ಲೋಕಸಭೆ ಚುನಾವಣೆ – ಏಪ್ರಿಲ್ 26 ಹಾಗೂ ಮೇ 7ರಂದು ಕರ್ನಾಟಕದಲ್ಲಿ ಸಾರ್ವತ್ರಿಕ ರಜೆ ಘೋಷಣೆ
ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದ್ದು, ಕರ್ನಾಟಕದಲ್ಲಿ ಏಪ್ರಿಲ್ 26 ಹಾಗೂ ಮೇ 7 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಈ ಹಿನ್ನಲೆ ಮತದಾನ ನಡೆಯುವ ಎರಡು ದಿನವೂ ಸಾರ್ವತ್ರಿಕ ರಜೆಯನ್ನು ಘೋಷಿಸಲಾಗಿದ್ದು, ಜೊತೆಗೆ ಸರ್ಕಾರಿ ನೌಕರರಿಗೆ ವೇತನ ಸಹಿತ ರಜೆಯನ್ನು ಘೋಷಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.
ಇದನ್ನೂ ಓದಿ: ಹೆಚ್ಡಿಕೆಯ ಹೃದಯ ಶಸ್ತ್ರಚಿಕಿತ್ಸೆಯನ್ನು ಅನುಮಾನಿಸಿದ ‘ಕೈ’ ಶಾಸಕ – ತಂದೆ ಆಪರೇಷನ್ ವಿಚಾರ ಮಾತನಾಡುತ್ತ ನಿಖಿಲ್ ಭಾವುಕ
ಕರ್ನಾಟಕದಲ್ಲಿ ಮೊದಲ ಹಂತದ ಮತದಾನ ಏಪ್ರಿಲ್ 26 ಹಾಗೂ 2ನೇ ಹಂತದ ಮತದಾನ ಮೇ 7 ರಂದು ನಡೆಯಲಿದೆ. ಈ ದಿನಗಳಂದು ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಶಾಲಾ-ಕಾಲೇಜುಗಳು, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಹಾಗೂ ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಆಗಿ ಹಾಗೂ ದಿನಗೂಲಿ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ವೇತನ ಸಹಿತ ರಜೆ ಘೋಷಣೆ ಮಾಡಿರುವುದಾಗಿ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇನ್ನು ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರೆ ಸಂಸ್ಥೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪುಜಾಪತಿನಿಧಿ ಕಾಯ್ದೆ 1951 ಕಲಂ 135 ಬಿ ಅಡಿಯಲ್ಲಿನ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ವೇತನ ಸಹಿತ ರಜೆ ನೀಡಲು ಪ್ರಕಟಣೆ ಮೂಲಕ ಆದೇಶಿಸಿದ್ದಾರೆ. ಜೂನ್ 4ರಂದು ಫಲಿತಾಂಶ ಪ್ರಕಟವಾಗಲಿದೆ. ರಾಜ್ಯದಲ್ಲಿ ಎರಡು ಮತ್ತು ಮೂರನೇ ಹಂತದಲ್ಲಿ ತಲಾ 14 ಜಿಲ್ಲೆಗಳಂತೆ ಎರಡು ಹಂತಗಳಲ್ಲಿ ಅಂದರೆ ಏಪ್ರಿಲ್ 26 ಮತ್ತು ಮೇ 7ರಂದು ಮತದಾನ ನಡೆಯಲಿದೆ.
ಏಪ್ರಿಲ್ 26ರಂದು ಮತದಾನ ನಡೆಯುವ ಕ್ಷೇತ್ರಗಳ ವಿವರ ಇಲ್ಲಿದೆ.
- ಉಡುಪಿ-ಚಿಕ್ಕಮಗಳೂರು
- ಹಾಸನ
- ದಕ್ಷಿಣ ಕನ್ನಡ
- ಚಿತ್ರದುರ್ಗ
- ತುಮಕೂರು
- ಮಂಡ್ಯ
- ಮೈಸೂರು-ಕೊಡಗು
- ಚಾಮರಾಜನಗರ
- ಬೆಂಗಳೂರು ಗ್ರಾಮಾಂತರ
- ಬೆಂಗಳೂರು ಉತ್ತರ
- ಬೆಂಗಳೂರು ಕೇಂದ್ರ
- ಬೆಂಗಳೂರು ದಕ್ಷಿಣ
- ಚಿಕ್ಕಬಳ್ಳಾಪುರ
- ಕೋಲಾರ
ಮೇ 7ರಂದು ಚುನಾವಣೆ ನಡೆಯಲಿರುವ ಕ್ಷೇತ್ರಗಳು
- ಚಿಕ್ಕೋಡಿ
- ಬೆಳಗಾವಿ
- ಬಾಗಲಕೋಟೆ
- ಬಿಜಾಪುರ
- ಕಲಬುರಗಿ
- ರಾಯಚೂರು
- ಬೀದರ್
- ಕೊಪ್ಪಳ
- ಬಳ್ಳಾರಿ
- ಹಾವೇರಿ
- ಧಾರವಾಡ
- ಉತ್ತರ ಕನ್ನಡ
- ದಾವಣಗೆರೆ
- ಶಿವಮೊಗ್ಗ