಾಡಿದ್ದಾರೆ.

ಇದನ್ನೂ ಓದಿ: ಗಂಡನಿಗೆ ಬೇರೊಂದು ಸಂಬಂಧ, ಕೊನೆಯಾಯ್ತು ನಟಿಯ ದಾಂಪತ್ಯ ಜೀವನ – ಹೇಮಮಾಲಿನಿ ಮಗಳು ಇಶಾ ಬದುಕಲ್ಲಿ ಬಿರುಗಾಳಿ

ಹೌದು, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್. ಅಶೋಕ್ ಅವರಿಂದ ಪ್ರತಿಭಟನೆ ನಡೆಸಲಾಗುತ್ತಿದೆ.  ರಾಜ್ಯ ಬಿಜೆಪಿ ನಾಯಕರು ಪ್ರತಿಭಟನೆ ವೇಳೆ ವಿಧಾನಸೌಧದಲ್ಲಿನ ಮುಖ್ಯಮಂತ್ರಿ ಕಚೇರಿಗೆ ಬೀಗ ಹಾಕಲು ಮುಂದಾಗಿದ್ದಾರೆ. ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಿಎಂ ಸಿದ್ದರಾಮಯ್ಯ ಅವರ ಕಚೇರಿಗೆ ಬೀಗ ಹಾಕಲು ಮುಂದಾಗಿದ್ದಾರೆ. ಈ ವೇಳೆ ಬೀಗ ಹಾಕಲು ಓಡೋಡಿ ಹೋದ ವಿಪಕ್ಷ ನಾಯಕ ಆರ್ ಅಶೋಕ್​ರನ್ನ ಪೊಲೀಸರು ತಡೆದು ನಿಲ್ಲಿಸಿದ್ದಾರೆ. ಅಲ್ಲದೇ ಕೆಲ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ಯದಿದ್ದಾರೆ.

ವಿಧಾನಸೌಧದ ದಕ್ಷಿಣ ದ್ವಾರದಲ್ಲಿ ಕುಳಿತ ನಾಯಕರು ಬೀಗ ಹಾಕಿಯೇ ತೀರುತ್ತೇವೆ ಎಂದು ಕೂಗುತ್ತಿದ್ದಾರೆ. ಹೀಗಾಗಿ ಕೆಲ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದಿರುವ  ಪೊಲೀಸರು ಕಬ್ಬನ್ ಪಾರ್ಕ್ ಪೊಲೀಸ್​ ಠಾಣೆಗೆ ಕರೆದೊಯ್ಯುದಿದ್ದಾರೆ.

Shwetha M