ಹೆಚ್. ಡಿ ರೇವಣ್ಣಗೆ ಟೆನ್ಶನ್ ಟೆನ್ಶನ್.. – ಮತ್ತೆ ಜೈಲಿಗೆ ಹೋಗ್ತಾರಾ ಮಾಜಿ ಸಚಿವ?
ಹೊಳೆನರಸೀಪುರದಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣ ಈಗ ಜೆಡಿಎಸ್ ಶಾಸಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಟೆನ್ಷನ್ ಹೆಚ್ಚಿಸಿದೆ. ಗುರುವಾರ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಮಧ್ಯಂತರ ಷರತ್ತುಬದ್ದ ಜಾಮೀನು ನೀಡಿ ತೀರ್ಪು ಕಾಯ್ದಿರಿಸಿತ್ತು. ಸೋಮವಾರ ರೇವಣ್ಣ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಲಿದೆ.
ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಗುಡ್ನ್ಯೂಸ್ – ಒಂದಾಗುತ್ತಿದೆ ನಮ್ಮ ಯಾತ್ರಿ ಮತ್ತು ಬಿಎಂಆರ್ಸಿಎಲ್!
47 ವರ್ಷದ ಮನೆ ಕೆಲಸದಾಕೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣ ಮತ್ತು ಅವರ ಪುತ್ರ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಏಪ್ರಿಲ್ 28 ರಂದು ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಕೆಲವು ಅಶ್ಲೀಲ ವಿಡಿಯೊಗಳು ಹಾಸನ ಜಿಲ್ಲೆಯಾದ್ಯಂತ ಹರಿದಾಡಿದ್ದವು. ಪ್ರಜ್ವಲ್ ರೇವಣ್ಣ ಏಪ್ರಿಲ್ 27 ರಂದು ಜರ್ಮನಿಗೆ ತೆರಳಿದ ಬಳಿಕ ತಲೆಮರೆಸಿಕೊಂಡಿದ್ದಾರೆ. ಶಾಸಕರ ನಿವಾಸದಲ್ಲಿ ತಂದೆ ಮತ್ತು ಮಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ದೂರು ನೀಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಡಿ ರೇವಣ್ಣ ಜಾಮೀನು ಕೋರಿ ಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದಿಗೆ ಇಂದಿಗೆ ಆದೇಶ ಕಾಯ್ದಿರಿಸಿದ್ದರು.
ಮ್ಯಾಜಿಸ್ಟ್ರೇಟ್ 42 ರ ನ್ಯಾಯಾಧೀಶರು ಸೋಮವಾರ ಮುಖ್ಯ ಅರ್ಜಿಯ ತೀರ್ಪು ಪ್ರಕಟಿಸಲಿದ್ದಾರೆ. ಸದ್ಯ ಮಧ್ಯಂತರ ಜಾಮೀನಿನ ಮೇಲಿರುವ ರೇವಣ್ಣಗೆ ಜಾಮೀನು ಸಿಗುತ್ತಾ ಅಥವಾ ಮತ್ತೆ ಜೈಲು ಫಿಕ್ಸಾ ಎಂಬ ಕುತೂಹಲ ಮನೆ ಮಾಡಿದೆ. ಒಂದು ವೇಳೆ ಜಾಮೀನು ಸಿಕ್ಕರೆ ರೇವಣ್ಣಗೆ ಬಿಗ್ ರಿಲೀಫ್ ಸಿಗಲಿದೆ.