ಜ್ಞಾನವಾಪಿಯಲ್ಲಿ ಪೂಜೆಗೆ ತಡೆ ನೀಡಲು ಹೈಕೋರ್ಟ್ ನಕಾರ – ಮುಸ್ಲಿಮರಿಗೆ ಮತ್ತೆ ಹಿನ್ನಡೆ
ವಾರಾಣಸಿಯ ಜ್ಞಾನವಾಪಿ ಮಸೀದಿಯ ಪ್ರಕರಣ ಸಂಬಂಧ ಹಿಂದೂಗಳಿಗೆ ಮತ್ತೆ ಜಯ ಸಿಕ್ಕಿದೆ. ಪೂಜೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಸ್ಲಿಂ ಅರ್ಜಿದಾರರು ಸಲ್ಲಿಸಿರುವ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.
ಇದನ್ನೂ ಓದಿ: ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ನಿಧನ – ಮಧ್ಯಾಹ್ನ ಅಂತ್ಯ ಸಂಸ್ಕಾರ
ಜ್ಞಾನವಾಪಿ ಸಂಕೀರ್ಣದ ‘ವ್ಯಾಸ್ ತೆಹ್ಖಾನಾ’ದಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅನುಮತಿ ನೀಡಿದ ಆದೇಶವನ್ನು ಪ್ರಶ್ನಿಸಿ ಮುಸ್ಲಿಂ ಮುಖಂಡರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಫೆಬ್ರವರಿ 15 ರಂದು ಹೈಕೋರ್ಟ್ನಲ್ಲಿ ಈ ಪ್ರಕರಣದ ವಿಚಾರಣೆ ನಡೆದಿತ್ತು. ಎರಡೂ ಕಡೆಯ ವಾದ-ಪ್ರತಿವಾದದ ಬಳಿಕ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಇದೀಗ ಈ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಇದರೊಂದಿಗೆ ನೆಲಮಾಳಿಗೆಯಲ್ಲಿ ಹಿಂದೂಗಳ ಪೂಜೆ, ವ್ಯಾಸ ಜಿ ಆರಾಧನೆ ಮುಂದುವರಿಯಲಿದೆ. ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರಿದ್ದ ಏಕಸದಸ್ಯ ಪೀಠ ಈ ತೀರ್ಪು ನೀಡಿದೆ.
ಈ ಸಂಬಂಧ ಹಿಂದೂ ಪರ ವಕೀಲ ವಿಷ್ಣು ಶಂಕರ್ ಜೈನ್ ಪ್ರತಿಕ್ರಿಯಿಸಿ, ಇಂದು ಅಲಹಾಬಾದ್ ಹೈಕೋರ್ಟ್ ಅಂಜುಮನ್ ಇಂಟೆಜಾಮಿಯಾ ಅವರ ಆದೇಶದ ಮೊದಲ ಮೇಲ್ಮನವಿಯನ್ನು ವಜಾಗೊಳಿಸಿದೆ. ಇದರಲ್ಲಿ ವಾರಣಾಸಿ ಜಿಲ್ಲಾ ನ್ಯಾಯಾಲಯವು ಜನವರಿ 17 ಮತ್ತು 31 ರಂದು ನೀಡಿದ್ದ ಆದೇಶವನ್ನು ಅಲಹಾಬಾದ್ ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ವಿಷಯ ಏನೆಂದರೆ ಜ್ಞಾನವಾಪಿ ಕಾಂಪ್ಲೆಕ್ಸ್ನ ‘ವ್ಯಾಸ್ ತೆಹ್ಖಾನಾ’ದಲ್ಲಿ ನಡೆಯುತ್ತಿರುವ ಪೂಜೆ ಮುಂದುವರಿಯುತ್ತದೆ ಎಂದರು.