ರಾಜಸ್ಥಾನ ರಾಯಲ್ಸ್ ಗೆದ್ದರೆ ಪ್ಲೇ-ಆಫ್ ಸ್ಥಾನ ಖಚಿತ – ಕನ್ನಡಿಗ ಕೆ.ಎಲ್ ರಾಹುಲ್ ಮಾಡ್ತಾರಾ ಕಮಾಲ್?

ರಾಜಸ್ಥಾನ ರಾಯಲ್ಸ್ ಗೆದ್ದರೆ ಪ್ಲೇ-ಆಫ್ ಸ್ಥಾನ ಖಚಿತ – ಕನ್ನಡಿಗ ಕೆ.ಎಲ್ ರಾಹುಲ್ ಮಾಡ್ತಾರಾ ಕಮಾಲ್?

ಈ ಬಾರಿಯ ಐಪಿಎಲ್‌ ಸೀಸನ್‌ ನ ಅತ್ಯಂತ ಯಶಸ್ವಿ ತಂಡ ಎನಿಸಿಕೊಂಡಿದೆ ರಾಜಸ್ಥಾನ ರಾಯಲ್ಸ್. ಆರ್ ಆರ್ ಈಗಾಗ್ಲೇ ಪ್ಲೇ-ಆಫ್‌ ಸ್ಥಾನ ಖಚಿತಪಡಿಸಿಕೊಂಡಿದೆ. ಇವತ್ತು ಲಖನೌ ವಿರುದ್ದ ಆರ್ ಆರ್ ಟೀಮ್ ಗೆಲ್ಲೋ ನಿರೀಕ್ಷೆಯಲ್ಲಿದೆ. ಲಖನೌ ಎದುರು ರಾಜಸ್ಥಾನ ರಾಯಲ್ಸ್ ತಂಡ ಗೆದ್ರೆ, ಪ್ಲೇ ಆಫ್‌ ಸ್ಥಾನಕ್ಕೇರಲಿದೆ.

ಇದನ್ನೂ ಓದಿ: ಕಾಲೆಳೆದ ಕಮಿನ್ಸ್ ಗೆ ಪಾಠ ಕಲಿಸಿದ ಕೊಹ್ಲಿ – ಕಾವ್ಯಾ ಟ್ರೋಲ್

ರಾಜಸ್ಥಾನ ರಾಯಲ್ಸ್ ಆಡಿರುವ 8 ಪಂದ್ಯಗಳಲ್ಲಿ 7ರಲ್ಲಿ ಗೆದ್ದು ಫಸ್ಟ್ ಪ್ಲೇಸ್‌ನಲ್ಲಿದೆ. ಟೀಮ್‌ನಲ್ಲಿ ಎಲ್ರೂ ಸಂಘಟಿತ ಪ್ರದರ್ಶನ ತೋರುತ್ತಿರುವುದು ತಂಡದ ಪ್ಲಸ್ ಪಾಯಿಂಟ್. ಜೋಸ್ ಬಟ್ಲರ್, ಯಶಸ್ವಿ ಜೈಸ್ವಾಲ್, ರಿಯಾನ್ ಪರಾಗ್, ನಾಯಕ ಸಂಜು ಸ್ಯಾಮ್ಸನ್ ಬ್ಯಾಟಿಂಗ್‌ನಲ್ಲಿ ಸಿಡಿದ್ರೆ, ಸಂದೀಪ್ ಶರ್ಮಾ, ಬೌಲ್ಟ್, ಆವೇಶ್ ಖಾ, ಅಶ್ವಿನ್, ಚಹಲ್ ಮಾರಕ ಬೌಲಿಂಗ್ ದಾಳಿಯಿಂದ ಎದುರಾಳಿಗಳನ್ನು ಕಾಡುತ್ತಿದ್ದಾರೆ.

ಇನ್ನೊಂದೆಡೆ ಲಖನೌ ಸೂಪರ್ ಜೈಂಟ್ಸ್ ಕೂಡಾ ಆಲ್ರೌಂಡ್ ಆಟದಿಂದ ಗಮನ ಸೆಳೆಯುತ್ತಿದೆ. ಆಡಿರುವ 8 ಪಂದ್ಯಗಳಲ್ಲಿ 5ರಲ್ಲಿ ಗೆಲುವು ಸಾಧಿಸಿದೆ. ರಾಜಸ್ಥಾನ ವಿರುದ್ಧ ಸೋಲುವ ಮೂಲಕ ಟೂರ್ನಿಗೆ ಕಾಲಿರಿಸಿದ್ದ ತಂಡ ಈಗ ಸೇಡು ತೀರಿಸಿಕೊಳ್ಳುವ ತವಕದಲ್ಲಿದೆ. ಲಕ್ನೋ ಕ್ಯಾಪ್ಟನ್ ಕೆ.ಎಲ್ ರಾಹುಲ್ ಕೂಡಾ ಸಖತ್ ಫರ್ಫಾಮೆನ್ಸ್ ತೋರಿಸ್ತಿದ್ದಾರೆ.

ಐಪಿಎಲ್ ಇತಿಹಾಸದಲ್ಲಿ ಲಖನೌ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಒಟ್ಟು 4 ಬಾರಿ ಮುಖಾಮುಖಿಯಾಗಿದ್ದು ಈ ಪೈಕಿ ರಾಜಸ್ಥಾನ ರಾಯಲ್ಸ್ ತಂಡವು 3 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಲಖನೌ ತಂಡವು ಕೇವಲ ಒಂದು ಪಂದ್ಯದಲ್ಲಿ ಮಾತ್ರ ಗೆಲುವಿನ ರುಚಿ ಕಂಡಿದೆ. ಈ ನಾಲ್ಕು ಪಂದ್ಯದಲ್ಲೂ ಮೊದಲು ಬ್ಯಾಟ್ ಮಾಡಿದ ತಂಡವೇ ಗೆಲುವಿನ ನಗೆ ಬೀರಿದೆ.

ಸಂಭವನೀಯ ಆಟಗಾರರ ಪಟ್ಟಿ

ರಾಜಸ್ಥಾನ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜೋಸ್ ಬಟ್ಲರ್, ಸಂಜು ಸ್ಯಾಮ್ಸನ್(ನಾಯಕ), ರಿಯಾನ್ ಪರಾಗ್, ಧೃವ್ ಜುರೆಲ್, ಶಿಮ್ರೊನ್ ಹೆಟ್ಮೇಯರ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಆವೇಶ್ ಖಾನ್, ಸಂದೀಪ್ ಶರ್ಮಾ, ಯುಜುವೇಂದ್ರ ಚಹಲ್.

ಲಖನೌ ಸೂಪರ್ ಜೈಂಟ್ಸ್: ಕ್ವಿಂಟನ್ ಡಿ ಕಾಕ್, ಕೆ ಎಲ್ ರಾಹುಲ್(ನಾಯಕ), ಮಾರ್ಕಸ್ ಸ್ಟೋಯ್ನಿಸ್, ದೀಪಕ್ ಹೂಡಾ, ನಿಕೋಲಸ್ ಪೂರನ್, ಆಯುಷ್ ಬದೋನಿ, ಕೃನಾಲ್ ಪಾಂಡ್ಯ, ಮ್ಯಾಟ್ ಹೆನ್ರಿ, ರವಿ ಬಿಷ್ಣೋಯಿ, ಮೊಹ್ಸಿನ್ ಖಾನ್, ಯಶ್ ಠಾಕೂರ್.

Sulekha