ಮೋದಿ ಪ್ರಧಾನಿ ಅಲ್ಲ.. ಪ್ರಚಾರ ಮಂತ್ರಿ ಎಂದ ಪ್ರಿಯಾಂಕ್‌ ಖರ್ಗೆ – ಯುವತಿಗೆ ಕಿಸ್‌ ಕೊಟ್ಟ ಬಿಜೆಪಿ ಅಭ್ಯರ್ಥಿ!

ಮೋದಿ ಪ್ರಧಾನಿ ಅಲ್ಲ.. ಪ್ರಚಾರ ಮಂತ್ರಿ ಎಂದ ಪ್ರಿಯಾಂಕ್‌ ಖರ್ಗೆ – ಯುವತಿಗೆ ಕಿಸ್‌ ಕೊಟ್ಟ ಬಿಜೆಪಿ ಅಭ್ಯರ್ಥಿ!

ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರಧಾನಿ ಮೋದಿ ವಿರುದ್ಧ ನಿರಂತರ ವಾಗ್ದಾಳಿ ನಡೆಸ್ತಾನೆ ಇದ್ದಾರೆ. ಗುರುವಾರಷ್ಟೇ ಮೋದಿ ಸುಮ್ಮನೇ ರಾಜ್ಯಕ್ಕೆ ಬಂದು ಹೋಗುವುದಲ್ಲ. ಕರ್ನಾಟಕಕ್ಕೆ, ಕನ್ನಡಿಗರಿಗೆ ಏನು ಕೊಡುಗೆ ಕೊಟ್ಟಿದ್ದಾರೆ ಎಂಬುದನ್ನು ಹೇಳಲಿ ಎಂದು ಸವಾಲು ಹಾಕಿದ್ದರು. ಇದೀಗ ಮೋದಿ ಪ್ರಧಾನಿ ಅಲ್ಲ.. ಪ್ರಚಾರ ಮಂತ್ರಿ, ಇವೆಂಟ್ ಮ್ಯಾನೇಜ್ಮೆಂಟ್ ನಲ್ಲಿ ಪರಿಣತರಾಗಿದ್ದಾರೆ ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯವಾಡಿದ್ದಾರೆ. ಪ್ರಧಾನಿ ಗೇಮಿಂಗ್ ಉದ್ಯಮಗಳಿಗೆ 2 ಲಕ್ಷ ಕೋಟಿ ಟ್ಯಾಕ್ಸ್ ಹಾಕಿದ್ದಾರೆ. ಹೀಗಾಗಿ ಗೇಮಿಂಗ್ ಕಂಪನಿಗಳ ಬಂಡವಾಳ ವಿದೇಶಕ್ಕೆ ಹೋಗ್ತಾ ಇದೆ. ಚುನಾವಣೆ ಬಗ್ಗೆ ಸರ್ವೆ ಬಂದಿದೆ..  67 % ಯುವಕರಿಗೆ ಉದ್ಯೋಗ ಸಿಗೋದು ಕಷ್ಟ ಅನ್ನಿಸುತ್ತಿದೆ.‌ ಕಳೆದ ಹತ್ತು ವರ್ಷದಲ್ಲಿ ಯುವಕರಿಗೆ ಉದ್ಯೋಗ ಸಿಗಲ್ಲ ಅಂತ ಗೊತ್ತಾಗಿದೆ ಅಂತಾ ಕಿಡಿಕಾರಿದ್ದಾರೆ.

ಶೋಭಾ ಕರಂದ್ಲಾಜೆಗೆ ಭಿನ್ನಮತದ ಬಿಸಿ

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.. ಆದ್ರೆ ಇದೀಗ ಶೋಭಾ ಕರಂದ್ಲಾಜೆಗೆ ಭಿನ್ನಮತದ ಬಿಸಿ ತಟ್ಟತೊಡಗಿದೆ. ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಅವರು ಲಿಂಗಾಯತ ಸಮುದಾಯವನ್ನು ಕಡೆಗಣಿಸುತ್ತಿದ್ದಾರೆ ಎಂದು ಆರೋಪಸಿ ಈ ಸಮುದಾಯದ ನಾಯರೊಬ್ಬರ ಮನೆಯಲ್ಲಿ ಗುಪ್ತ ಸಭೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನು ಎರಡು ಮೂರು ದಿನಗಳಲ್ಲಿ ನಾಯಕರು ಪತ್ರಿಕಾಗೋಷ್ಠಿಯನ್ನು ಕರೆದು ತಮ್ಮ ಮುಂದಿನ ನಿರ್ಧಾರವನ್ನು ಘೋಷಣೆ ಮಾಡುವ ಸಾಧ್ಯತೆಯೂ ಇದೆ. ಈಗಾಗಲೇ ಶೋಭಾ ಕರಂದ್ಲಾಜೆ ವಿರುದ್ಧ ಎಸ್‌ಟಿ ಸೋಮಶೇಖರ್ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಮತ್ತೊಂದು ಕಡೆಯಲ್ಲಿ ಡಿವಿ ಸದಾನಂದ ಗೌಡ ಮೌನಕ್ಕೆ ಶರಣಾಗಿದ್ದಾರೆ. ಇವೆಲ್ಲವೂ ಚುನಾವಣೆಯ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.

ಯುವತಿಗೆ ಕಿಸ್‌ ಕೊಟ್ಟ ಬಿಜೆಪಿ ಅಭ್ಯರ್ಥಿ

ಲೋಕಸಭಾ ಚುನಾವಣೆಗಾಗಿ ಭರ್ಜರಿ ಪ್ರಚಾರ ನಡೆಯುತ್ತಿದೆ. ಈಗಾಗಲೇ ಅಭ್ಯರ್ಥಿಗಳು ಎಸಿ ಕಾರಿನಿಂದ ಇಳಿದು ಗಲ್ಲಿ ಗಲ್ಲಿ ಸುತ್ತುತ್ತಾ ಮತಯಾಚನೆ ಮಾಡುತ್ತಿದ್ದಾರೆ. ಹೀಗೆ ಮತಯಾಚಣೆ ಮಾಡುತ್ತಿದ್ದ ಸಂದರ್ಭದಲ್ಲಿ  ಅಭ್ಯರ್ಥಿಯೊಬ್ಬರು ಎಡವಟ್ಟು ಮಾಡಿಕೊಂಡಿದ್ದಾರೆ. ಮಾಲ್ಡಾ ಉತ್ತರ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ 2ನೇ ಬಾರಿಗೆ ಸ್ಪರ್ಧಿಸುತ್ತಿರುವ ಬಿಜೆಪಿ ಸಂಸದ ಖಗೇನ್ ಮುರ್ಮು ಮನೆ ಮನೆಗೆ ತೆರಳಿ ಪ್ರಚಾರ ಮಾಡ್ತಿದ್ದ ವೇಳೆ ಮಹಿಳೆಯೊಬ್ಬರ ಕೆನ್ನೆಗೆ ಮುತ್ತು ಕೊಟ್ಟಿದ್ದಾರೆ. ಸದ್ಯ ಈ ಪೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಈ ಬೆನ್ನಲ್ಲೇ ಟಿಎಮ್​ಸಿ ನಾಯಕರು ಸೇರಿದಂತೆ ಪ್ರತಿಪಕ್ಷಗಳ ನಾಯಕರು ಖಗೇನ್ ಮುರ್ಮು ನಡೆಯನ್ನ ಖಂಡಿಸಿದ್ದಾರೆ.

Shwetha M