ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಕೇಸ್ – ಪ್ರೂಫ್ ಸಮೇತ ಬಂದು ಸರ್ಕಾರವನ್ನು ಪ್ರಶ್ನಿಸಿದ ಹೆಚ್ಡಿಕೆ!
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಹೊಸ ಹೊಸ ಟ್ವಿಸ್ಟ್ ಸಿಗುತ್ತಿದೆ. ವಿದೇಶದಲ್ಲಿ ತಲೆಮರೆಸಿಕೊಂಡಿರುವ ಪ್ರಜ್ವಲ್ ರೇವಣ್ಣ ಭಾರತಕ್ಕೆ ಯಾವಾಗ ಬರುತ್ತಾರೆ? ಭಾರತಕ್ಕೆ ಬಂದ ಕೂಡಲೇ ಅರೆಸ್ಟ್ ಆಗುತ್ತಾರಾ ಅನ್ನೋ ಹತ್ತು ಹಲವು ಪ್ರಶ್ನೆಗಳು ಮೂಡಿವೆ. ಈ ಬೆನ್ನಲ್ಲೇ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ತುರ್ತು ಸುದ್ದಿಗೋಷ್ಟಿ ನಡೆಸಿದ್ದಾರೆ. ಬರೀ ಹಾಸನ ಅಷ್ಟೇ ಅಲ್ಲ ಇನ್ನೂ ಎಲ್ಲೆಲ್ಲಿ ಪೆನ್ಡ್ರೈವ್ ಹಂಚಿದ್ದಾರೆ ಗೊತ್ತಾ? ನಾನು ಯಾರಿಗೂ ರಕ್ಷಣೆ ಕೊಡಲ್ಲ ಎಂದು ಪ್ರೂಫ್ ಸಮೇತ ಕುಮಾರಸ್ವಾಮಿ ಸರ್ಕಾರವನ್ನು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ: ಪೊಲೀಸರಿಗೆ ಸರೆಂಡರ್ ಆದ್ರಾ ರಾಸಲೀಲೆ ಪ್ರಜ್ವಲ್ ರೇವಣ್ಣ?
ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಮಾತನಾಡಿದ ಹೆಚ್ಡಿಕೆ, ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವುದು ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬೇಕಿಲ್ಲ. ಅವರಿಗೆ ಕೇವಲ ಪ್ರಚಾರ, ಚುನಾವಣೆ ವಿಷಯವನ್ನಾಗಿಸಿ ಗೆಲುವು ಸಾಧಿಸುವುದು ಅಷ್ಟೇ ಬೇಕಿರುವುದು. ಎಸ್ಐಟಿ ಎಂಬುದು ಈಗ ಸಿದ್ದರಾಮಯ್ಯ ಇನ್ವೆಸ್ಟಿಗೇಷನ್ ಟೀಮ್ ಮತ್ತು ಶಿವಕುಮಾರ್ ಇನ್ವೆಸ್ಟಿಗೇಷನ್ ಟೀಮ್ ಆಗಿದೆ. ನಿಜವಾಗಿ ಸಂತ್ರಸ್ತೆಯರಿಗೆ ನ್ಯಾಯ ಕೊಡಿಸುವ ಉದ್ದೇಶ ಅವರದ್ದಾಗಿದ್ದರೆ ವಿಡಿಯೋ ಹರಿಯಬಿಟ್ಟವರನ್ನು ಯಾಕೆ ಇನ್ನೂ ಬಂಧಿಸಿಲ್ಲ? ಆ ವಿಚಾರವಾಗಿ ದೂರು ನೀಡಿದ್ದರೂ ಯಾಕೆ ಕ್ರಮ ಕೈಗೊಂಡಿಲ್ಲ ಎಂದು ಪ್ರಶ್ನಿಸಿದರು.
ಇನ್ನು ಹೆಚ್ಡಿಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಕೂಡ ವಾಗ್ದಾಳಿ ನಡೆಸಿದ್ದಾರೆ. ಪ್ರಜ್ವಲ್ ಪ್ರಕರಣದಲ್ಲಿ 16 ವರ್ಷ ವಯಸ್ಸಿನ ಬಾಲಕಿಯೂ ಸಂತ್ರಸ್ತೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಹಿರಂಗವಾಗಿ ಹೇಳಿದ್ದಾರೆ. ಯಾವ ಆಧಾರದ ಮೇಲೆ ರಾಹುಲ್ ಗಾಂಧಿ ಆ ಹೇಳಿಕೆ ನೀಡಿದರು? ಆ ಬಗ್ಗೆ ಎಸ್ಐಟಿ ಯಾಕೆ ಇನ್ನೂ ತನಿಖೆ ಮಾಡಿಲ್ಲ? 400 ಮಹಿಳೆಯರನ್ನು ಅತ್ಯಾಚಾರ ಮಾಡಲಾಗಿದೆ ಎನ್ನುತ್ತಾರೆ. ಹಾಗಾದರೆ ಯಾಕೆ ರಾಹುಲ್ ಗಾಂಧಿಯವರನ್ನು ಇನ್ನು ಬಿಟ್ಟಿದ್ದಾರೆ ಅಂತಾ ಪ್ರಶ್ನಿಸಿದ್ದಾರೆ.
ನಾನು ಪ್ರಜ್ವಲ್ ರೇವಣ್ಣರನ್ನ ವಹಿಸಿಕೊಂಡು ಮಾತನಾಡುತ್ತಿಲ್ಲ. ಒಂದು ತನಿಖೆ ಪ್ರಾರಂಭ ಮಾಡಿದಾಗ ಮಾಹಿತಿ ಸೋರಿಕೆ ಆಗಬಾರದು. ಸರ್ಕಾರಕ್ಕೆ, ಸಂತ್ರಸ್ತೆಯರಿಗೆ ರಕ್ಷಣೆ ಕೊಡುವುದು ಬೇಕಾಗಿಲ್ಲ. ಈ ಸರ್ಕಾರಕ್ಕೆ ಬೇಕಾಗಿರುವುದು ಕೇವಲ ಪ್ರಚಾರ ಅಷ್ಟೇ. ಏ.22ರಂದು ಬೇಲೂರಿನಲ್ಲಿ ಚುನಾವಣಾ ಪ್ರಚಾರ ಸಭೆ ನಡೆಯಿತು. ಏ.22ರಂದು ಪ್ರಜ್ವಲ್ ಪಕ್ಕದಲ್ಲಿ ಕುಳಿತ ಹೆಣ್ಣು ಮಗಳು ಯಾರು? ಏ.21ರಂದು ಬಿಡುಗಡೆಯಾದ ವಿಡಿಯೋದಲ್ಲಿರುವುದು ಯಾರು? ಅತ್ಯಾಚಾರ ಆಗಿದ್ರೆ ಆ ಹೆಣ್ಮಗಳು ಯಾಕೆ ಒಂದೇ ವೇದಿಕೆಯಲ್ಲಿ ಇರುತ್ತಿದ್ದರು?ಪ್ರಜ್ವಲ್ ಪಕ್ಕ ಆ ಹೆಣ್ಣು ಮಗಳು ಯಾಕೆ ಕುಳಿತುಕೊಳ್ಳುತ್ತಿದ್ದರು ಎಂದು ಪ್ರಶ್ನಿಸಿದರು.
2,900 ಕೇಸ್ ಇದೆ ಎಂದು ಹೇಳುತ್ತಾರೆ. ಆದರೂ ಯಾವ ಸಂತ್ರಸ್ತೆಯರೂ ಸಿಗುತ್ತಿಲ್ಲ ಎಂದು ಒದ್ದಾಡುತ್ತಿದ್ದಾರೆ. ಆ ಸಂತ್ರಸ್ತೆಯರಿಗೆ ಏನು ಸ್ಥೈರ್ಯ ತುಂಬುತ್ತೀರಿ ನೀವು ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಡಿಸಿಎಂ ಡಿಕೆ ಶಿವಕುಮಾರ್ ಹಸ್ತಕ್ಷೇಪದಲ್ಲಿ ನಡೆಯುವ ತನಿಖೆಯಿಂದ ವಾಸ್ತವ ಹೊರಬರುವುದಿಲ್ಲ. ಅಂಥ ವ್ಯಕ್ತಿಯನ್ನು ಸಂಪುಟದಲ್ಲಿ ಇಟ್ಟುಕೊಂಡು ತನಿಖೆ ಮಾಡಿದರೆ ಸೂಕ್ತ ರೀತಿಯಲ್ಲಿ ತನಿಖೆ ಸಾಗದು. ಹೀಗಾಗಿ ಅವರನ್ನು ಸಂಪುಟದಿಂದ ವಜಾಗೊಳಿಸಿ ತನಿಖೆ ಮುಂದುವರಿಸಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಪ್ರಜ್ವಲ್ ಪ್ರಕರಣದ ಪಾರದರ್ಶಕ ತನಿಖೆಯಾಗಬೇಕಿದೆ. ಎಸ್ಐಟಿಯಿಂದ ನ್ಯಾಯಯುತವಾದ ತನಿಖೆ ಸಾಗದು. ಹೀಗಾಗಿ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದೂ ಕುಮಾರಸ್ವಾಮಿ ಆಗ್ರಹಿಸಿದರು.