2.5 ಮಿಲಿಯನ್ ಡಾಲರ್ ಹಣ ಕೊಟ್ಟಿಲ್ಲ ಅಂದ್ರೆ ಕೆಫೆ ಮಾದರಿಯಲ್ಲೇ ಸ್ಪೋಟಿಸುತ್ತೇವೆ! – ಮತ್ತೊಂದು ಬಾಂಬ್ ಬೆದರಿಕೆಯ ಇ-ಮೇಲ್
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾ. 1 ರಂದು ಬಾಂಬ್ ಸ್ಫೋಟಗೊಂಡಿತ್ತು. ಈ ಅವಘಡದಿಂದಾಗಿ ಇಡೀ ಬೆಂಗಳೂರಿನ ಜನತೆ ಬೆಚ್ಚಿಬಿದ್ದಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನಲ್ಲಿ ಮತ್ತೆ ಬಾಂಬ್ ಸ್ಫೋಟಿಸುವ ಬೆದರಿಕೆ ಇಮೇಲ್ ಬಂದಿದೆ.
ಮುಖ್ಯಮಂತ್ರಿ, ಗೃಹ ಮಂತ್ರಿ, ಡಿಸಿಎಂ, ಮತ್ತು ಬೆಂಗಳೂರು ನಗರ ಪೊಲೀಸ್ ಕಮಿಷನರ್ಗೆ ಮಂಗಳವಾರ ಮಧ್ಯಾಹ್ನದ ವೇಳೆ ಬೆದರಿಕೆ ಇ-ಮೇಲ್ ಬಂದಿದೆ. ಈ ಇಮೇಲ್‌ನಲ್ಲಿ 2.5 ಮಿಲಿಯನ್ ಡಾಲರ್ ಕೊಟ್ಟಿಲ್ಲ ಅಂದರೆ ರಾಮೇಶ್ವರಂ ಕೆಫೆ ರೀತಿಯಲ್ಲೇ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ಈ ಇಮೇಲ್ ಬೆದರಿಕೆ ಸಂಬಂಧ ಸಿಸಿಬಿ ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ. Shahidkhan10786@protonmail.com ಎನ್ನುವ ಮೇಲ್ ಐಡಿಯಿಂದ ಬೆದರಿಕೆ ಬಂದಿದ್ದು, ಸದ್ಯ ಸಿಸಿಬಿ ಪೊಲೀಸರು ಈ ಇಮೇಲ್ ಬಗ್ಗೆ ತನಿಖೆ ನಡೆಸಿದ್ದಾರೆ.
ಇದನ್ನೂ ಓದಿ: ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್ – ಪ್ರತಿ ತಿಂಗಳು ಸರ್ಕಾರದಿಂದ 1,000 ರೂ.!
ರಾಮೇಶ್ವರಂ ಕೆಫೆ ಸ್ಫೋಟ ಬರೀ ಟ್ರೈಲರ್? ನೀವು ನಮಗೆ 2.5 ಮಿಲಿಯನ್ ಡಾಲರ್ ನೀಡದಿದ್ದರೆ, ನಾವು ಕರ್ನಾಟಕದಾದ್ಯಂತ ಬಸ್ಸುಗಳು, ರೈಲುಗಳು, ದೇವಸ್ಥಾನಗಳು, ಹೋಟೆಲ್ಗಳು ಮತ್ತು ಸಾರ್ವಜನಿಕ ಪ್ರದೇಶಗಳಲ್ಲಿ ಬಾಂಬ್ ಸ್ಫೋಟಿಸುತ್ತೇವೆ ಎಂದು ಇ-ಮೇಲ್ ನಲ್ಲಿ ಬರೆಯಲಾಗಿದೆ.
“ನಾವು ನಿಮಗೆ ಇನ್ನೊಂದು ಟ್ರೈಲರ್ ಅನ್ನು ತೋರಿಸಲು ಬಯಸುತ್ತೇವೆ. ನಾವು ಮುಂದೆ ಅಂಬಾರಿ ಉತ್ಸವ ಬಸ್‌ನ ಸ್ಫೋಟಿಸುತ್ತೇವೆ. ಅಂಬಾರಿ ಉತ್ಸವ ಬಸ್ ಸ್ಫೋಟದ ನಂತರ, ನಾವು ನಮ್ಮ ಬೇಡಿಕೆಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಎತ್ತುತ್ತೇವೆ. ನಿಮಗೆ ಕಳುಹಿಸಲಾದ ಮೇಲ್‌ನ ಸ್ಕ್ರೀನ್‌ಶಾಟ್‌ಗಳನ್ನು ಅಪ್‌ಲೋಡ್ ಮಾಡುತ್ತೇವೆ. ಸಾಮಾಜಿಕ ಮಾಧ್ಯಮದಲ್ಲಿ ನಾವು ಮುಂದಿನ ಸ್ಫೋಟದ ಬಗ್ಗೆ ಮಾಹಿತಿಯನ್ನು ಟ್ವೀಟ್ ಮಾಡುತ್ತೇವೆ ಎಂದು ಮೇಲ್ ನಲ್ಲಿ ಹೇಳಲಾಗಿದೆ.
ಬೆಂಗಳೂರಿನ ಹೆಚ್ಎಎಲ್ನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1ರಂದು ಬಾಂಬ್ ಸ್ಫೋಟಿಸಲಾಗಿದ್ದು ನಾಲ್ಕು ದಿನ ಕಳೆದರೂ ಸಹ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟ ಉಗ್ರನ ಸಣ್ಣ ಸುಳಿವು ಸಿಗುತ್ತಿಲ್ಲ. ಇನ್ನು ಎಫ್‌ಎಸ್‌ಎಲ್ ತಂಡ, ಸಿಸಿಬಿ ಪೊಲೀಸರು, ಇನ್ನೊಂದೆಡೆ NIA ಅಧಿಕಾರಿಗಳೂ ಫೀಲ್ಡ್‌ಗಳಿಂದು ಶಂಕಿತ ಉಗ್ರನ ಬೆನ್ನತ್ತಿದ್ದಾರೆ.