ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಗೆಲುವು -ಬಳ್ಳಾರಿಯಲ್ಲಿ ಸೋತ ಶ್ರೀರಾಮುಲು

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಗೆಲುವು -ಬಳ್ಳಾರಿಯಲ್ಲಿ ಸೋತ ಶ್ರೀರಾಮುಲು

ಚಿತ್ರದುರ್ಗದಲ್ಲಿ ಗೋವಿಂದ ಕಾರಜೋಳ ಜಯ 

ಚಿತ್ರದುರ್ಗದಲ್ಲಿ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದ್ದಾರೆ. ಈ ಬಾರಿಯ ಲೋಕ ಸಮರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಹಾಗೂ ಎನ್ಡಿ ಎ. ಮೈತ್ರಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ನಡುವೆ ನೇರ ಹಣಾಹಣಿ ಏರ್ಪಟ್ಟಿತ್ತು.  ಈ ಬಾರಿ ಚಿತ್ರದುರ್ಗ ಕ್ಷೇತ್ರದಲ್ಲಿ ಇಬ್ಬರೂ ಅಭ್ಯರ್ಥಿಗಳು ದಲಿತ ಸಮುದಾಯಕ್ಕೆ ಸೇರಿದವರು. ಕೈ ಅಭ್ಯರ್ಥಿ ಬಿ.ಎನ್ ಚಂದ್ರಪ್ಪ ಅವರು 2014ರಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ 2019 ರಲ್ಲಿ ಸೋಲು ಕಂಡಿದ್ದು ಇದೀಗ ಮೂರನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿದ್ರು. ಆದರೆ, ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ವಿರುದ್ಧ ಸೋಲು ಅನುಭವಿಸಿದ್ದಾರೆ. ಹಿರಿಯ ಅನುಭವಿ ರಾಜ್ಯ ಮಾಜಿ ಸಚಿವ ಗೋವಿಂದ ಕಾರಜೋಳ ಮೈತ್ರಿ ಅಭ್ಯರ್ಥಿಯಾಗಿ ದುರ್ಗದಲ್ಲಿ ಸ್ಪರ್ಧೆಗಿಳಿದು ಗೆದ್ದು ತೋರಿಸಿದ್ದಾರೆ.

ಬಳ್ಳಾರಿಯಲ್ಲಿ ಶ್ರೀರಾಮುಲು ಸೋಲು

ಬಳ್ಳಾರಿಯಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರಿಗೆ ತೀವ್ರ ಮುಖಭಂಗವಾಗಿದೆ. ಜೊತೆಗೆ ಕಾಂಗ್ರೆಸ್ ಅಭ್ಯರ್ಥಿ ಗೆಲುವಿನ ಕೇಕೆ ಹಾಕಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಇ.ತುಕಾರಾಮ್ ಗೆದ್ದು ಬೀಗಿದ್ದಾರೆ. ಶ್ರೀರಾಮುಲು ಅವರಿಗೆ ನರೇಂದ್ರ ಮೋದಿ ಅವರ ಅಲೆ, ವಾಲ್ಮೀಕಿ ಸಮುದಾಯದ ಪ್ರಬಲ ನಾಯಕ ಎಂಬ ಹಣೆಪಟ್ಟಿ, ಹಿಂದುತ್ವ, ಲಿಂಗಾಯತರು ಸೇರಿ ಹಲವು ಸಮುದಾಯಗಳ ಮತಗಳ ಭದ್ರತೆಯು ಅವರ ಆತ್ಮವಿಶ್ವಾಸವನ್ನು ಹೆಚ್ಚಿಸಿತ್ತು. ಅದರಲ್ಲೂ, ಜನಾರ್ದನ ರೆಡ್ಡಿ ಅವರ ಪಕ್ಷವು ಬಿಜೆಪಿ ಜತೆ ವಿಲೀನಗೊಂಡಿರುವುದು ಶ್ರೀರಾಮುಲು ಅವರಿಗೆ ಆನೆ ಬಲ ಬಂದಂತಾಗಿತ್ತು. ಆದರೂ, ಇ. ತುಕಾರಾಮ್‌ ಅವರು ಶ್ರೀರಾಮುಲು ಗೆಲುವಿನ ಕನಸನ್ನು ನುಚ್ಚುನೂರು ಮಾಡಿದ್ದಾರೆ.

suddiyaana