ರಾಮೇಶ್ವರಂ ಕೆಫೆ ಬ್ಲಾಸ್ಟ್ ಕೇಸ್ – ಬಾಂಬರ್ ಕರ್ನಾಟಕದ ಮೂಲದವನೇ!
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡು 12 ದಿನಗಳೇ ಕಳೆದಿವೆ. ಆದರೂ ಆರೋಪಿಯನ್ನು ಪತ್ತೆ ಮಾಡಲು ಸಾಧ್ಯ ಆಗುತ್ತಿಲ್ಲ. ಇದೀಗ ಈ ಪ್ರಕರಣದ ಬಾಂಬರ್ ಕರ್ನಾಟಕ ಮೂಲದವನೇ ಎಂಬ ತೀರ್ಮಾನಕ್ಕೆ ರಾಷ್ಟ್ರೀಯ ತನಿಖಾ ದಳ ಬಂದಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ನಾನು ಬರ್ತೀನಿ, ಸಿಎಂ ಆಗ್ತೀನಿ – ಶಾಸಕ ಬಸನಗೌಡ ಪಾಟೀಲ್ ಸ್ಫೋಟಕ ಹೇಳಿಕೆ
ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣವನ್ನು ಎನ್‌ಐಎ ತನಿಖೆ ನಡೆಸುತ್ತಿದೆ. ಎನ್‌ಐಎ ತನಿಖೆ ವೇಳೆ ಬಾಂಬರ್ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರಯಾಣ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಆರೋಪಿ ಕರ್ನಾಟಕ ಮೂಲದವನೇ ಎಂಬ ತೀರ್ಮಾನಕ್ಕೆ ಎನ್‌ಐಎ ಅಧಿಕಾರಿಗಳು ಬಂದಿದ್ದಾರೆ. ಶಂಕಿತನಿಗೆ ಬೆಂಗಳೂರು ಪರಿಚಯ ಚೆನ್ನಾಗಿ ಇತ್ತು. ಆತ ಯಾವ ಸಂಘಟನೆಗೆ ಸೇರಿದವನು ಎಂಬುದೂ ಎನ್ಐಎಗೆ ಗೊತ್ತಾಗಿದೆ. ಶಂಕಿತ ಈ ಹಿಂದೆ ಶಿವನ ಸಮುದ್ರ ಹಾಗೂ ಗುಡ್ಲುಪೇಟೆ, ಕೃಷ್ಣಗಿರಿ ಅರಣ್ಯ ಪ್ರದೇಶದಲ್ಲಿ ಟ್ರೈನಿಂಗ್ ನಡೆಸಿದ್ದಾನೆ. ಟ್ರಯಲ್ ಬಾಂಬ್ ಬ್ಲಾಸ್ಟ್ ಮಾಡಿರುವ ಮತ್ತು ಸರ್ವೈವಲ್ ಕ್ಯಾಂಪ್ಗಳನ್ನು ನಡೆಸಿರುವ ಬಗ್ಗೆ ತನಿಖೆ ವೇಳೆ ಮಾಹಿತಿ ದೊರೆತಿದೆ ಎಂದೂ ಮೂಲಗಳು ಹೇಳಿವೆ.
ಅರೋಪಿ ಬೆಂಗಳೂರಿಗೆ ಪ್ರವೇಶಿಸಿದ್ದನ್ನು ಕೂಡ ಪೊಲೀಸರು ಪತ್ತೆ ಮಾಡಿದ್ದಾರೆ. ಶಂಕಿತ ಸ್ಫೋಟದ ದಿನವೇ ಬೆಂಗಳೂರು ಬಂದಿದ್ದಾನೆ. ಚೆನ್ನೈಯಿಂದ ತಿರುಪತಿ ಗೆ ರೈಲಿನಲ್ಲಿ ತೆರಳಿ ಅಲ್ಲಿಂದ ಬಸ್ ಮೂಲಕ ಬಂದಿದ್ದಾನೆ. ಕೆಅರ್ಪುರ ಬಸ್ ನಿಲ್ದಾಣದಲ್ಲಿ ಇಳಿದು ನಂತರ ಆತ ಮಹದೇವಪುರದ ಗ್ರಫೇಡ್ ಇಂಡಿಯಾ ಸರ್ಕಲ್ (ಬಸ್ ನಿಲ್ದಾಣ) ಬಂದು ಬಸ್ ಬದಲಾವಣೆ ಮಾಡಿದ್ದಾನೆ. ಬಳಿಕ ಬ್ರೂಕ್ ಫೀಲ್ಡ್ ಕಡೆಗಿನ ಬಸ್ ಏರಿ ರಾಮೇಶ್ವರ ಕೆಫೆಗೆ ಆಗಮಿಸಿದ್ದಾನೆ ಎಂಬುದು ಈವರೆಗಿನ ತನಿಖೆಯಿಂದ ಗೊತ್ತಾಗಿದೆ ಎನ್ನಲಾಗಿದೆ.
ಈ ಹಿಂದೆ ಇದೇ ಬಾಂಬ್ ಅನ್ನು ಕುಕ್ಕರ್ ಮತ್ತು ಸ್ಟೀಲ್ ಬಾಕ್ಸ್ನಲ್ಲಿ ಮಾಡಲಾಗುತ್ತಿತ್ತು. ಆದರೆ, ಶಂಕಿತನು ಅತ್ಯಾಧುನಿಕವಾಗಿ ಸಿಲ್ವರ್ ಪೇಪರ್ ಮತ್ತು ಬ್ಯಾಗ್ ಮೂಲಕ ಸಿದ್ಧಪಡಿಸಿರುವ ಬಗ್ಗೆಯೂ ತನಿಖಾಧಿಕಾರಿಗಳಿಗೆ ಮಾಹಿತಿ ದೊರೆತಿದೆ.