ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ –   ಸಂತ್ರಸ್ತರಿಗೆ HDK ಬೆದರಿಕೆ ಹಾಕುತ್ತಿದ್ದಾರೆ ಎಂದು SITಗೆ ಕಾಂಗ್ರೆಸ್ ದೂರು

ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ –   ಸಂತ್ರಸ್ತರಿಗೆ HDK ಬೆದರಿಕೆ ಹಾಕುತ್ತಿದ್ದಾರೆ ಎಂದು SITಗೆ ಕಾಂಗ್ರೆಸ್ ದೂರು

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಇತ್ತ ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಯಾಗಿದ್ರೂ ಪ್ರಜ್ವಲ್ ಬಂದು ಶರಣಾಗದೇ ವಿದೇಶದಲ್ಲಿ ತಲೆಮರೆಸಿಕೊಂಡಿದ್ದಾರೆ. ಈ ಮಧ್ಯೆ ಅಶ್ಲೀಲ ವಿಡಿಯೋ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಅವರು ಸಂತ್ರಸ್ತರಿಗೆ ಬೆದರಿಕೆ ಹಾಕುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾರೆಂದು ದೂರು ದಾಖಲಾಗಿದೆ.

ಇದನ್ನೂ ಓದಿ: ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ – ರಾಜ್ಯಪಾಲರಿಗೆ ಹೆಚ್‍ಡಿಕೆ, ಜೆಡಿಎಸ್ ನಿಯೋಗ ದೂರು

ಹೆಚ್‌ಡಿ ಕುಮಾರಸ್ವಾಮಿ  ವಿರುದ್ದ ರಾಜ್ಯ ಕಾಂಗ್ರೆಸ್ ಸಿಐಡಿ ವಿಶೇಷ ತನಿಖಾ ತಂಡಕ್ಕೆ  ದೂರು ನೀಡಿದೆ.  ಹೆಚ್‌ಡಿ ರೇವಣ್ಣ ಹಾಹೂ ಪ್ರಜ್ವಲ್‌ ರೇವಣ್ಣ ಪ್ರಕರಣಗಳ ತನಿಖೆಗೆ ಸರ್ಕಾರ ಎಸ್‌ಐಟಿ ರಚಿಸಿದೆ. ಹೀಗಿರುವಾಗ, ಕುಮಾರಸ್ವಾಮಿ ಅವರು ಸಂತ್ರಸ್ತರ ಸ್ಥಳವನ್ನು ಬಹಿರಂಗಪಡಿಸುತ್ತಿದ್ದಾರೆ ಮತ್ತು ಪ್ರಕರಣದಲ್ಲಿ ಭಾಗಿಯಾಗಿರುವವನ್ನು ಪರೋಕ್ಷವಾಗಿ ರಕ್ಷಿಸುತ್ತಿದ್ದಾರೆ. ಹೀಗಾಗಿಯೇ ಸಂತ್ರಸ್ತರು ದೂರು ನೀಡಲು ಮುಂದೆ ಬರುತ್ತಿಲ್ಲ. ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮತ್ತು ಅವರ ಪುತ್ರ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಹಲವು ಮಹಿಳೆಯರು ಬಲಿಯಾಗಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.

ಈ ಪ್ರಕರಣದ ಕುರಿತು ಹೆಚ್ಚಿನ ವಿವರಗಳು ಕುಮಾರಸ್ವಾಮಿಯವರ ಬಳಿ ಇವೆ. ಹೀಗಾಗಿ ಸಿಐಡಿ ಕುಮಾರಸ್ವಾಮಿಯವರನ್ನೂ ವಿಚಾರಣೆಗೊಳಪಡಿಸಬೇಕು.  ಬಿಜೆಪಿ ಮುಖಂಡ ದೇವರಾಜೇಗೌಡ ಅವರು ತಮ್ಮ ಪಕ್ಷದ ನಾಯಕರಿಗೆ ವೀಡಿಯೋಗಳನ್ನು ರವಾನಿಸಿದ್ದರು. ವಕೀಲರಾಗಿರುವ ಅವರು ಪೊಲೀಸರನ್ನೇಕೆ ಸಂಪರ್ಕಿಸಲಿಲ್ಲ? ಗೌಡ ಅವರು ಮಹಿಳಾ ಆಯೋಗವನ್ನಾದರೂ ಸಂಪರ್ಕಿಸಬಹುದಿತ್ತು ಎಂದು ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.

Shwetha M