ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲು
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಾಜಿ ಸಿಎಂ ವಿರುದ್ಧ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಸಾವು.. ನೋವು.. ಅಶುಭ.. ಬರೀ ಕಷ್ಟ ನಷ್ಟ! – ಕಾಗೆ ತಲೆ ಮೇಲೆ ಕುಕ್ಕಿದ್ರೆ ಅಪಶಕುನನಾ?
ಕಳೆದ ಫೆಬ್ರವರಿಯಲ್ಲಿ ಬಾಲಕಿ ಮೇಲೆ ಬಿಎಸ್ವೈ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಸಂತ್ರಸ್ತೆಯ ತಾಯಿ ಗುರುವಾರ ಸಂಜೆ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ದೂರು ನೀಡಿದ್ದಾರೆ. ದೂರಿನನ್ವಯ ಸದಾಶಿವನಗರ ಪೊಲೀಸ್ ಠಾಣೆ ಪೊಲೀಸರು ಗುರುವಾರ ಮಧ್ಯರಾತ್ರಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಫೆಬ್ರವರಿ 2ನೇ ತಾರೀಖು, ಬಿಎಸ್ ಯಡಿಯೂರಪ್ಪ ಅವರ ನಿವಾಸದಲ್ಲಿ ಘಟನೆ ನಡೆದಿದೆ ಎನ್ನಲಾಗಿದೆ. ಸಹಾಯ ಕೇಳಲು ಹೋಗಿದ್ದಾಗ ತಮ್ಮ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಂತ್ರಸ್ತೆಯ ತಾಯಿ ಎಫ್ಐಆರ್ನಲ್ಲಿ ತಿಳಿಸಿದ್ದಾರೆ. ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಡ ನಡೆಸುತ್ತಿರುವ ಯಡಿಯೂರಪ್ಪ ಅವರು ಚುನಾವಣಾ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ. ಈ ನಡುವೆ ಪೋಕ್ಸೋ ಪ್ರಕರಣ ದಾಖಲಾಗಿರುವುದು ಯಡಿಯೂರಪ್ಪ ಅವರು ಸಂಕಷ್ಟಕ್ಕೆ ಸಿಲುಕಿಸಿದಂತಾಗಿದೆ. ಬಂಧನದ ಭೀತಿಯೂ ಎದುರಾಗಿದೆ.
ಇನ್ನು ಈ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಬಿಸಿನೆಸ್ ಮ್ಯಾನ್ಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದವೇ ಸಂತ್ರಸ್ತ ಬಾಲಕಿಯ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.