ಮತ್ತಷ್ಟು ತೀವ್ರಗೊಂಡ ಅನ್ನದಾತರ ಪ್ರತಿಭಟನೆ – ಫೆ.16 ರಂದು ಗ್ರಾಮೀಣ ಭಾರತ ಬಂದ್ಗೆ ಕರೆ ನೀಡಿದ ಸಂಯುಕ್ತ ಕಿಸಾನ್ ಮೋರ್ಚಾ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರೈತ ಸಂಘಟನೆಗಳು ದೆಹಲಿ ಚಲೋ ಚಳವಳಿಯನ್ನು ನಡೆಸುತ್ತಿದೆ. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುತ್ತಿದೆ. ಇದೀಗ ಸಂಯುಕ್ತ ಕಿಸಾನ್ ಮೋರ್ಚಾ ಫೇಬ್ರವರಿ 16 ರಂದು ಗ್ರಾಮೀಣ ಭಾರತ ಬಂದ್ ಗೆ ಕರೆ ನೀಡಿದೆ ಎಂದು ವರದಿಯಾಗಿದೆ.
ಅನ್ನದಾತರು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸುತ್ತಿವೆ. ಇದೀಗ ಗ್ರಾಮೀಣ ಭಾರತ ಬಂದ್ಗೆ ಕರೆ ನೀಡಿದೆ. ಸಂಯುಕ್ತ ಕಿಸಾನ್ ಮೋರ್ಚಾ (ಎಸ್ಕೆಎಂ) ಬ್ಯಾನರ್ನಡಿಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳೊಂದಿಗೆ ರೈತ ಸಂಘಗಳು ತಮ್ಮ ಇತರ ಬೇಡಿಕೆಗಳನ್ನು ಕೇಂದ್ರ ಸರ್ಕಾರದ ಮುಂದಿರಿಸಲು ಫೆಬ್ರವರಿ 16 ರಂದು ದೇಶಾದ್ಯಂತ ಗ್ರಾಮೀಣ ಭಾರತ್ ಬಂದ್ ಎಂದು ಕರೆಯಲಾಗುವ ಮುಷ್ಕರಕ್ಕೆ ಕರೆ ನೀಡಿವೆ. ಎಸ್ಕೆಎಂ ಮತ್ತು ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಗ್ರಾಮೀಣ ಭಾರತ್ ಬಂದ್ ಫೆಬ್ರವರಿ 16 ರಂದು ಬೆಳಗ್ಗೆ 6 ರಿಂದ ಸಂಜೆ 4 ರವರೆಗೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ: ಆಸ್ತಿ ತೆರಿಗೆ ಬಾಕಿ – ಬೆಂಗಳೂರಿನ ಮತ್ತೊಂದು ಮಾಲ್ಗೆ ಬೀಗಮುದ್ರೆ ಹಾಕಿದ ಬಿಬಿಎಂಪಿ ಅಧಿಕಾರಿಗಳು!
ಫೆ.16 ರಂದು ಯಾವೆಲ್ಲಾ ಸೇವೆಗಳ ಮೇಲೆ ಪರಿಣಾಮ ಫೆಬ್ರವರಿ 16 ರಂದು ದಿನವಿಡೀ ಭಾರತ್ ಬಂದ್ನಲ್ಲಿ, ಸಾರಿಗೆ, ಕೃಷಿ ಚಟುವಟಿಕೆಗಳು, MNREGA ಗ್ರಾಮೀಣ ಕೆಲಸಗಳು, ಖಾಸಗಿ ಕಚೇರಿಗಳು, ಹಳ್ಳಿ ಅಂಗಡಿಗಳು ಮತ್ತು ಗ್ರಾಮೀಣ ಕೈಗಾರಿಕಾ ಮತ್ತು ಸೇವಾ ವಲಯದ ಸಂಸ್ಥೆಗಳು ಮುಚ್ಚಲ್ಪಡುತ್ತವೆ. ಇದಲ್ಲದೆ, ಮುಷ್ಕರದ ಸಮಯದಲ್ಲಿ ಆಂಬ್ಯುಲೆನ್ಸ್ಗಳ ಕಾರ್ಯಾಚರಣೆ, ಪತ್ರಿಕೆ ವಿತರಣೆ, ಮದುವೆ, ಮೆಡಿಕಲ್ ಶಾಪ್ಗಳು, ಬೋರ್ಡ್ ಪರೀಕ್ಷೆಗೆ ಹೋಗುವ ವಿದ್ಯಾರ್ಥಿಗಳು ಇತ್ಯಾದಿ ತುರ್ತು ಸೇವೆಗಳನ್ನು ನಿಲ್ಲಿಸಲಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ರೈತರ ಬೇಡಿಕೆಗಳೇನು?
ಧರಣಿ ನಿರತ ರೈತರು ಮತ್ತು ಕಾರ್ಮಿಕ ಸಂಘಟನೆಗಳ ಪ್ರಮುಖ ಬೇಡಿಕೆಗಳೆಂದರೆ ರೈತರಿಗೆ ಪಿಂಚಣಿ, ಬೆಳೆಗಳಿಗೆ ಎಂಎಸ್ಪಿ, ಹಳೆಯ ಪಿಂಚಣಿ ಯೋಜನೆ ಅನುಷ್ಠಾನ ಮತ್ತು ಕಾರ್ಮಿಕ ಕಾನೂನುಗಳ ತಿದ್ದುಪಡಿಯನ್ನು ಹಿಂಪಡೆಯುವುದು. ಉದ್ಯೋಗಿಗಳ ಗುತ್ತಿಗೆ, ಖಾತರಿಯ ಉದ್ಯೋಗ ಇತ್ಯಾದಿಗಳು ಸೇರಿವೆ. ಇನ್ನೂ, ಇತರ ಬೇಡಿಕೆಗಳಲ್ಲಿ ಉದ್ಯೋಗಿಗಳಿಗೆ ಸಂಬಂಧಿಸಿದ ಸಮಸ್ಯೆಗಳಾದ ಆಪರೇಷನಲ್ ಪರ್ಫಾರ್ಮೆನ್ಸ್-ಲಿಂಕ್ಡ್ ಸಂಬಳ (OPS) ಅನುಷ್ಠಾನವನ್ನು ಹಿಂತೆಗೆದುಕೊಳ್ಳುವುದು, ತಿದ್ದುಪಡಿಗಳು ಕಾರ್ಮಿಕ ಕಾನೂನುಗಳು ಮತ್ತು ಇತರ ಹಲವಾರು ಬೇಡಿಕೆಗಳು ಸರ್ಕಾರದ ಮುಂದಿವೆ.
ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು (MGNREGS) ಬಲಪಡಿಸಲು, ಹಳೆಯ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸಲು ಮತ್ತು ಔಪಚಾರಿಕ ಮತ್ತು ಅನೌಪಚಾರಿಕ ವಲಯಗಳಲ್ಲಿ ಎಲ್ಲರಿಗೂ ಪಿಂಚಣಿ ಮತ್ತು ಸಾಮಾಜಿಕ ಭದ್ರತೆಯನ್ನು ಖಚಿತಪಡಿಸಿಕೊಳ್ಳಲು ರೈತರು ಪ್ರಯತ್ನಿಸುತ್ತಿದ್ದಾರೆ.