ಬೆಂಗಳೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ – ಸ್ಥಳೀಯರಲ್ಲಿ ಆತಂಕ

ಬೆಂಗಳೂರಿನ ಶಾಲೆ ಆವರಣದಲ್ಲಿ ಸ್ಫೋಟಕಗಳು ಪತ್ತೆ – ಸ್ಥಳೀಯರಲ್ಲಿ ಆತಂಕ

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಪ್ರಕರಣದಿಂದಾಗಿ ನಗರದ ಜನರು ಭೀತಿಗೆ ಒಳಗಾಗಿದ್ದಾರೆ. ಇದೀಗ ಈ ಘಟನೆ ಮಾಸುವ ಮುನ್ನವೇ ಬೆಂಗಳೂರಿನ ಶಾಲೆಯೊಂದರಲ್ಲಿ ಸ್ಪೋಟಕ ವಸ್ತುಗಳು ಪತ್ತೆಯಾಗಿದೆ.

ಬೆಂಗಳೂರಿನ ಬೆಳ್ಳಂದೂರಿನ ಪ್ರಕ್ರಿಯಾ ಶಾಲೆ ಮುಂಬಾಗದ ಖಾಲಿ ಜಮೀನಿನಲ್ಲಿ ಸ್ಪೋಟಕಗಳು ಪತ್ತೆಯಾಗಿದೆ. ಜಿಲೆಟಿನ್ ಕಡ್ಡಿ, ಡಿಟೋನೇಟರ್​​ ಹಾಗೂ ಇತರ ಕೆಲವು ಸ್ಫೋಟಕಗಳು ಶಾಲೆ ಮುಂಭಾಗ ಪತ್ತೆಯಾಗಿದ್ದು, ಆತಂಕ ಸೃಷ್ಟಿಸಿದೆ.

ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕಾಗಿ ಹೆಲಿಕಾಪ್ಟರ್‌ಗಳಿಗೆ ಫಿಲ್‌ ಡಿಮ್ಯಾಂಡ್‌ – ಅಬ್ಬಬ್ಬಾ  ಬಾಡಿಗೆ ಇಷ್ಟೊಂದಾ?

ಸ್ಫೋಟಕಗಳನ್ನು ಟ್ರಾಕ್ಟರ್ ಒಂದರಲ್ಲಿ ಇಡಲಾಗಿತ್ತು. ಮೆಲ್ನೋಟಕ್ಕೆ ಕಟ್ಟಡ ನಿರ್ಮಾಣ ಮಾಡುವ ಜಾಗದಲ್ಲಿ ಬಂಡೆಗಳ ಸ್ಫೋಟಿಸಲು ಸ್ಫೋಟಕಗಳನ್ನು ತಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಆದರೆ, ಅಕ್ರಮವಾಗಿ ಸ್ಫೋಟಕ ವಸ್ತು ಸಂಗ್ರಹಿಸಲಾಗಿದೆ.

ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಕ್ರಮವಾಗಿ ಸ್ಪೋಟಕ ವಸ್ತುಗಳನ್ನು ಸಂಗ್ರಹ ಮಾಡಿದ್ದಾರೆ ಎಂದು ಪೊಲೀಸರು ಸ್ವಯಂಪ್ರೇರಿತರಾಗಿ ಕೇಸ್ ದಾಖಲು ಮಾಡಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Shwetha M