ರಾಮೇಶ್ವರಂ ಬಾಂಬ್ ಬ್ಲಾಸ್ಟ್ ಪ್ರಕರಣ- ಬಳ್ಳಾರಿಯಲ್ಲಿ ಓರ್ವ ವಶಕ್ಕೆ
ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ಅಧಿಕಾರಿಗಳು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಶಂಕಿತ ಉಗ್ರನನ್ನು ಪತ್ತೆ ಹಚ್ಚಲು ರಾಜ್ಯದ ಮೂಲೆ ಮೂಲೆಯಲ್ಲಿ ಶೋಧ ನಡೆಸುತ್ತಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: ಉಡಾವಣೆಯಾಗಿ ಕೆಲವೇ ಸೆಕೆಂಡುಗಳಲ್ಲಿ ಖಾಸಗಿ ಉಪಗ್ರಹ ಸ್ಫೋಟ
ಬಾಂಬ್ ಸ್ಟೋಟಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ತನಿಖೆ ಚುರುಕುಗೊಂಡಿದೆ. ಕ್ಷಣ ಕ್ಷಣಕ್ಕೂ ಒಂದೊಂದೇ ಸ್ಫೋಟಕ ವಿಚಾರಗಳು ಬಯಲಾಗುತ್ತಲೇ ಇದೆ. ಇದೀಗ ಬುಧವಾರ ಮುಂಜಾನೆ 4 ಗಂಟೆಗೆ ಶಬ್ಬಿರ್ ಎಂಬವನನ್ನ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಬಳಿಕ ಹೆಚ್ಚಿನ ವಿಚಾರಣೆಗೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ರಾಮೇಶ್ವರಂ ಬಾಂಬ್ ಪ್ರಕರಣಕ್ಕೂ ಯುವಕನಿಗೂ ಇದ್ಯಾ ಲಿಂಕ್ ಅನುಮಾನದ ಮೇಲೆ ಶಬ್ಬಿರ್ ನನ್ನು ತನಿಖೆಗೆ ಒಳಪಡಿಸಲಾಗಿದೆ.
ಶಂಕಿತ ಉಗ್ರ ಬಳ್ಳಾರಿಗೆ ಬಂದ ಸಮಯದಲ್ಲಿ ಕೌಲ್ ಬಜಾರ್ ನಿವಾಸಿ ಶಬ್ಬಿರ್ ನನ್ನು ಭೇಟಿ ಮಾಡಿದ್ದ. ಅಲ್ಲದೇ ಹೈದರಾಬಾದ್ಗೆ ಹೋಗಲು ಆತನಿಗೆ ಸಹಾಯ ಮಾಡಿದ್ದ ಎನ್ನುವ ಆರೋಪದ ಮೇಲೆ ಅಧಿಕಾರಿಗಳು ಶಬ್ಬಿರ್ ನನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಶಂಕಿತ ಉಗ್ರ ಹೈದರಾಬಾದ್ನಲ್ಲಿ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಮಾ.1 ರಂದು ವೈಟ್ಫೀಲ್ಡ್ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿತ್ತು. ಈ ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದರು. ಬಳಿಕ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಲಾಗಿದ್ದು, ಶಂಕಿತ ಉಗ್ರನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಇತ್ತ ಘಟನೆ ನಡೆದು ವಾರದ ಬಳಿಕ ಅಂದರೆ ಮಹಾಶಿವರಾತ್ರಿಯಂದು ಕೆಫೆಯನ್ನು ರೀ ಓಪನ್ ಮಾಡಲಾಗಿತ್ತು.