ಹಾಸನ ಪೆನ್ಡ್ರೈವ್ ಕೇಸ್ – ಪ್ರಜ್ವಲ್ ರೇವಣ್ಣ ಕರೆತರಲು ವಿದೇಶಕ್ಕೆ ಹಾರಿದ ಅಧಿಕಾರಿಗಳು?
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪ್ರಜ್ವಲ್ ರೇವಣ್ಣ ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಇಂದು ಬರುತ್ತಾರೆ? ನಾಳೆ ಬರುತ್ತಾರೆ ಎಂದು ಎಸ್ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ. ಆದ್ರೆ, ಪ್ರಜ್ವಲ್ ಸುಳಿವು ಮಾತ್ರ ಸಿಗುತಿಲ್ಲ. ಹೀಗಾಗಿ ಅಧಿಕಾರಿಗಳ ತಂಡ ವಿದೇಶಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಮಗ ವಿದೇಶದಲ್ಲಿ.. ತಂದೆ ಜೈಲಿನಲ್ಲಿ! – ವಿಚಾರಣೆ ವೇಳೆಯೂ ಕೈಯ್ಯಲ್ಲಿ 3 ನಿಂಬೆಹಣ್ಣು ಹಿಡಿದಿದ್ದ ರೇವಣ್ಣ!
ಹೌದು, ಪೆನ್ಡ್ರೈವ್ ಪ್ರಕರಣ ಮುನ್ನೆಲೆಗೆ ಬರುತ್ತಿದ್ದಂತೆ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹಾರಿದ್ರೆ, ಇತ್ತ ಪ್ರಜ್ವಲ್ ರೇವಣ್ಣ ತಂದೆ ಹೆಚ್ ಡಿ ರೇವಣ್ಣ ಅರೆಸ್ಟ್ ಆಗಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮಗ ಪ್ರಜ್ವಲ್ ರೇವಣ್ಣನಿಗಾಗಿ ಎಸ್ಐಟಿ ಕಾದು ಕಾದು ಸುಸ್ತಾಗಿದ್ದಾರೆ. ಈಗಾಗಲೇ ಕೇಂದ್ರೀಯ ತನಿಖಾ ದಳ ‘ಬ್ಲೂ ಕಾರ್ನರ್’ಸೇರಿದಂತೆ 7 ನೋಟಿಸ್ ನೀಡಿದ್ರೂ ಭಾರತಕ್ಕೆ ಬಂದು ವಿಚಾರಣೆಗೆ ಹಾಜರಾಗಿಲ್ಲ. ಹೀಗಾಗಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ಅನ್ನು ವಶಕ್ಕೆ ಪಡೆಯಲು ಎಸ್ಐಟಿ ಅಧಿಕಾರಿಗಳ ತಂಡ ವಿದೇಶಕ್ಕೆ ತೆರಳಿದ್ದಾರೆ ಅಂತ ಮೂಲಗಳು ತಿಳಿಸಿವೆ.
ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ಗುಪ್ತ ಸಭೆ ನಡೆದಿದ್ದು, ಸಭೆಯಲ್ಲಿ ಮೈಸೂರು, ಹಾಸನ, ಮಂಡ್ಯ, ರಾಮನಗರ ಅಧಿಕಾರಿಗಳ ಟೀಂ ವಿದೇಶಕ್ಕೆ ತೆರಳಿದ್ದಾರೆ ಅಂತಾ ಹೇಳಲಾಗುತ್ತಿದೆ. ಇನ್ನು ನಾಲ್ಕು ಜಿಲ್ಲೆಗಳ ಎಂಟು ಮಂದಿಯ ಟೀಂ ಕಳುಹಿಸಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಸ್ಯಾಂಟ್ರೋ ರವಿ ಕೇಸ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದ ಕೆಲವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಪ್ರಜ್ವಲ್ ಪೆನ್ಡ್ರೈವ್ ಕೇಸ್ಗೆ ಈ ಅಧಿಕಾರಿಗಳನ್ನು ಬಳಸಿಕೊಂಡು ವಿದೇಶಕ್ಕೆ ಕಳಿಸಲಾಗುತ್ತದೆ. ಸೋಮವಾರ ಅಥವಾ ಮಂಗಳವಾರ ವಿದೇಶಕ್ಕೆ ತೆರಳಲು ಪ್ಲಾನ್ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇತ್ತ ಆದಷ್ಟು ಬೇಗ ಬಂದು ಶರಣಾಗುವಂತೆ ಕುಟುಂಬಸ್ಥರೇ ಪ್ರಜ್ವಲ್ಗೆ ಸಲಹೆ ನೀಡುತ್ತಿದ್ದಾರೆ ಅಂತಾ ಹೇಳಲಾಗುತ್ತಿದೆ. ಹೀಗಾಗಿ ಪ್ರಜ್ವಲ್ ರೇವಣ್ಣ ಸೋಮವಾರ ಅಥವಾ ಮಂಗಳವಾರ ಬರುವ ಸಾಧ್ಯತೆ ಇದ್ದು ಎಸ್ಐಟಿ ಅಧಿಕಾರಿಗಳ ತಂಡ ವಿಮಾನ ನಿಲ್ದಾಣದಲ್ಲೂ ಠಿಕಾಣಿ ಹೂಡಿದೆ.