ನೀರು ಪೂರೈಕೆ ಮಾಡುವಲ್ಲಿ ವಿಫಲವಾದ ಸರ್ಕಾರ – ಗಂಡ-ಹೆಂಡತಿ ಒಟ್ಟಿಗೆ ಸ್ನಾನ ಮಾಡಿ ಎಂದ ಮೇಯರ್‌ !

ನೀರು ಪೂರೈಕೆ ಮಾಡುವಲ್ಲಿ ವಿಫಲವಾದ ಸರ್ಕಾರ – ಗಂಡ-ಹೆಂಡತಿ ಒಟ್ಟಿಗೆ ಸ್ನಾನ ಮಾಡಿ ಎಂದ ಮೇಯರ್‌ !

ಈ ಭಾರಿ ಮಳೆಯ ಕೊರತೆ ಉಂಟಾಗಿದೆ. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಬರಗಾಲದ ಸ್ಥಿತಿ ನಿರ್ಮಾಣವಾಗಿದೆ. ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದೆ. ಇದೀಗ ಕೊಲಂಬಿಯಾ ದೇಶದ ರಾಜಧಾನಿ ಬಗೋಟಾದಲ್ಲಿ ಕೂಡ ನೀರಿನ ಅಭಾವ ಉಂಟಾಗಿದೆ. ಪರಿಸ್ಥಿತಿ ಕೈಮೀರಿ ಹೋಗುತ್ತಿದೆ. ಈ ಬೆನ್ನಲ್ಲೇ ಅಲ್ಲಿನ ಸರ್ಕಾರ ವಿಲಕ್ಷಣ ಆದೇಶವೊಂದನ್ನು ನೀಡಿದೆ. ಗಂಡ ಹೆಂಡತಿ ಒಟ್ಟಿಗೆ ಸ್ನಾನ ಮಾಡಿ ಅಂತಾ ತಿಳಿಸಿದೆ.

ಇದನ್ನೂ ಓದಿ: ಅಬ್ಬಬ್ಬಾ.. ಇದೆಂಥಾ ಹುಚ್ಚು ಅಭಿಮಾನ – ಮಕ್ಕಳ ಸ್ಕೂಲ್ ಫೀಸ್ ಹಣದಲ್ಲಿ ಐಪಿಎಲ್ ಟಿಕೆಟ್ ಖರೀದಿಸಿದ್ದ ಧೋನಿ ಫ್ಯಾನ್!

ಹೌದು, ಅಚ್ಚರಿಯಾದ್ರು ಸತ್ಯ. ಬಗೋಟಾದಲ್ಲಿ ಕುಡಿಯು ನೀರಿಗೂ ಹಾಹಾಕಾರ ಉಂಟಾಗಿದೆ. ಜನರಿಗೆ ಸೂಕ್ತಕಾಲದಲ್ಲಿ ನೀರು ಪೂರೈಕೆ ಮಾಡಲು ಕೂಡ ಅಲ್ಲಿನ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಇದರ ಬೆನ್ನಲ್ಲಿಯೇ ಬೊಗೋಟಾ ಮೇಯರ್‌  ಕಾರ್ಲೋಸ್ ಫೆರ್ನಾಂಡೊ ಗ್ಯಾಲನ್ ನಗರದ ಜನರಿಗೆ ವಿಚಿತ್ರ ಸಲಹೆಗಳನ್ನು ನೀಡಿದ್ದಾರೆ. ಅದರಂತೆ ನೀರು ಉಳಿಸುವ ನಿಟ್ಟಿನಲ್ಲಿ ನಗರದಲ್ಲಿ ವಾಸವಾಗಿರುವ ದಂಪತಿಗಳು ಒಟ್ಟಿಗೆ ಸ್ನಾನ ಮಾಡಬೇಕು ಎಂದು ಮನವಿ ಮಾಡಿದ್ದಾರೆ. ಇಷ್ಟು ಮಾತ್ರವಲ್ಲದೆ ಭಾನುವಾರ ಹಾಗೂ ಮನೆಯಿಂದ ಹೊರಗೆ ಹೋಗುವ ಅಗತ್ಯವಿಲ್ಲದ ದಿನದಂದು ಸ್ನಾನವನ್ನೇ ಮಾಡಬೇಡಿ ಎಂದು ಹೇಳಿದ್ದಾರೆ. ಇದೀಗ ಅಲ್ಲಿನ ಮೇಯರ್‌ ಹೊಡಿಸಿರುವ ಆದೇಶ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಬೊಗೋಟಾದಲ್ಲಿ ನೀರು ಸಂಗ್ರಹಣೆ ಮಾಡುವ ನಿಟ್ಟಿನಲ್ಲಿ ಸ್ಥಳೀಯ ಸರ್ಕಾರ ದೊಡ್ಡ ಮಟ್ಟದಲ್ಲಿ ಕ್ರಮ ಕೈಗೊಂಡಿದೆ. ನಗರದ ಅಂತರ್ಜಲ ಮಟ್ಟ ದಾಖಲೆ ಪ್ರಮಾಣದಲ್ಲಿ ಕುಸಿದಿದ್ದು, ನೀರು ಪೋಲಾಗದಂತೆ ಮುಂಜಾಗ್ರತಾ ಕ್ರಮಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ.

ಇನ್ನು ಕೊಲಂಬಿಯಾ ದೇಶದಲ್ಲಿ ಬೇಸಿಗೆ ಎಷ್ಟು ಭೀಕರವಾಗಿದೆ ಎಂದರೆ, ಜಲಾಶಯಗಳ ನೀರು ಸಂಪೂರ್ಣವಾಗಿ ಬರಿದಾಗಿದೆ. ನಗರಕ್ಕೆ ಅಗತ್ಯವಿರುವ ಶೇ. 70ರಷ್ಟು ನೀರನ್ನು ಮೂರು ಜಲಾಶಯಗಳು ಪೂರೈಕೆ ಮಾಡುತ್ತಿದೆ. ಆದರೆ, ಈ ಜಲಾಶಯಗಳಲ್ಲಿ ಈಗ ಶೇ. 17ರಷ್ಟು ಮಾತ್ರವೇ ನೀಡಿದೆ. ಕಳೆದ 40 ವರ್ಷಗಳಲ್ಲಿ ಈ ಜಲಾಶಯಗಳಲ್ಲಿ ದಾಖಲಾದ ಅತೀ ಕಡಿಮೆ ಮಟ್ಟದ ನೀರು ಇದಾಗಿದೆ ಎಂದು ಕಾರ್ಲೋಸ್ ಫೆರ್ನಾಂಡೊ ಗ್ಯಾಲನ್ ತಿಳಿಸಿದ್ದಾರೆ. ಇದೇ ಕಾರಣದಿಂದ ಜನರಿಗೆ ಎಚ್ಚರಿಕೆಗಳನ್ನೂ ನೀಡಲಾಗುತ್ತದೆ. ಒಂದು ಹನಿ ನೀರನ್ನೂ ವ್ಯರ್ಥ ಮಾಡಬೇಡಿ. ಇದನ್ನು ಪಾಲಿಸದೇ ಇದ್ದಲ್ಲಿ ಅನಿವಾರ್ಯವಾಗಿ ನಿರ್ಬಂಧಗಳನ್ನು ಹೇರಬೇಕಾಗುತ್ತದೆ ಎಂದು ಹೇಳಿದ್ದಾರೆ.

Shwetha M