ಡಿಕೆ ಶಿವಕುಮಾರ್‌ಗೆ ಲೋಕಾಯುಕ್ತದಿಂದ ಶಾಕ್‌ – ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲು!

ಡಿಕೆ ಶಿವಕುಮಾರ್‌ಗೆ ಲೋಕಾಯುಕ್ತದಿಂದ ಶಾಕ್‌ – ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಎಫ್‌ಐಆರ್‌ ದಾಖಲು!

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರಿಗೆ ಕಾನೂನು ಸಂಕಷ್ಟ ತಪ್ಪುವಂತೆ ಕಾಣುತ್ತಿಲ್ಲ. ಡಿಕೆಶಿಗೆ ಈಗ ಮತ್ತೊಂದು ತನಿಖೆಯ ಶಾಖ್‌ ಎದುರಾಗಿದೆ. ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐರ್‌ ದಾಖಲಿಸಿದ್ದಾರೆ ಎಂದು ವರದಿಯಾಗಿದೆ.

ಅಕ್ರಮ ಆಸ್ತಿ ಗಳಿಕೆಯ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರಿಗೆ ಒಂದಲ್ಲ ಒಂದು ರೀತಿಯ ಸಂಕಷ್ಟ ಎದುರಾಗುತ್ತಲೇ ಇದೆ. ಇದೀಗ ಈ  ಪ್ರಕರಣದಲ್ಲಿ ಡಿಕೆ ಶಿವಕುಮಾರ್‌ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐರ್‌ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ ಸಿಬಿಐಗೆ ಲೋಕಾಯುಕ್ತ ಪೊಲೀಸರು ಪತ್ರ ಬರೆದಿದ್ದಾರೆ. ಈ ಮೂಲಕ ಸಿಬಿಐನಲ್ಲಿದ್ದ ಪ್ರಕರಣದ ಮರುತನಿಖೆಗೆ ಲೋಕಾಯುಕ್ತ ಮುಂದಾಗಿದ್ದು, ಡಿಕೆ ಶಿವಕುಮಾರ್‌ಗೆ ಮತ್ತೊಂದು ಸಮಸ್ಯೆ ಸೃಷ್ಟಿಯಾಗಿದೆ.

ಇದನ್ನೂ ಓದಿ: ನಟ ನಾಗಚೈತನ್ಯಗೆ ಎರಡನೇ ಮದುವೆ – ನಾಗರ್ಜುನ ಕುಟುಂಬ ಕುಡಿ ಜೊತೆ ಮದುವೆಗೆ ಸಿದ್ಧತೆ?

ಡಿ.ಕೆ ಶಿವಕುಮಾರ್‌ ಅವರಿಗೆ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಒದಗಿಸುವಂತೆ  ಹೇಳಿದ್ದರೂ, ಇದುವರೆಗೂ ಯಾವುದೇ ದಾಖಲೆಗಳನ್ನು ಸಿಬಿಐ ಅಧಿಕಾರಿಗಳು ಲೋಕಾಯುಕ್ತಕ್ಕೆ ನೀಡಿಲ್ಲ. ಅದಲ್ಲದೇ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಮೊರೆ ಹೋಗಿದ್ದು, ತನಿಖೆ ಮುಗಿಯುವ ಹಂತದಲ್ಲಿದೆ. ಈ ವೇಳೆ ತನಿಖೆಗೆ ನೀಡಿರುವ ಅನುಮತಿ ವಾಪಸ್‌ ತೆಗೆದುಕೊಳ್ಳುವುದು ಸರಿಯಲ್ಲ ಎಂದು ವಾದಿಸಿದೆ.

ಡಿಕೆ ಶಿವಕುಮಾರ್‌ ಅವರ ವಿರುದ್ಧ ತನಿಖೆ ನಡೆಸಲು ಸಿಬಿಐಗೆ ನೀಡಿದ್ದ ಪೂರ್ವಾನುಮತಿಯನ್ನು ಸರ್ಕಾರ ವಾಪಸ್‌ ತೆಗೆದುಕೊಂಡಿತ್ತು. ಈ ಹಿನ್ನೆಲೆ ಪ್ರಕರಣ ಲೋಕಾಯುಕ್ತಕ್ಕೆ ವರ್ಗಾವಣೆಯಾಗಿತ್ತು. ರಾಜ್ಯ ಸರ್ಕಾರ ಡಿಸೆಂಬರ್‌ 22ರಂದೇ ಲೋಕಾಯುಕ್ತ ಡಿಜಿಪಿಗೆ ಪತ್ರ ಬರೆದು ಡಿಕೆ ಶಿವಕುಮಾರ್‌ ವಿರುದ್ಧ ತನಿಖೆಗೆ ಆದೇಶಿಸಿತ್ತು. ಆದರೆ, ಇಲ್ಲಿಯವರೆಗೂ ಎಫ್‌ಐಆರ್‌ ದಾಖಲಾಗಿದ್ದಿಲ್ಲ. ಈಗ ಒಂದೂವರೆ ತಿಂಗಳ ಬಳಿಕ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

Shwetha M