ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ NSUI ಕಾರ್ಯಕರ್ತರು – ʼನಳಿನ್‌ ಹಠಾವೋ.. ದೇಶ್‌ ಬಚಾವೋ..ʼ ಎಂಬ ಘೋಷಣೆ ಕೂಗಿ ಆಕ್ರೋಶ

ಕಟೀಲ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ NSUI ಕಾರ್ಯಕರ್ತರು – ʼನಳಿನ್‌ ಹಠಾವೋ.. ದೇಶ್‌ ಬಚಾವೋ..ʼ ಎಂಬ ಘೋಷಣೆ ಕೂಗಿ ಆಕ್ರೋಶ

ಸಂಸದ ನಳಿನ್‌ ಕುಮಾರ್‌ ಕಟೀಲ್‌ ಅವರ ಮನೆಗೆ ಎನ್‍ಎಸ್‍ಯುಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮುತ್ತಿಗೆಗೆ ಯತ್ನಿಸಿದ್ದ ಎನ್‍ಎಸ್‍ಯುಐ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಹಾಸ್ಟೆಲ್​ ಊಟ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥ

ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆಯಲ್ಲಿ ಭಾರತದ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಕಾರ್ಯಕರ್ತರು ನಳಿನ್ ಕುಮಾರ್ ಕಟೀಲ್ ಮನೆಗೆ ನುಗ್ಗಲು ಯತ್ನಿಸಿದ್ದಾರೆ. ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್‌ ಮೆಂಟ್ ಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಈ ವೇಳೆ ʼನಳಿನ್‌ ಹಠಾವೋ.. ದೇಶ್‌ ಬಚಾವೋ..ʼ ಎಂಬ ಘೋಷಣೆ ಕೇಳಿಬಂದಿದೆ.

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆಯೂ ಕಟೀಲ್ ಮನೆಗೆ ನುಗ್ಗಲು ಕಾರ್ಯಕರ್ತರು ಯತ್ನಿಸಿದ್ದಾರೆ. ಈ ವೇಳೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಎನ್‍ಎಸ್‍ಯುಐ ಕಾರ್ಯಕರ್ತರನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಉರ್ವದಲ್ಲಿರುವ ಅಶೋಕಾ ಅಪಾರ್ಟ್‌ ಮೆಂಟ್ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

Shwetha M