ಐಎಎಸ್ ಅಧಿಕಾರಿ ಕೆ.ಶಿವರಾಂ ಬದುಕಿದ್ದಾರೆ, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ – ಅಳಿಯ ಪ್ರದೀಪ್ ಸ್ಪಷ್ಟನೆ
ಐಎಎಸ್ ಅಧಿಕಾರಿ ಕಮ್ ‘ಬಾ ನಲ್ಲೆ ಮಧುಚಂದ್ರಕೆ’ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕರಾಗಿ ನಟಿಸಿರುವ ಕೆ.ಶಿವರಾಮ್ ಅವರು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಸ್ಥಿತಿ ಚಿಂತಾಜನಕವಾಗಿದ್ದು, ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಶಿವರಾಮ್ ಅವರು ನಿಧನರಾಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡುತ್ತಿದ್ದು, ಇದು ಸತ್ಯಕ್ಕೆ ದೂರವಾದ ಮಾತು ಅಂತಾ ಶಿವರಾಮ್ ಅವರ ಅಳಿಯ ನಟ ಪ್ರದೀಪ್ ತಿಳಿಸಿದ್ದಾರೆ.
ಕಳೆದ 20 ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಶಿವರಾಮ್ ಅವರು ಕಾರ್ಡಿಯಕ್ ಅರೆಸ್ಟ್ ಆಗಿತ್ತು. ಆ ಬಳಿಕ ಅವರ ಬ್ರೈನ್ ಡೆಡ್ ಆಗಿದೆ. ಹೀಗಾಗಿ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಕನ್ನಡ ಬೋರ್ಡ್ ಅಳವಡಿಕೆಗೆ ಇದ್ದ ಗಡುವು ಮತ್ತೆ ವಿಸ್ತರಣೆ – ಯಾವಾಗ ಕೊನೆ ದಿನ?
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿರುವ ನಟ ಪ್ರದೀಪ್, ನನ್ನ ಮಾವ ಕೆ. ಶಿವರಾಂ ರವರು ಇನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡಿಯುತ್ತಿದ್ದಾರೆ. ದಯವಿಟ್ಟು ಯಾರೂ ಅಪಪ್ರಚಾರ ಮಾಡಬೇಡಿ ಎಂದು ವಿನಂತಿಸಿದ್ದಾರೆ.
ಆಸ್ಪತ್ರೆಗೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಮಾಜಿ ಸಚಿವ ಸೋಮಣ್ಣ ಹಲವು ಗಣ್ಯರು ಭೇಟಿ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯನವರು ಸಹ ಟ್ವೀಟ್ ಮೂಲಕ ಬೇಸರ ವ್ಯಕ್ತಪಡಿಸಿದ್ದಾರೆ.
ಸರ್ಕಾರಿ ಸೇವೆ, ಸಿನಿಮಾ ಕ್ಷೇತ್ರವಲ್ಲದೆ, ರಾಜಕೀಯದಲ್ಲೂ ಶಿವರಾಮ್ ಗುರುತಿಸಿಕೊಂಡಿದ್ದರು. 9ಕ್ಕೂ ಹೆಚ್ಚು ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಅಲ್ಲದೆ ರಾಜಕೀಯಕ್ಕೂ ಧುಮುಕಿ ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿದ್ದರು.