ಹಾಸ್ಟೆಲ್ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ
ಹಾಸ್ಟೆಲ್ನಲ್ಲಿ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಡನೆ ನಡೆದಿದೆ. ಮಂಗಳೂರಿನ ವಳಚ್ಚಿಲ್ ಬಳಿಯ ಖಾಸಗಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾತ್ರಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಫೆ.17 ರ ಇಡಿ ವಿಚಾರಣೆಗೆ ಹಾಜರಾಗಿ – ಕೇಜ್ರಿವಾಲ್ಗೆ ದೆಹಲಿ ಕೋರ್ಟ್ ಸಮನ್ಸ್
ಖಾಸಗಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಬುಧವಾರ ರಾತ್ರಿ ಹಾಸ್ಟೆಲ್ನಲ್ಲಿ ಊಟ ಸೇವಿಸಿದ್ದರು. ಊಟ ಸೇವಿಸಿದ ಕೆಲವೇ ಹೊತ್ತಲ್ಲಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ವಿದ್ಯಾರ್ಧಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲ ವಿದ್ಯಾರ್ಥಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ತುಂಬೆ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಾತ್ರಿ ವೇಳೆ ಕೆಲ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ ಉಂಟಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾಸ್ಟೆಲ್ ಗೆ ತೆರಳಿ ಪರಿಶೀಲನೆ ನಡೆಸಿದ್ದೇವೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಹುತೇಕರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದು ಬಂದಿದೆ.