ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನ

ಭಾರತೀಯ ವಾಯುಪಡೆಯ ತೇಜಸ್ ಯುದ್ಧ ವಿಮಾನ ಪತನವಾಗಿದೆ. ರಾಜ್ಯಸ್ಥಾನದ ಜೈಸಲ್ಮೇರ್ ಎಂಬಲ್ಲಿ ಯುದ್ಧ ವಿಮಾನ ಪತನವಾಗಿದ್ದು, ಪೈಲಟ್ಗಳು ಸುರಕ್ಷಿತವಾಗಿದ್ದಾರೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಡಿಕೆ ಸುರೇಶ್ ವಿರುದ್ಧ ಡಾ.ಮಂಜುನಾಥ್ ಕಣಕ್ಕಿಳಿದರೆ ಏನಾಗುತ್ತೆ? – ಅಳಿಯ ಸ್ಪರ್ಧೆ ಮಾಡೋದು ದೇವೇಗೌಡರಿಗೆ ಇಷ್ಟವಿಲ್ಲ ಏಕೆ..?
ಭಾರತ್ ಶಕ್ತಿ ತರಬೇತಿ ವೇಳೆ ಫೈಟರ್ ಜೆಟ್ ಜೈಸಲ್ಮೇರ್ನಲ್ಲಿ ಪತನಗೊಂಡಿದೆ. ಫೈಟರ್ ಜೆಟ್ ಪತನವಾಗಿರುವ ಘಟನೆ ಜವಾಹರ್ ಕಾಲೋನಿ ಬಳಿ ನಡೆದಿದೆ. ಮಧ್ಯಾಹ್ನ 2 ಗಂಟೆಗೆ ಫೈಟರ್ ಜೆಟ್ ಹಾಸ್ಟೆಲ್ ಮೇಲ್ಛಾವಣಿಯ ಮೇಲೆ ಬಿದ್ದು ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಜಿಗಿದು ತಮ್ಮ ಪ್ರಾಣ ಉಳಿಸಿಕೊಂಡರು.
ಪೈಲಟ್ ಗಳು ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ಹಾಗೂ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಅಪಘಾತಕ್ಕೆ ಕಾರಣವೇನು ಎಂದು ಕಂಡುಹಿಡಿಯಲಾಗುತ್ತಿದೆ. ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆಗೆ ಸೇನೆ ಆದೇಶಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.