ಮಂಗಳೂರಲ್ಲಿ ಹೃದಯ ವಿದ್ರಾವಕ ಘಟನೆ – ಕಾಣೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಶವವಾಗಿ ಪತ್ತೆ
ಕಾಣೆಯಾಗಿದ್ದ ನಾಲ್ವರು ಮಕ್ಕಳ ಮೃತದೇಹ ಪತ್ತೆಯಾಗಿದೆ. ಈ ಮಕ್ಕಳು ಮಂಗಳೂರಿನ ಸುರತ್ಕಲ್ನ ವಿದ್ಯಾದಾಯಿನಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಾಗಿದ್ದಾರೆ.
ಮಂಗಳವಾರ ನಾಲ್ವರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳು ಪರೀಕ್ಷೆ ಮುಗಿಸಿ ಖುಷಿಯಿಂದ ಈಜಲೆಂದು ನದಿಗೆ ಹೋಗಿದ್ದರು. ಬಳಿಕ ಈ ಮಕ್ಕಳು ನಾಪತ್ತೆಯಾಗಿದ್ದರು. ಇದೀಗ ನಾಪತ್ತೆಯಾಗಿದ್ದ ಮಕ್ಕಳ ಶವವಾಗಿ ಪತ್ತೆಯಾಗಿದ್ದಾರೆ. ಯಶ್ವಿತ್ ಚಂದ್ರಕಾಂತ್, ನಿರೂಪ್, ಅನ್ವಿತ್ ಮತ್ತು ರಾಘವೇಂದ್ರ ಮೃತಪಟ್ಟವರು. ಶಾಲಾ ಪರೀಕ್ಷೆ ನಂತರ ನದಿಗೆ ಈಜಲು ಹೋಗಿ ವಿದ್ಯಾರ್ಥಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ: ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ – ತನಿಖೆಗಾಗಿ ಮೂರು ವಿಶೇಷ ತಂಡಗಳ ರಚನೆ
ಇವರು ಆಂಗ್ಲ ಭಾಷಾ ಪರೀಕ್ಷೆಯನ್ನು ಬರೆದಿದ್ದು, ಪರೀಕ್ಷೆಯ ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಕ್ಕಳ ಪೋಷಕರು ಮತ್ತು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು. ಪರೀಕ್ಷೆ ಒತ್ತಡದಿಂದ ಮಕ್ಕಳು ಓಡಿಹೋಗಿರಬಹುದು ಎಂದು ಮೊದಲು ಶಂಕಿಸಲಾಗಿತ್ತು
ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ವಿದ್ಯಾರ್ಥಿಗಳ ಶಾಲಾ ಬ್ಯಾಗ್ಗಳು ಹಾಗೂ ಸಮವಸ್ತ್ರ ಪತ್ತೆಯಾಗಿದ್ದವು. ನದಿಯಲ್ಲಿ ಹುಡುಕಾಟ ನಡೆಸಿದಾಗ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆಯಾಗಿದೆ. ಒಬ್ಬ ಮುಳುಗತೊಡಗಿದಾಗ ರಕ್ಷಿಸಲು ಹೋದ ಉಳಿದವರು ಮುಳುಗಿ ಸತ್ತಿರಬಹುದು ಎಂದು ಶಂಕಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.