ಆಸ್ಪತ್ರೆ ಬಿಲ್‌ ಕಟ್ಟಲು ದುಡ್ಡಿಲ್ಲ ಅಂತಾ ಅನಾರೋಗ್ಯದಿಂದ ಮಲಗಿದ್ದ ಪತ್ನಿಯನ್ನೇ ಕೊಂದ ಪಾಪಿ ಗಂಡ!

ಆಸ್ಪತ್ರೆ ಬಿಲ್‌ ಕಟ್ಟಲು ದುಡ್ಡಿಲ್ಲ ಅಂತಾ ಅನಾರೋಗ್ಯದಿಂದ ಮಲಗಿದ್ದ ಪತ್ನಿಯನ್ನೇ ಕೊಂದ ಪಾಪಿ ಗಂಡ!

ಯಾರಾದ್ರೂ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ್ರೆ ಅವರನ್ನು ಹೇಗಾದ್ರೂ ಮಾಡಿ ಉಳಿಸಿಕೊಡಿ, ಎಷ್ಟು ದುಡ್ಡು ಖರ್ಚಾದರೂ ಪರವಾಗಿಲ್ಲ ಅಂತಾ ವೈದ್ಯರ ಬಳಿ ಹೇಳುವುದನ್ನು ನಾವು ನೋಡಿದ್ದೇವೆ. ಆದ್ರೆ ಇಲ್ಲೊಬ್ಬ ಆಸ್ಪತ್ರೆ ಬಿಲ್‌ ಕಟ್ಟಲು ಹಣ ಇಲ್ಲ ಅಂತಾ ಅನಾರೋಗ್ಯದಿಂದ ಮಲಗಿದ್ದ ಪತ್ನಿಯನ್ನೇ ಕೊಂದಿದ್ದಾನೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ಪ್ರೂಫ್​ ಸಮೇತ ಬಂದು ಸರ್ಕಾರವನ್ನು ಪ್ರಶ್ನಿಸಿದ ಹೆಚ್‌ಡಿಕೆ!

ಅಚ್ಚರಿಯಾದ್ರೂ ಸತ್ಯ. ಈ ಘಟನೆ ಅಮೆರಿಕದಲ್ಲಿ ನಡೆದಿದೆ. ಆಸ್ಪತ್ರೆ ಬಿಲ್‌ ಕಟ್ಟಲು ಹಣವಿಲ್ಲ ಎಂದು ಕಾಯಿಲೆ ಬಿದ್ದು ಆಸ್ಪತ್ರೆ ಸೇರಿದ್ದ ಹೆಂಡತಿಯ ಕತ್ತು ಹಿಸುಕಿ ಪತಿ ಹತ್ಯೆ ಮಾಡಿದ್ದಾನೆ. ಮಿಸೌರಿಯ ಇಂಡಿಪೆಂಡೆನ್ಸ್‌ನಲ್ಲಿರುವ ಸೆಂಟರ್‌ಪಾಯಿಂಟ್ ಮೆಡಿಕಲ್ ಸೆಂಟರ್‌ನಲ್ಲಿ ಈ ವಿಲಕ್ಷಣಕಾರಿ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಐಸಿಯುನಲ್ಲಿದ್ದ ರೋಗಿ ಮೇಲೆ ಹಲ್ಲೆ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಸಿಬ್ಬಂದಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಯನ್ನು ಸಂಪರ್ಕಿಸಿದ್ದಾರೆ. ರೋಗಿ ತನ್ನ ಹಾಸಿಗೆಯಲ್ಲಿ ಮಲಗಿದ್ದಾಗ, ಮೊದಲು ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲು ಪತಿ ಮುಂದಾಗಿದ್ದ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ರೋಗಿ ಮೃತಪಟ್ಟಿರುವುದು ಗೊತ್ತಾಗಿದೆ. ನನ್ನ ಪತ್ನಿಯನ್ನು ನಾನೇ ಕೊಂದೆ ಎಂದು ವ್ಯಕ್ತಿ ತಪ್ಪೊಪ್ಪಿಕೊಂಡಿದ್ದಾನೆ.

ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರ್ಥಿಕವಾಗಿ ಸಂಕಷ್ಟದಲ್ಲಿದ್ದೆ. ಪತ್ನಿಯ ವೈದ್ಯಕೀಯ ವೆಚ್ಚ ಭರಿಸಲು ಹಣವಿರಲಿಲ್ಲ. ಹೀಗಾಗಿ ಈ ಕೃತ್ಯ ಎಸಗಿದೆ ಎಂದು ಆರೋಪಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.

Shwetha M