ಕೇಂದ್ರ ವಿರುದ್ಧ ಸಿಎಂ ಟೀಕೆಗೆ ಪ್ರತಿಪಕ್ಷ ಕಿಡಿ – ಬಜೆಟ್ ಮಂಡನೆ ವೇಳೆ ಗದ್ದಲ

ಕೇಂದ್ರ ವಿರುದ್ಧ ಸಿಎಂ ಟೀಕೆಗೆ ಪ್ರತಿಪಕ್ಷ ಕಿಡಿ – ಬಜೆಟ್ ಮಂಡನೆ ವೇಳೆ ಗದ್ದಲ

ಬಜೆಟ್ ಮಂಡನೆ ವೇಳೆ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡಿದ್ದಾರೆ. ಇದು ಪ್ರತಿಪಕ್ಷಗಳ ತೀವ್ರ ಆಕ್ರೋಶಕ್ಕೆ ಕಾರಣವಾಯಿತು. ಕೇಂದ್ರ ಸರ್ಕಾರ ತೆರಿಗೆ ವಂಚನೆ ಮಾಡಿದ್ದಾರೆ ಎಂದು ಸಿಎಂ ಹೇಳಿದ್ದು ಕೂಡಾ ವಿರೋಧ ಪಕ್ಷಗಳ ಗದ್ದಲಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ – ಗ್ರಾಮಪಂಚಾಯತ್ ಮಟ್ಟದಲ್ಲಿ ಉತ್ತಮ ಶಾಲೆಗಳ ಅಭಿವೃದ್ಧಿ

ಬಜೆಟ್ ಮಂಡನೆ ವೇಳೆ ಪ್ರತಿಪಕ್ಷಗಳ ಗಲಾಟೆಗೆ ಕೆಲ ಹೊತ್ತು ಸಿಎಂ ಸಿದ್ದರಾಮಯ್ಯ ಅವರ ಬಜೆಟ್ ಮಂಡನೆ ಕೇಳಿಸಲೇ ಇಲ್ಲ. ಬಜೆಟ್​ ಅನ್ನು ಕೇಂದ್ರದ ವಿರುದ್ಧ ಟೀಕೆಗೆ ಬಳಸಿಕೊಳ್ಳುತ್ತೀರಾ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದರು. ಈ ವೇಳೆ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಸ್ಪೀಕರ್ ಯುಟಿ ಖಾದರ್ ಪರಿಪರಿಯಾಗಿ ಬೇಡಿಕೊಂಡರೂ ಪ್ರತಿಪಕ್ಷ ನಾಯಕರು ಆಕ್ರೋಶದ ಮಾತುಗಳನ್ನು ಕಡಿಮೆ ಮಾಡಲಿಲ್ಲ.

Sulekha