ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನ19 ರಿಂದ 24ರವರೆಗೆ ಲಕ್ಷದೀಪೋತ್ಸವ ವೈಭವ- ಸಂಸ್ಕೃತಿಯ ವಿಶ್ವರೂಪ ಅನಾವರಣ
ಕೇಂದ್ರ ಸಚಿವೆ ಸ್ಮೃತಿ ಇರಾನಿಯಿಂದ ಸರ್ವಧರ್ಮ ಸಮ್ಮೇಳನಕ್ಕೆ ಚಾಲನೆ
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಕಾರ್ತಿಕಮಾಸದ ಲಕ್ಷದೀಪೋತ್ಸವ ಮತ್ತು ಸರ್ವಧರ್ಮ ಹಾಗೂ ಸಾಹಿತ್ಯ ಸಮ್ಮೇಳನ ನ.19ರಿಂದ 23ರ ತನಕ ಐದು ದಿನಗಳ ಕಾಲ ನಡೆಯಲಿದೆ. ಇದು 90ನೇ ಅಧಿವೇಶನವಾಗಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ ಹೆಗ್ಗಡೆಯವರ ಉಪಸ್ಥಿತಿಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಶ್ರೀ ಮಂಜುನಾಥ ಸ್ವಾಮಿ ಸನ್ನಿಧಿಯಲ್ಲಿ ಐದು ದಿನಗಳ ಕಾಲ ಪಂಚ ಉತ್ಸವಗಳು ನಡೆಯಲಿದೆ. ಅಲ್ಲದೇ ಸರ್ವಧರ್ಮ ಮತ್ತು ಸಾಹಿತ್ಯ ಸಮ್ಮೇಳನದ 90ನೇ ಅಧಿವೇಶನವು ನ.19ರಿಂದ ನ.23ರವರೆಗೆ ನಾಡಿನ ಗಣ್ಯರು, ವಿದ್ವಾಂಸರು ಹಾಗೂ ಕಲಾವಿದರ ಸಹಭಾಗಿತ್ವದಲ್ಲಿ ನೆರವೇರಲಿದೆ. ಶಾಸಕ ಹರೀಶ್ ಪೂಂಜ ಅವರು ನ.19ರಂದು ವಸ್ತುಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ವಸ್ತುಪ್ರದರ್ಶನ ಮಂಟಪ ಮತ್ತು ಅಮೃತವರ್ಷಿಣಿ ಸಭಾಭವನದಲ್ಲಿ ನಿತ್ಯವೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಇದನ್ನೂ ಓದಿ: ಬಿಜೆಪಿ ಸರ್ಕಾರದ ವಿರುದ್ಧ ಮತದಾರರ ಮಾಹಿತಿ ಕಳ್ಳತನದ ಗಂಭೀರ ಆರೋಪ ಹೊರಿಸಿದ ಕಾಂಗ್ರೆಸ್
ನ.21ಕ್ಕೆ ಲಲಿತಕಲಾ ಗೋಷ್ಠಿ
ಅಮೃತ ವರ್ಷಿಣಿ ಸಭಾಭವನದಲ್ಲಿ ನ.21ಕ್ಕೆ ಲಲಿತ ಕಲಾಗೋಷ್ಠಿ ನಡೆಯಲಿದೆ. ರಾತ್ರಿ 8.30ಕ್ಕೆ ವಿದುಷಿ ಡಾ.ಜಯಂತಿ ಮತ್ತು ಕುಮರೇಶ್ ತಂಡದವರಿಂದ ಜುಗಲ್ ಬಂದಿ ಕಾರ್ಯಕ್ರಮ ಆಯೋಜನೆಯಾಗಿದೆ.
ನ.22ಕ್ಕೆ ಸರ್ವಧರ್ಮ ಸಮ್ಮೇಳನ
ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ನ.22ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಸಂಜೆ 5 ಗಂಟೆಗೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಸಮ್ಮೇಳನಕ್ಕೆ ಚಾಲನೆ ನೀಡಲಿದ್ದಾರೆ. ಶಿವಮೊಗ್ಗದ ನ್ಯಾಯವಾದಿ ಎಂ.ಆರ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ಬಸ್ರಿಕಟ್ಟೆ ಧರ್ಮಗುರು ಫಾದರ್ ಮಾರ್ಸೆಲ್ ಪಿಂಟೊ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕಷ ಹಾಸಿಂಪೀರ ಇ.ವಾಲೀಕಾರ, ವಿಶ್ರಾಂತ ಮುಖ್ಯೋಪಾಧ್ಯಾಯ, ವಾಗ್ಮಿ ಮೂಡಬಿದರೆಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಲಿದ್ದಾರೆ.
ನ.23ಕ್ಕೆ ಸಾಹಿತ್ಯ ಸಮ್ಮೇಳನ
ಸಾಹಿತ್ಯ ಸಮ್ಮೇಳನವನ್ನು ನ.23ರ ಸಂಜೆ 5 ಗಂಟೆಗೆ ರಾಷ್ಟ್ರಪ್ರಶಸ್ತಿ ವಿಜೇತ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಪಿ.ಶೇಷಾದ್ರಿ ಉದ್ಘಾಟಿಸಲಿದ್ದಾರೆ. ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾಂಸ ಡಾ.ಎಚ್.ವಿ.ನಾಗರಾಜ ರಾವ್ ಮೈಸೂರು ಅಧ್ಯಕ್ಷತೆ ವಹಿಸಲಿದ್ದಾರೆ. ಬೆಂಗಳೂರಿನ ಪರಿಚಾರಿಕ ಮತ್ತು ಸುಶಿಕ್ಷಣ ಸೇವಾಪರ ಸಂಸ್ಥೆಯ ಸ್ಥಾಪಕ ಸತ್ಯೇಶ್ ಎನ್.ಬೆಳ್ಳೂರು, ಪತ್ರಕರ್ತ ರವೀಂದ್ರ ಭಟ್ ಐನಕೈ, ಲೇಖಕ ಗೀತಾ ವಸಂತ ಮತ್ತು ಇತರರು ಉಪನ್ಯಾಸ ನೀಡಲಿದ್ದಾರೆ.
ನ.24ಕ್ಕೆ ಸಮವಸರಣ ಪೂಜೆ
ಶ್ರೀಚಂದ್ರನಾಥ ಸ್ವಾಮಿ ಬಸದಿಯಲ್ಲಿ ನ.24ರಂದು ಸಂಜೆ 6.30ರಿಂದ ಬಾಹುಬಲಿ ಸೇವಾ ಸಮಿತಿ ಶ್ರಾವಕರಿಂದ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜೆ ನಡೆಯಲಿದೆ. ಶ್ರೀಮತ್ ಪುಷ್ಪದಂತ ಭೂತಬಲಿ ವಿರಚಿತ ಷಟ್ಖಂಡಾಗಮಾಧಾರಿತ ಸಿದ್ಧಾಂತ ಶಿಖಾಮಣಿ-3 ಪುಸ್ತಕ ಬಿಡುಗಡೆ ಆಗಲಿದೆ. ಜೈನ ಸಾಹಿತ್ಯ ವಿಶಾರದೆ ವೀಣಾ ರಘುಚಂದ್ರ ಶೆಟ್ಟಿ ಭಟ್ಕೇರಿ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಇದಾಗಿ ಶ್ರಾವಕ-ಶ್ರಾವಕಿಯರಿಂದ ಜಿನಭಜನೆ ನಡೆಯಲಿದೆ.
ನವೆಂಬರ್ 22ರಂದು ಸಂಜೆ 5ಕ್ಕೆ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯುವ ಸರ್ವಧರ್ಮ ಸಮ್ಮೇಳನವನ್ನು ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮತಿ ಇರಾನಿ ಉದ್ಘಾಟಿಸಲಿದ್ದಾರೆ. ಶಿವಮೊಗ್ಗದ ನ್ಯಾಯವಾದಿ ಎಂ.ಆರ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ಬಸ್ರಿಕಟ್ಟೆ ಧರ್ಮಗುರು ಫಾ| ಮಾರ್ಸೆಲ್ ಪಿಂಟೋ, ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಸಿಂಪೀರ ಇ ವಾಲೀಕಾರ, ವಿಶ್ರಾಂತ ಮುಖ್ಯೋಪಾಧ್ಯಾಯ ಮತ್ತು ವಾಗ್ಮಿ ಮೂಡುಬಿದಿರೆಯ ಮುನಿರಾಜ ರೆಂಜಾಳ ಉಪನ್ಯಾಸ ನೀಡಲಿದ್ದಾರೆ. ನವೆಂಬರ್ 23 ಕ್ಕೆ ಸಾಹಿತ್ಯ ಸಮ್ಮೇಳನ ಸಾಹಿತ್ಯ ಸಮ್ಮೇಳನ ನವೆಂಬರ್ 23 ರಂದು ನಡೆಯಲಿದೆ. ಆ ದಿನ ಸಂಜೆ 5ಕ್ಕೆ ರಾಷ್ಟ್ರಪ್ರಶಸ್ತಿ ವಿಜೇತ ಶ್ರೇಷ್ಠ ಚಲನಚಿತ್ರ ನಿರ್ದೇಶಕ ಬೆಂಗಳೂರಿನ ಪಿ.ಶೇಷಾದ್ರಿ ಉದ್ಘಾಟಿಸಲಿದ್ದಾರೆ. ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಯನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ವಿದ್ವಾಂಸ ಡಾ. ಎಚ್.ವಿ. ನಾಗರಾಜ ರಾವ್ ಮೈಸೂರು ವಹಿಸಲಿದ್ದಾರೆ. ಬೆಂಗಳೂರಿನ ಸಾಹಿತ್ಯ ಪರಿಚಾರಕ ಮತ್ತು ಸುಶಿಕ್ಷಣ ಸೇವಾಪರ ಸಂಸ್ಥೆಯ ಸ್ಥಾಪಕ ಸತ್ಯೇಶ್ ಎನ್. ಬೆಳ್ಳೂರು, ಪತ್ರಕರ್ತ ರವೀಂದ್ರ ಭಟ್, ಲೇಖಕ ಡಾ. ಗೀತಾ ವಸಂತ ಮೊದಲಾದವರು ಉಪನ್ಯಾಸ ನೀಡಲಿದ್ದಾರೆ. ಸಮವಸರಣ ಪೂಜೆ ನವೆಂಬರ್ 24ರಂದು ಸಂಜೆ 6.30 ರಿಂದ ಶ್ರೀ ಚಂದ್ರನಾಥ ಸ್ವಾಮಿಯ ಬಸದಿಯಲ್ಲಿ ಬಾಹುಬಲಿ ಸೇವಾ ಸಮಿತಿ ಶ್ರಾವಕರಿಂದ ಶ್ರೀ ಚಂದ್ರನಾಥ ಸ್ವಾಮಿಯ ಸಮವಸರಣ ಪೂಜಾ ಕಾರ್ಯಕ್ರಮ ನಡೆಯಲಿದೆ. ಶ್ರೀಮತ್ ಪುಷ್ಪದಂತ ಭೂತಬಲಿ ವಿರಚಿತ ಷಟ್ಖಂಡಾಗಮಾಧಾರಿತ ಸಿದ್ಧಾಂತ ಚಿಂತಾಮಣಿ-3 ಪುಸ್ತಕ ಬಿಡುಗಡೆ ಕಾರ್ಯಕ್ರಮ ನಡೆಯಲಿದ್ದು, ಜೈನಸಾಹಿತ್ಯ ವಿಶಾರದೆ ವೀಣಾ ರಘುಚಂದ್ರ ಶೆಟ್ಟಿ ಸಮ್ಮಾನ ಕಾರ್ಯಕ್ರಮ ನಡೆಯಲಿದೆ. ಬಳಿಕ ಶ್ರಾವಕ-ಶ್ರಾವಕಿಯರಿಂದ ಜಿನಭಜನ ಕಾರ್ಯಕ್ರಮ ನಡೆಯಲಿದೆ.