ಬಿಜೆಪಿ-ಕೆಆರ್‌ಪಿಪಿ ವಿಲೀನ – ಶಾಸಕ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರ್ಪಡೆ!
ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಮಾತ್ರ ಬಾಕಿ ಉಳಿಸಿದೆ. ಚುನಾವಣೆಗೆ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡುತ್ತಿದೆ. ಹಲವು ಲೋಕಸಭಾ ಕ್ಷೇತ್ರಗಳಲ್ಲಿ ಈಗಾಗಲೇ ಅಭ್ಯರ್ಥಿಗಳ ಘೋಷಣೆ ಕೂಡ ಆಗಿದೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಕೆಆರ್‌ಪಿಪಿ ಪಕ್ಷದ ಸ್ಥಾಪಕ ಶಾಸಕ ಜನಾರ್ದನ ರೆಡ್ಡಿ ಸೋಮವಾರ ಬಿಜೆಪಿಗೆ ಮರು ಸೇರ್ಪಡೆಯಾಗಿದ್ದಾರೆ.
ಇದನ್ನೂ ಓದಿ: ಅಂದು ಬಾಲನಟಿ.. ಇಂದು ಸೀರಿಯಲ್ ನಾಯಕಿ! – ಬ್ರಹ್ಮಗಂಟು ಹಾಕಲು ಬಂದವಳು ಯಾರು?
ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆದ ಕೆಆರ್‌ಪಿಪಿ ಪಕ್ಷ ವಿಲೀನ ಕಾರ್ಯಕ್ರಮದಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಲಕ್ಷ್ಮಿ ಸೇರಿ ಕೆಆರ್‌ಪಿಪಿ ಪಕ್ಷದ ಎಲ್ಲ ಪದಾಧಿಕಾರಿಗಳು ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪಕ್ಷದ ಶಾಲು ಹೊದಿಸಿ, ಭಾವುಟ ನೀಡಿ ಸ್ವಾಗತಿಸಿದರು. ಅಲ್ಲದೇ ಪಕ್ಷ ನಿಮ್ಮನ್ನು ಗೌರವಯುತವಾಗಿ ನಡೆಸಿಕೊಳ್ಳಲಿದೆ ಎಂದು ಭರವಸೆಯನ್ನೂ ನೀಡಿದರು. ಈ ವೇಳೆ ಜನಾರ್ದನ ರೆಡ್ಡಿ, ಯಡಿಯೂರಪ್ಪ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮಾಜಿ ಸಚಿವರಾದ ಶ್ರೀರಾಮುಲು, ಆನಂದ್ ಸಿಂಗ್, ಸಿಟಿ ರವಿ, ಅಶ್ವಥ್‌ನಾರಾಯಣ ಅವರ ಉಪಸ್ಥಿತಿಯಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದಾರೆ.