ಹೆಚ್ ಡಿ ರೇವಣ್ಣ ಅಮಾನತಿಗೆ ಪಕ್ಷದಲ್ಲಿ ಹೆಚ್ಚಾಯ್ತು ಒತ್ತಡ – ಗುರುವಾರ ನಿರ್ಧಾರವಾಗಲಿದೆ ರೇವಣ್ಣ ಭವಿಷ್ಯ!
ಹಾಸನ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಕಿಡ್ನಾಪ್ ಪ್ರಕರಣದ ತನಿಖೆ ತೀವ್ರಗೊಂಡಿದೆ. ಎಸ್ಐಟಿ ಅಧಿಕಾರಿಗಳು ಹಲವು ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದಾರೆ. ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂಬ ಒತ್ತಡ ಹೆಚ್ಚಾಗುತ್ತಿದೆ.
ಇದನ್ನೂ ಓದಿ:ಇನ್ನು ಮುಂದೆ ಡಾರ್ಲಿಂಗ್ ಎಂದು ಕರೆದರೆ ಜೋಕೆ..! – ಕಂಬಿ ಎಣಿಸಬೇಕಾದಿತು ಹುಷಾರ್!
ಹೌದು, ಹೆಚ್.ಡಿ.ರೇವಣ್ಣ ಅವರನ್ನು ಅಮಾನತು ಮಾಡಬೇಕೆಂದು ಪಕ್ಷದ ಮುಖಂಡರು ಒತ್ತಾಯಿಸುತ್ತಿದ್ದಾರೆ. ಇದೀಗ ರೇವಣ್ಣ ವಿರುದ್ಧ ಕೇಳಿಬಂದಿರುವ ಆರೋಪಗಳು ಹಾಗೂ ಅವರನ್ನು ಎಸ್ಐಟಿ ತಂಡ ಬಂಧಿಸಿ ಜೈಲುಪಾಲಾಗಿರುವುದು ಪಕ್ಷದ ಕಾರ್ಯಕರ್ತರು ಮುಜುಗರ ಎದುರಿಸುವಂತಾಗಿದೆ. ಪಕ್ಷದ ಬಗ್ಗೆ ನಾಯಕರಿಗೆ ಗಟ್ಚಿಯಾಗಿ ಮಾತನಾಡಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಈ ಕೂಡಲೇ ಅವರನ್ನು ಪಕ್ಷದಿಂದ ಅಮಾನತು ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಗುರುವಾರ ಜೆಡಿಎಸ್ ಕೋರ್ ಸಮಿತಿ ಸಭೆ ಬೆಂಗಳೂರಿನಲ್ಲಿ ನಡೆಯಲಿದ್ದು ಅದರಲ್ಲಿ ಹೆಚ್ ಡಿ ರೇವಣ್ಣ ಅಮಾನತಿನ ಕುರಿತು ನಿರ್ಧಾರವಾಗಲಿದೆ ಎಂದು ತಿಳಿದುಬಂದಿದೆ.
ಎಸ್ ಐಟಿ ಕಸ್ಟಡಿಯಲ್ಲಿದ್ದ ಹೆಚ್ ಡಿ ರೇವಣ್ಣ ಅವರನ್ನು ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ 7 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದು ಅವರೀಗ ಕೈದಿ ನಂಬರ್ 4567 ಆಗಿದ್ದಾರೆ.