ನಾನು ಮಾಡಿದ ತ್ಯಾಗಕ್ಕೆ ಬೆಲೆಯೇ ಇಲ್ಲವಾಯ್ತಾ? – ದಳಪತಿಗಳ ವಿರುದ್ಧ ಸುಮಲತಾ ಅಂಬರೀಶ್‌ ಕೆಂಡಾಮಂಡಲ

ನಾನು ಮಾಡಿದ ತ್ಯಾಗಕ್ಕೆ ಬೆಲೆಯೇ ಇಲ್ಲವಾಯ್ತಾ? – ದಳಪತಿಗಳ ವಿರುದ್ಧ ಸುಮಲತಾ ಅಂಬರೀಶ್‌ ಕೆಂಡಾಮಂಡಲ

ಈ ಬಾರಿ ಮಂಡ್ಯ ಹೈವೋಲ್ಟೇಜ್‌ ಕ್ಷೇತ್ರವಾಗಿದೆ. ರಾಜ್ಯದ 14 ಕ್ಷೇತ್ರಗಳ ಪೈಕಿ ಮಂಡ್ಯದಲ್ಲೂ ಮತದಾನ ನಡೆದಿದೆ. ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಈ ಬಾರಿ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಜೆಡಿಎಸ್‌ ಅಭ್ಯರ್ಥಿಗೆ ತಮ್ಮ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಮಂಡ್ಯದಲ್ಲಿ ಹೆಚ್‌ಡಿಕೆ ಪರ ಯಾಕೆ ಪ್ರಚಾರ ಕೈಗೊಂಡಿಲ್ಲ ಎಂಬುವುದಕ್ಕೆ ಕಾರಣ ತಿಳಿಸಿದ್ದಾರೆ. ದಳಪತಿಗಳ ವಿರುದ್ಧ ಅಸಮಧಾನ ಹೊರಹಾಕಿದ್ದಾರೆ.

ಮತದಾನದ ಬಳಿಕ ಮಾತನಾಡಿದ ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸುಮಲತಾ, ಈ‌ ದಿನದವರೆಗೂ ಜೆಡಿಎಸ್​ನ ಯಾವ ನಾಯಕರು ಯಾವುದೇ ಸಭೆಗೆ ಆಹ್ವಾನಿಸಿಲ್ಲ. ಅವರು ಕರೆದು ನಾನು ಬರದೇ ಇದ್ದರೆ ತಪ್ಪಾಗುತ್ತದೆ. ಆದ್ರೆ ಅವರು ನನ್ನ‌ ಕರೆದೇ ಇಲ್ಲ. ನಾನಿಲ್ಲದೇ ಅವರು ಚುನಾವಣೆ ಮಾಡಿಕೊಳ್ಳುತ್ತೀವಿ ಎಂಬ ಭಾವನೆ ಇರಬಹುದು ಎಂದು ದಳಪತಿಗಳಿಗೆ ಸುಮಲತಾ ಅಂಬರೀಶ್ ಟಾಂಗ್ ಕೊಟ್ಟರು.

ಇದನ್ನೂ ಓದಿ: RCB ವಿರುದ್ಧ ಸೋತ ಸಿಟ್ಟಲ್ಲಿ ಕಮಿನ್ಸ್ ಸಿಡಿಮಿಡಿ – SRH ತಂಡದ ಓನರ್ ಕಾವ್ಯ ಮಾರನ್ ನೋವಿಗೂ ಕೊನೆಯಿಲ್ಲ..!

ಇನ್ನು ಸುಮಲತಾ ಅಂಬರೀಶ್, ಚುನಾವಣೆಯಲ್ಲಿ ಸಹಕರಿಸಿಲ್ಲ ಎಂಬ ದೇವೇಗೌಡರ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ದೇವೆಗೌಡರು ದೊಡ್ಡವರು, ಅವರಿಗೆ ಸರಿಯಾದ ಮಾಹಿತಿ ಕೊಡದೆ ಆ ರೀತಿ ಹೇಳಿದ್ದಾರೆ. ಅವರಿಂದ ಅಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ ಎಂದು ಪರೋಕ್ಷವಾಗಿ ಅಸಮಾಧಾನ ಹೊರ ಹಾಕಿದರು. ಸ್ವತಂತ್ರ ಸಂಸದೆಯಾಗಿ ನನ್ನ‌ ಜವಾಬ್ದಾರಿಯನ್ನ ನಿರ್ವಹಿಸಿದ್ದೀನಿ. ಮೋದಿ ಅವರು ಪ್ರಧಾನಿಯಾಗಬೇಕು ಎಂಬ ಉದ್ದೇಶದಿಂದ ನಾನು ಗೆದ್ದಂತಹ ಸೀಟ್ ತ್ಯಾಗ ಮಾಡಿದ್ದೀನಿ. ಈ ಹಂತದಲ್ಲಿ ಅಂಬರೀಶ್ ಅವರ ಪಡೆಯ ಶಕ್ತಿಯನ್ನು ಎನ್​​ಡಿಎಗೆ ಕೊಟ್ಟಿದ್ದೇವೆ. ನಾವು ನಿಷ್ಠೆಯಿಂದ ಕೆಲಸ ಮಾಡಿದ್ದೇವೆ ಎಂದು ದೇವೇಗೌಡರ ಆರೋಪಕ್ಕೆ ತಿರುಗೇಟು ನೀಡಿದರು.

ದೇವೇಗೌಡರು ಹೇಳಿಕೆ ನೀಡಿದ ನಂತರ ನಿನ್ನೆಯಿಂದ ನನಗೆ ಒಂದಷ್ಟು ಕರೆ ಬಂದಿವೆ. ನನ್ನನ್ನು ಯಾವುದೇ ಪ್ರಚಾರಕ್ಕೆ ಕರೆದಿಲ್ಲ. ಕುಮಾರಸ್ವಾಮಿ ನಮ್ಮ ಮನೆಗೆ ಬಂದು ಹೋದ ನಂತ್ರ ನನಗೆ ಒಂದು ಕರೆ ಮಾಡಿ ಪ್ರಚಾರಕ್ಕೆ ಬನ್ನಿ ಎಂದು ಕೇಳಿಲ್ಲ. ಇಷ್ಟು ತ್ಯಾಗ ಮಾಡಿಯೂ ನನ್ನ ಕರೆಯಲಿಲ್ಲ ಅನ್ನೋದು ನನಗೆ ಬೇಸರವಾಯ್ತು.  ಹಾಗಿದ್ರೆ ಕ್ಷೇತ್ರ ತ್ಯಾಗ ಮಾಡಿದ್ದು ತಪ್ಪಾ ಎಂದು ಸುಮಲತಾ ಆಂಬರೀಶ್ ಪ್ರಶ್ನೆ ಮಾಡಿದರು. ನನ್ನ ಅಭಿಮಾನಿಗಳು ಒಂದಷ್ಟು ಜನ ವಿರೋಧ ವ್ಯಕ್ತಪಡಿಸಿದರು. ಸೋತ ಸೀಟನ್ನೇ ಬಿಡಲ್ಲ ಅಂತಹುದರಲ್ಲಿ ನಾನು ಗೆದ್ದ ಸೀಟು ಬಿಟ್ಟು ಕೊಟ್ಟಿದ್ದೀನಿ. ಅವರ ಮನಸ್ಸಿನಲ್ಲಿ ಏನಿದೆ ಎಂಬುದು ನನಗೆ ಗೊತ್ತಿಲ್ಲ. ಆದ್ರೆ ಅವರು ನನ್ನ ಪ್ರಚಾರಕ್ಕೆ ಕರೆದಿಲ್ಲ ಎಂದು ತಮ್ಮ ಹೇಳಿಕೆಯನ್ನು ಪುನರುಚ್ಚಿಸಿದರು.

Shwetha M