ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ – ಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ
ಅಂಗನವಾಡಿ ಕಾರ್ಯಕರ್ತರಿಗೆ 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು. 100 ಕೋಟಿ ವೆಚ್ಚದಲ್ಲಿ 1,000 ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರ್ಯಾಚುಟಿ ಸೌಲಭ್ಯಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು.
ಇದನ್ನೂ ಓದಿ:ಮೊದಲ ಬಾರಿಗೆ ಸಮುದ್ರ ಆ್ಯಂಬುಲೆನ್ಸ್ ಪರಿಚಯ – ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್
ನಿರಾಶ್ರಿತ ಬೌದ್ಧಿಕ ವಿಕಲಚೇತನರ ಆರೈಕೆಗೆ 4 ಕೇಂದ್ರಗಳನ್ನು ಆರಂಭಿಸಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪಿಸಿದ್ದಾರೆ. 4 ಅನುಪಾಲನಾ ಕೇಂದ್ರಗಳ ಸ್ಥಾಪನೆಗೆ 2 ಕೋಟಿ ರೂ. ಅನುದಾನ ಒದಗಿಸಲಾಗುವುದು. 1,500 ವಿಶೇಷ ಚೇತನರಿಗೆ ದ್ವಿಚಕ್ರ ವಾಹನಗಳ ವಿತರಣೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು. ಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ ಒದಗಿಸಲಾಗುವುದು ಎಂದು ಬಜೆಟ್ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ ಸಿಎಂ ಸಿದ್ದರಾಮಯ್ಯ. ಬೆಂಗಳೂರಿನ ಬಡಜನರಿಗೆ ಉಚಿತ ಪ್ರಯೋಗಾಲಯ ಸೇವೆ ಒದಗಿಸಲಾಗುವುದು. ಇದಕ್ಕೆ 430 ಪ್ರಯೋಗಾಲಯಗಳ ಸ್ಥಾಪನೆಗೆ 20 ಕೋಟಿ ಮೀಸಲು ಇಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಣೆ ಮಾಡಿದರು. ವೈದ್ಯಕೀಯ ಕಾಲೇಜುಗಳ ನಿರ್ಮಾಣ, ಉಪಕರಣ ಖರೀದಿಗೆ 400 ಕೋಟಿ ಅನುದಾನ ನೀಡಲಾಗುವುದು. ಸೂಪರ್ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ 130 ಕೋಟಿ ರೂ. ಒದಗಿಸಲಾಗುವುದು ಎಂದು ಅವರು ತಿಳಿಸಿದರು. ಖಾಲಿ ಇರುವ ಶಿಕ್ಷಕರ, ಉಪನ್ಯಾಸಕರ ನೇಮಕಕ್ಕೆ ಕ್ರಮ ರಾಜ್ಯದ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಕ, ಉಪನ್ಯಾಸಕರ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಅಭಿವೃದ್ಧಿಗೆ ಅನುದಾನ ನೀಡಲಾಗುವುದು. ಕಾಲೇಜು ಸೌಲಭ್ಯಕ್ಕಾಗಿ 250 ಕೋಟಿ ರೂಪಾಯಿ ಮೀಸಲು ಇಡಲಾಗುವುದು. ಖಾಲಿ ಇರುವ ಶಿಕ್ಷಕರ, ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ತಿಳಿಸಿದರು.