ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ -ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ, ದಕ್ಷಿಣ ಕನ್ನಡಕ್ಕೆ ದ್ವಿತೀಯ ಸ್ಥಾನ
ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಗುರುವಾರ ಪ್ರಕರಟವಾಗಿದೆ. ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ ಶೇ 74.4 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಈ ಬಾರಿ ಉಡುಪಿ ಜಿಲ್ಲೆಗೆ ಮೊದಲ ಸ್ಥಾನ, ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಸ್ಥಾನ ದೊರೆತಿದ್ದರೆ ಯಾದಗಿರಿ ಜಿಲ್ಲೆಗೆ ಕೊನೆಯ ಸ್ಥಾನ ದೊರೆತಿದೆ.
ಇದನ್ನೂ ಓದಿ: SSLC ಫಲಿತಾಂಶಕ್ಕೆ ಕೌಂಟ್ಡೌನ್ – ಗುರುವಾರ ನಿರ್ಧಾರವಾಗಲಿದೆ ವಿದ್ಯಾರ್ಥಿಗಳ ಭವಿಷ್ಯ!
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ ಬಗ್ಗೆ ಸುದ್ದಿಗೋಷ್ಟಿ ನಡೆಸಿ ಫಲಿತಾಂಶ ಪ್ರಕಟ ಮಾಡಿದೆ. ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಕೂಡ ವೀಕ್ಷಿಸಬಹುದಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷೆ ಮಂಜುಶ್ರೀ ಹಾಗೂ ನಿರ್ದೇಶಕ ಗೋಪಾಲಕೃಷ್ಣ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶದ ಮಾಹಿತಿ ನೀಡಿದರು.
ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಒಟ್ಟು 8,59,967 ಲಕ್ಷ ವಿಧ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 441910 ವಿದ್ಯಾರ್ಥಿಗಳು, 428058 ವಿದ್ಯಾರ್ಥಿನಿಯರು ಪರೀಕ್ಷೆ ಬರೆದಿದ್ದು, 6,31,204 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಈ ಬಾರಿಯೂ ಬಾಲಕಿಯರದ್ದೇ ಮೈಲುಗೈಯಾಗಿದೆ.
ವಿದ್ಯಾರ್ಥಿಯ ನೋಂದಾಯಿತ ಮೊಬೈಲ್ ನಂಬರ್ಗೂ ಸಹ ಫಲಿತಾಂಶದ ವಿವರದ ಎಸ್ಎಂಎಸ್ ಕಳುಹಿಸಲಾಗುವುದು ಎಂದು ಮಂಜುಶ್ರೀ ತಿಳಿಸಿದರು.