ಆರ್‌ಸಿಬಿ Vs ಸಿಎಸ್‌ಕೆ ಹೈವೋಲ್ಟೇಜ್‌ ಮ್ಯಾಚ್‌ – ಈ ರಸ್ತೆಯಲ್ಲಿ ಸಂಚಾರದಲ್ಲಿ ಭಾರಿ ಬದಲಾವಣೆ  

ಆರ್‌ಸಿಬಿ Vs ಸಿಎಸ್‌ಕೆ ಹೈವೋಲ್ಟೇಜ್‌ ಮ್ಯಾಚ್‌ – ಈ ರಸ್ತೆಯಲ್ಲಿ ಸಂಚಾರದಲ್ಲಿ ಭಾರಿ ಬದಲಾವಣೆ  

ರಾಯಲ್ ಚಾಲೆಂಜರ್ಸ್ ಬೆಂಗಳೂರು ವರ್ಸಸ್ ಚೆನ್ನೈ ಸೂಪರ್ ಕಿಂಗ್ಸ್ ನಡುವಣ ರಣರೋಚಕ ಕದನಕ್ಕೆ ಕ್ಷಣಗಣನೆ ಆರಂಭವಾಗಿದೆ. ಶನಿವಾರ ಸಂಜೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಮ್​ನಲ್ಲಿ ಮದಗಜಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಯಾವ ತಂಡ ಗೆಲ್ಲುತ್ತೋ ಆ ತಂಡ ಪ್ಲೇಆಫ್​ಗೆ ಹೆಜ್ಜೆ ಇಟ್ರೆ ಸೋತ ತಂಡ ಟೂರ್ನಿಯಿಂದಲೇ ಹೊರ ಬೀಳಲಿದೆ. ಹೀಗಾಗಿ ಜಿದ್ದಾಜಿದ್ದಿನ ಈ ಕದನ ಕಣ್ತುಂಬಿಕೊಳ್ಳೋಕೆ ಕೋಟ್ಯಂತರ ಅಭಿಮಾನಿಗಳು ಕಾಯ್ತಿದ್ದಾರೆ. ಶನಿವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ನಡೆಯಲಿರುವ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತ ಸಂಚಾರ ಬದಲಾವಣೆ ಮಾಡಲಾಗಿದೆ.

ಇದನ್ನೂ ಓದಿ: ಮುಂಬೈ ವಿರುದ್ಧ ಲಕ್ನೋಗೆ ಗೆಲುವು – ಕೊನೆ ಪಂದ್ಯ ಗೆದ್ದರೂ ಎಲ್‌ಎಸ್‌ಜಿಗಿಲ್ಲ ಪ್ಲೇಆಫ್‌ ಅವಕಾಶ

ಹೌದು, ಆರ್‌ಸಿಬಿ ಹಾಗೂ ಸಿಎಸ್‌ಕೆ ಪಂದ್ಯ ವೀಕ್ಷಿಸಲು ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಟೇಡಿಯಂ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆ ವರೆಗೂ ಸಂಚಾರ ಪಥದಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಹಾಗಾಗಿ ಪಂದ್ಯ ವೀಕ್ಷಣೆಗೆ ಬರುವವರು ಎಲ್ಲೆಂದರಲ್ಲಿ ವಾಹನ ನಿಲುಗಡೆ ಮಾಡುವಂತಿಲ್ಲ. ಮಾತ್ರವಲ್ಲದೆ ಕೆಲವೆಡೆ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.

ಇನ್ನು ಕ್ವೀನ್ಸ್ ರಸ್ತೆ, ಎಂ ಜಿ ರಸ್ತೆ, ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್​ ಜಾನ್ಸ್​ ಸ್ವ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರಿ ಬಾ ರಸ್ತೆ, ಅಂಬೇಡ್ಕರ್ ಬೀದಿ, ಟ್ರಿನಿಟಿ ವೃತ್ತ, ಲ್ಯಾವೆಲ್ಲಿ ರಸ್ತೆ, ವಿಠಲ್ ಮಲ್ಯ ರಸ್ತೆ, ಕಿಂಗ್ಸ್ ರಸ್ತೆ & ನೃಪತುಂಗ ರಸ್ತೆಯಲ್ಲಿ ವಾಹನ ನಿಲುಗಡೆಗೆ ನಿಷೇಧ ಹೇರಲಾಗಿದೆ.

ಇನ್ನು ಮ್ಯಾಚ್ ನೋಡಲು ಆಗಮಿಸುವ ಸಾರ್ವಜನಿಕರಿಗೆ ಬೇರೆಡೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.  ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಯೂ ಬಿ ಸಿಟಿ ಪಾರ್ಕಿಂಗ್ ಸ್ಥಳ, ಕಿಂಗ್ಸ್ ರಸ್ತೆ, ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣ ಮೊದಲನೇ ಮಹಡಿಯಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.

ಪಂದ್ಯಕ್ಕಾಗಿ ಓರ್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಮಾಡಲಾಗಿದೆ. 3 DCP, 20 ACP, 50 ಇನ್ಸ್​​ಸ್ಪೆಕ್ಟರ್ ಸೇರಿ 1 ಸಾವಿರ ಸಿವಿಲ್ ಪೊಲೀಸರ ನಿಯೋಜನೆ ಮಾಡಲಾಗಿದೆ. 1 ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು, 2 ಟ್ರಾಫಿಕ್ ಡಿಸಿಪಿ ಸೇರಿ 200 ಟ್ರಾಫಿಕ್ ಪೊಲೀಸರ ನಿಯೋಜನೆ ಮಾಡಲಾಗಿದೆ. ಒಟ್ಟಾರೆ ಶನಿವಾರ ಬೆಂಗಳೂರಿನಲ್ಲಿ ನಡೆಯಲಿರುವ ಹೈವೋಲ್ಟೇಜ್​ ಪಂದ್ಯಕ್ಕೆ ಸಲಕ ಸಿದ್ಧತೆ ಮಾಡಿಕೊಳ್ಳಲಾಗಿದೆ.

Shwetha M