ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಕೇಸ್ – ರಾಹುಲ್ ಗಾಂಧಿಗೆ ಜಾಮೀನು
ಕಾನೂನು ಸಂಕಷ್ಟದಲ್ಲಿ ಸಿಲುಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಮಿತ್ ಶಾ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಸುಲ್ತಾನ್ ಪುರ ಕೋರ್ಟ್ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಕೇರಳದಲ್ಲಿ ಆನೆ ದಾಳಿಗೆ ಕರ್ನಾಟಕದಿಂದ ₹15 ಲಕ್ಷ ಪರಿಹಾರ! – ರಾಹುಲ್ ಗಾಂಧಿಯನ್ನು ಮೆಚ್ಚಿಸಲು ಕೈ ನಾಯಕರು ಹೀಗೆ ಮಾಡಿದ್ರಾ?
2018 ರಲ್ಲಿ ರಾಹುಲ್ ಗಾಂಧಿ ಅವರು ಅಮಿತ್ ಶಾ ಅವರನ್ನು ಕೊಲೆಗಾರ ಎಂದು ಕರೆದಿದ್ದರು. ಈ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ವಿಜಯ್ ಮಿಶ್ರಾ ಅವರು ಆಗಸ್ಟ್ 4, 2018 ರಂದು ಮಾನನಷ್ಟ ಮೊಕದ್ದಮೆಯನ್ನು ದಾಖಲಿಸಿದ್ದರು. ಗಾಂಧಿಯವರು ಶಾ ಅವರ ಪ್ರತಿಷ್ಠೆಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದರು. ಇದೇ ಪ್ರಕರಣವನ್ನು ಮಂಗಳವಾರ (ಫೆಬ್ರವರಿ 20) ಸುಲ್ತಾನ್ಪುರದ ಸಂಸದ-ಶಾಸಕ ನ್ಯಾಯಾಲಯವು ವಿಚಾರಣೆ ನಡೆಸಿತು. ಇದೀಗ ಕೋರ್ಟ್ ರಾಹುಲ್ ಗಾಂಧಿಗೆ ಜಾಮೀನು ನೀಡಿದೆ.
ಭಾರತ್ ಜೋಡೋ ನ್ಯಾಯ ಯಾತ್ರೆ ನಡೆಯುತ್ತಿರುವ ಕಾರಣ ಜನವರಿ 18 ರಂದು ನ್ಯಾಯಾಲಯದ ಹಿಂದಿನ ವಿಚಾರಣೆಗೆ ಗಾಂಧಿ ಗೈರಾಗಿದ್ದರು, ಬಿಜೆಪಿಯಿಂದ ಟೀಕೆಗೆ ಗುರಿಯಾಗಿತ್ತು. ಮಂಗಳವಾರ ರಾಹುಲ್ ಗಾಂಧಿ ಅವರು ಸುಲ್ತಾನ್ಪುರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಸುಲ್ತಾನ್ಪುರ ಎಂಪಿ ಎಂಎಲ್ಎ ನ್ಯಾಯಾಲಯ ಅವರಿಗೆ ಜಾಮೀನು ನೀಡಿತು. ಇದೀಗ ರಾಹುಲ್ ಗಾಂಧಿ ಅವರು ಅಮೇಥಿಗೆ ತೆರಳಿದ್ದಾರೆ.