ಪಕ್ಷೇತರ ಅಭ್ಯರ್ಥಿಯಾಗಿ ಪುತ್ತಿಲ ಸ್ಪರ್ಧೆ – ಈ ಬಾರಿಯೂ ಭಾರೀ ಅಂತರದಿಂದ ಗೆದ್ದು ಬರ್ತೇನೆ ಎಂದು ಕಟೀಲ್ ಸವಾಲ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಬಾರಿಯ ಲೋಕಸಭಾ ಚುನಾವಣೆ ರಣರಂಗವಾಗೋದು ಪಕ್ಕಾ ಆಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡೋದಾಗಿ ಪುತ್ತಿಲ ಪರಿವಾರದ ನಾಯಕ ಅರುಣ್ ಕುಮಾರ್ ಪುತ್ತಿಲ ಘೋಷಣೆ ಮಾಡಿದ್ದಾರೆ. ಆದ್ರೆ ಪುತ್ತಿಲ ಸ್ಪರ್ಧೆಗೆ ಬಿಜೆಪಿಯ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಸವಾಲ್ ಹಾಕಿದ್ದಾರೆ.
ಇದನ್ನೂ ಓದಿ: ಬಿಜೆಪಿ ಬಾಗಿಲಲ್ಲಿ ನಿಂತ ಪುತ್ತಿಲಗೆ ಬಿಗ್ ಶಾಕ್ – ಯಾವುದೇ ಬೇಡಿಕೆ ಇಟ್ಟುಕೊಂಡು ಪಕ್ಷಕ್ಕೆ ಬರುವಂತಿಲ್ಲ ಎಂದು ಷರತ್ತು
ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇದ್ದು, ದಕ್ಷಿಣ ಕನ್ನಡ ಬಿಜೆಪಿಗೆ ಬಿಗ್ ಶಾಕ್ ಎದುರಾಗಿದೆ. ಅರುಣ್ ಕುಮಾರ್ ಪುತ್ತಿಲ ಲೋಕಸಭಾ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತಾ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ್ದಾರೆ. ಆದರೆ, ಪುತ್ತಿಲ ಅವರ ನಿರ್ಧಾರಕ್ಕೆ ಹಾಲಿ ಸಂಸದ ನಳೀನ್ ಕುಮಾರ್ ಕಟೀಲ್ ಸವಾಲ್ ಹಾಕಿದ್ದಾರೆ. ಪುತ್ತಿಲ ಪರಿವಾರ ಒಂದು ಸ್ವತಂತ್ರ ಸಂಸ್ಥೆ. ರಾಷ್ಟ್ರೀಯ ಪಕ್ಷ ಕಾಂಗ್ರೆಸ್ನ್ನು ಎದುರಿಸಿ ಬಿಜೆಪಿ ಲೋಕಸಭೆಯಲ್ಲಿ ಅತೀ ಹೆಚ್ಚು ಸೀಟು ಗೆದ್ದಿದೆ. ಪಕ್ಷಕ್ಕೆ ಎದುರಾಳಿಯ ಪ್ರಶ್ನೆಯೇ ಇಲ್ಲ. ಎಲ್ಲಾ ಸವಾಲುಗಳನ್ನು ಗೆದ್ದು ಗೆಲುವು ಸಾಧಿಸುತ್ತೇವೆ ಎಂದು ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಸವಾಲ್ ಹಾಕಿದ್ದಾರೆ. ಅಷ್ಟೇ ಅಲ್ಲ, ಪುತ್ತಿಲ ಘೋಷಣೆಗೆ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ. ಈ ಬಾರಿಯೂ ಭಾರೀ ಅಂತರದಿಂದ ಗೆದ್ದು ಬರ್ತೇನೆ ಎಂದು ತೊಡೆ ತಟ್ಟಿದ್ದಾರೆ.
ಪಕ್ಷೇತರ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಅರುಣ್ ಕುಮಾರ್ ಸ್ಪರ್ಧೆ ಮಾಡ್ತಾರೆ. ಬಿಜೆಪಿ ಸೇರ್ಪಡೆಗೆ ಹಲವು ಸುತ್ತಿನ ಮಾತುಕತೆ ನಡೆದಿತ್ತು. ಅದು ವಿಫಲವಾಗಿದೆ ಎಂದು ತಿಳಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಅರುಣ್ ಕುಮಾರ್ ಪುತ್ತಿಲ ಅವರು ಭೇಟಿ ಮಾಡಿ, ಬಿಜೆಪಿ ಸೇರ್ಪಡೆಗೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದರು. ಆದರೆ ಬಿಜೆಪಿ ನಾಯಕರು ಸಾಮಾನ್ಯ ಕಾರ್ಯಕರ್ತರಾಗಿ ಬಿಜೆಪಿ ಸೇರ್ಪಡೆಗೆ ಸೂಚಿಸಿದ್ದರಂತೆ. ಬಿಜೆಪಿ ನಾಯಕರೊಂದಿಗಿನ ಮಾತುಕತೆ ವಿಫಲ ಹಿನ್ನಲೆಯಲ್ಲಿ ಪಕ್ಷೇತರನಾಗಿ ಸ್ಪರ್ಧಿಸಲು ಪುತ್ತಿಲ ಪಕ್ಷೇತರವಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.