ಈ ದಾಖಲೆಗಳು ನಿಮ್ಮ ಬಳಿ ಇದ್ರೆ ವೋಟರ್‌ ಐಡಿ ಇಲ್ಲದೆಯೂ ಮತದಾನ ಮಾಡಬಹುದು!

ಈ ದಾಖಲೆಗಳು ನಿಮ್ಮ ಬಳಿ ಇದ್ರೆ ವೋಟರ್‌ ಐಡಿ ಇಲ್ಲದೆಯೂ ಮತದಾನ ಮಾಡಬಹುದು!

ಹಲವು ರಾಜ್ಯಗಳಲ್ಲಿ  ಎರಡನೇ ಹಂತದ ಮತ್ತು ಕರ್ನಾಟಕದಲ್ಲಿ ಮೊದಲ ಹಂತದ ಲೋಕಸಭೆ  ಚುನಾವಣೆ ನಡೆಯುತ್ತಿದೆ. ಮುಂಜಾನೆ 7 ಗಂಟೆಗೆ ಚುನಾವಣೆ ಆರಂಭವಾಗಿದೆ. ಈಗಾಗಲೇ ಜನರು ಮತಗಟ್ಟೆಗೆ ಬಂದು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಮತದಾರರ ಬಳಿ ವೋಟರ್‌ ಐಡಿ ಇಲ್ಲದಿದ್ದರೂ ಕೂಡ ಮತ ಹಾಕಬಹುದಾಗಿದೆ.

ಇದನ್ನೂ ಓದಿ:ಸುಮಲತಾ ಬೆಂಬಲ ಹೆಚ್‌ಡಿಕೆಗೋ? ಸ್ಟಾರ್‌ ಚಂದ್ರುಗೋ? – ಚರ್ಚೆಗೆ ಗ್ರಾಸವಾಯ್ತು ರೆಬಲ್‌ ನಾಯಕಿ ಪೋಸ್ಟ್‌!

ಹೌದು, ಮತ ಚಲಾಯಿಸಲು ಮತಗಟ್ಟೆ ಪ್ರವೇಶಿಸುವ ಮತದಾರರು ಮತಗಟ್ಟೆ ಅಧಿಕಾರಿಗೆ ತಮ್ಮ ಗುರುತನ್ನು ಖಾತ್ರಿ ಪಡಿಸಲು ಫೋಟೋ ಇರುವ ಗುರುತಿನ ಚೀಟಿಯನ್ನು ತೋರಿಸಬೇಕು. ಹೀಗಾಗಿ ನಿಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇದ್ದು, ವೋಟರ್​ ಐಡಿ ಕಾರ್ಡ್ ಇಲ್ಲದಿದ್ದರೂ ಸಹ  ಮತದಾನ ಮಾಡಬಹುದಾಗಿದೆ.  ವೋಟರ್‌ ಐಡಿ ಇಲ್ಲದೇ ಯಾವೆಲ್ಲಾ ಗುರುತಿನ ಚೀಟಿ ಮೂಲಕ ಮತದಾನ ಮಾಡಬಹುದು ಅನ್ನೋ ಮಾಹಿತಿ ಇಲ್ಲಿದೆ.

  • ಆಧಾರ್ ಕಾರ್ಡ್
  • MNREGA ಜಾಬ್ ಕಾರ್ಡ್
  • ಬ್ಯಾಂಕ್/ಪೋಸ್ಟ್ ಆಫೀಸ್ ನೀಡಿದ ಭಾವಚಿತ್ರವಿರುವ ಪಾಸ್‌ಬುಕ್‌ಗಳು
  • ಕಾರ್ಮಿಕ ಸಚಿವಾಲಯದ ಯೋಜನೆಯ ಅಡಿಯಲ್ಲಿ ನೀಡಲಾದ ಆರೋಗ್ಯ ವಿಮಾ ಸ್ಮಾರ್ಟ್ ಕಾರ್ಡ್, ಚಾಲನಾ ಪರವಾನಗಿ.
  • ಪ್ಯಾನ್ ಕಾರ್ಡ್
  • NPR ಅಡಿಯಲ್ಲಿ RGI ನೀಡಿದ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‌ಪೋರ್ಟ್
  • ಭಾವಚಿತ್ರ ಹೊಂದಿರುವ ಪಿಂಚಣಿಯ ದಾಖಲೆ.
  • ಕೇಂದ್ರ / ರಾಜ್ಯ ಸರ್ಕಾರ / ಪಿಎಸ್‌ಯು / ಪಬ್ಲಿಕ್ ಲಿಮಿಟೆಡ್ ಕಂಪನಿಗಳು ಉದ್ಯೋಗಿಗಳಿಗೆ ನೀಡಿದ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು
  • MPಗಳು/MLAಗಳು/MLC ಗಳಿಗೆ ನೀಡಲಾದ ಅಧಿಕೃತ ಗುರುತಿನ ಚೀಟಿಗಳು
  • ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ, ಭಾರತ ಸರ್ಕಾರ ನೀಡಿರುವ ವಿಶಿಷ್ಟ ಅಂಗವೈಕಲ್ಯ ID (UDID) ಕಾರ್ಡ್.

ಭಾವಚಿತ್ರ ಹೊಂದಿರುವ ಮತದಾರರ ಗುರುತಿನ ಚೀಟಿಯಲ್ಲಿ(ಎಲೆಕ್ಷನ್ ಕಾರ್ಡ್) ದೋಷಗಳಿದ್ದರೆ, ಇಲ್ಲವೆ ಗುರುತಿನ ಚೀಟಿ ತರದಿದ್ದ ಸಂದರ್ಭದಲ್ಲಿ ಭಾರತ ಆಯೋಗ ಪರಿಗಣಿಸಿರುವ ಮೇಲಿನ ದಾಖಲೆಗಳ ಪೈಕಿ ಒಂದನ್ನು ತೋರಿಸಿ ಮತದಾನ ಮಾಡಬಹುದು. ಒಂದು ವೇಳೆ ಮತದಾರರ ಗುರುತಿನ ಚೀಟಿಯಲ್ಲಿ ದೋಷವಿದ್ದರೆ, ಇಲ್ಲವೆ ಮತದಾರರ ಗುರುತಿನ ಚೀಟಿಯಲ್ಲಿರುವ ವ್ಯಕ್ತಿಯ ಭಾವಚಿತ್ರ ಹೊಂದಾಣಿಕೆ ಆಗದಿದ್ದಾಗ ಮೇಲೆ ತಿಳಿಸಲಾಗಿರುವ ದಾಖಲಾತಿಗಳ ಪೈಕಿ ಒಂದನ್ನು ತೋರಿಸಿ ಮತ ಚಲಾಯಿಸಬಹುದು.

Shwetha M