ವಸತಿ ಶಾಲೆ – ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಿಸುವಂತಿಲ್ಲ – ರಾಜ್ಯ ಸರ್ಕಾರದ ಸುತ್ತೋಲೆ

ವಸತಿ ಶಾಲೆ – ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬ ಆಚರಿಸುವಂತಿಲ್ಲ – ರಾಜ್ಯ ಸರ್ಕಾರದ ಸುತ್ತೋಲೆ

ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಆಚರಣೆಗೆ ಅವಕಾಶ ಇಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನಿಗದಿತ ರಾಷ್ಟ್ರೀಯ ಹಬ್ಬ, ನಾಡ ಹಬ್ಬ ಹಾಗೂ ಜಯಂತಿಗಳನ್ನು ಮಾತ್ರ ಆಚರಿಸಬೇಕು ಅಂತಾ ರಾಜ್ಯ ಸರ್ಕಾರ ತಿಳಿಸಿದೆ.

ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿ ಬರುವ ಕರ್ನಾಟಕ ವಸತಿ ಶಾಲಾ-ಕಾಲೇಜುಗಳಲ್ಲಿ ಯಾವುದೇ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡುವಂತಿಲ್ಲ. ಯುಗಾದಿ, ರಂಜಾನ್, ಕ್ರಿಸ್ಮಸ್, ಸಂಕ್ರಾಂತಿ, ಈದ್ ಮಿಲಾದ್ ಸೇರಿ ಯಾವುದೇ ಧರ್ಮದ ಧಾರ್ಮಿಕ ಹಬ್ಬಗಳನ್ನು ಆಚರಣೆ ಮಾಡಬಾರದು. ಕೇವಲ ರಾಷ್ಟ್ರೀಯ ಹಬ್ಬಗಳು, ನಾಡಹಬ್ಬ ಮತ್ತು ಆಯ್ದ ಮಹಾ ಪುರುಷರು ಜಯಂತಿ ಸೇರಿ 10 ಆಚರಣೆಗಳನ್ನ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಇದನ್ನೂ ಓದಿ: 5 ವರ್ಷಗಳ ಬಳಿಕ ಕನ್ನಡಿಗರಿಗೆ ಬೆಳಗಾವಿ ಮೇಯರ್ ಸ್ಥಾನ! – ಪೌರ ಕಾರ್ಮಿಕ ಮಹಿಳೆಗೆ ಒಲಿದ ಮೇಯರ್‌ ಪಟ್ಟ!

ಆದೇಶದ ಪ್ರಕಾರ, ಗಣರಾಜ್ಯೋತ್ಸವ ಸ್ವಾತಂತ್ರ್ಯ ದಿನಾಚರಣೆ, ಗಾಂಧಿ ಜಯಂತಿ, ಕನ್ನಡ ರಾಜ್ಯೋತ್ಸವ, ಅಂಬೇಡ್ಕರ್ ಜಯಂತಿ, ವಾಲ್ಮೀಕಿ ಜಯಂತಿ, ಕನಕದಾಸರ ಜಯಂತಿ, ಬಸವ ಜಯಂತಿ, ಸಂವಿಧಾನ ದಿನಾಚರಣೆ ಹಾಗೂ ಯೋಗ ದಿನಾಚರಣೆ ಮಾತ್ರ ಆಚರಣೆ ಮಾಡುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಒಂದು ವೇಳೆ ನಿಯಮ ಮೀರಿ ಧಾರ್ಮಿಕ ಹಬ್ಬಗಳು‌ ಆಚರಣೆ ಮಾಡಿದರೆ ಶಾಲಾ-ಕಾಲೇಜುಗಳ ಮುಖ್ಯಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳೋದಾಗಿ ಆದೇಶದಲ್ಲಿ ತಿಳಿಸಲಾಗಿದೆ.

Shwetha M