ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲುವು – ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ ಜಯಭೇರಿ

ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಗೆಲುವು – ಹಾವೇರಿಯಲ್ಲಿ ಬಸವರಾಜ್ ಬೊಮ್ಮಾಯಿ ಜಯಭೇರಿ

ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿಯೇ ಸಾಕಷ್ಟು ಸದ್ದು ಮಾಡಿದ್ದ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ವಿಕ್ಟರಿ ಬಾರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದ ಸುಧಾಕರ್ ಅಚ್ಚರಿಯ ರೀತಿಯಲ್ಲಿ ಸೋಲು ಕಂಡಿದ್ರು. ಬಳಿಕ ಬಿಜೆಪಿ ಹೈಮಾಂಡ್ ಬಳಿ ಪಟ್ಟು ಹಿಡಿದು ಲೋಕಸಭಾ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ರು. ಲೋಕಸಭಾ ಚುನಾವಣೆಯನ್ನು ಪ್ರತಿಷ್ಠೆಯನ್ನಾಗಿ ಸ್ವೀಕರಿಸಿದ್ದ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಕೊನೆಗೂ ಸಂಸತ್ ಪ್ರವೇಶಕ್ಕೆ ಸಜ್ಜಾಗಿದ್ದಾರೆ. ಮತ್ತೊಂದೆಡೆ ಮೊದಲ ಬಾರಿಗೆ ಚುನಾವಣಾ ಅಖಾಡಕ್ಕೆ ಧುಮಕಿದ್ದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾರಾಮಯ್ಯ ಕೂಡ ಟಫ್ ಫೈಟ್ ನೀಡಿದ್ರು. ಕ್ಷೇತ್ರವನ್ನು ಶತಾಯಗತಾಯ ಗೆಲ್ಲಲೇಬೇಕೆಂದು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಇನ್ನಿಲ್ಲದ ಕಸರತ್ತು ನಡೆಸಿದ್ದರು. ರಾಜ್ಯ, ರಾಷ್ಟ್ರಮಟ್ಟದ ನಾಯಕರು, ಪ್ರಚಾರಕರನ್ನು ಕರೆತಂದು ತಮ್ಮದೇ ಶೈಲಿಯಲ್ಲಿ ಮತದಾರರನ್ನು ಸೆಳೆಯುವ ಸಾಹಸ ಮಾಡಿದ್ದರು. ಆದ್ರೆ ಅಂತಿಮವಾಗಿ ಸುಧಾಕರ್ ಗೆಲುವು ಸಾಧಿಸಿದ್ದಾರೆ. ಆದ್ರಿಲ್ಲಿ ಸುಧಾಕರ್ ಗೆದ್ರೂ ಅನ್ನೋದಕ್ಕಿಂತ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ನೀಡಿದ್ದ ಹೇಳಿಕೆಯೊಂದು ಹಲ್​​ಚಲ್ ಎಬ್ಬಿಸಿದೆ. ಯಾಕಂದ್ರೆ ವಾರದ ಹಿಂದಷ್ಟೇ ಪ್ರದೀಪ್ ಈಶ್ವರ್ ಒಂದು ಸವಾಲನ್ನ ಹಾಕಿದ್ರು. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ಅವರು ಒಂದು ಮತದ ಮುನ್ನಡೆ ಸಾಧಿಸಿದರೂ ನಾನು ರಾಜೀನಾಮೆ ನೀಡುತ್ತೇನೆ. ನಾನು ನನ್ನ ಮಾತಿಗೆ ಬದ್ಧನಾಗಿರುತ್ತೇನೆ ಎಂದಿದ್ರು. ಇದೀಗ ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಸುಧಾಕರ್ ಗೆಲುವು ಸಾಧಿಸ್ತಾ ಇದ್ದಂತೆ ಪ್ರದೀಪ್ ಈಶ್ವರ್ ಯಾವಾಗ ರಾಜೀನಾಮೆ ಕೊಡ್ತೀರಾ ಅಂತಾ ಪ್ರಶ್ನೆ ಮಾಡ್ತಿದ್ದಾರೆ.  ಪ್ರದೀಪ್‌ ಈಶ್ವರ್‌ ರಾಜೀನಾಮೆ ನೀಡುವಂತೆ ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಸೋ ಪ್ರದೀಪ್ ಈಶ್ವರ್ ತಾವು ನೀಡಿದ್ದ ಮಾತಿಗೆ ಬದ್ಧರಾಗಿರ್ತಾರಾ, ತಾವೇ ಸೋಲಿಸಿದ್ದ ಸುಧಾಕರ್ ಅವ್ರ ಗೆಲುವಿನಿಂದ ಮತ್ತೆ ಶಾಸಕ ಸ್ಥಾನ ಕಳೆದುಕೊಳ್ತಾರಾ ಅನ್ನೋ ಕುತೂಹಲ ಮೂಡಿಸಿದೆ.

ಗೆದ್ದು ಬೀಗಿದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಮತ್ತೊಂದೆಡೆ ರಾಜ್ಯದ ಮತ್ತೊಂದು ಹೈವೋಲ್ಟೇಜ್ ಕ್ಷೇತ್ರವಾದ ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗೆದ್ದು ಬೀಗಿದ್ದಾರೆ. ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ರು. ಹಾಲಿ ಸಂಸದ ಶಿವಕುಮಾರ ಉದಾಸಿ ಬದಲಿಗೆ ಬೊಮ್ಮಾಯಿ ಸ್ಪರ್ಧೆ ಮಾಡಿದ್ದು, ಮಾಜಿ ಸಿಎಂಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆನಂದ ಸ್ವಾಮಿ ಗಡ್ಡದೇವರ ಮಠ ತೀವ್ರ ಪೈಪೋಟಿ ನೀಡಿದ್ದರು. ಆದ್ರೆ ಅಂತಿಮವಾಗಿ ಬೊಮ್ಮಾಯಿಯವ್ರೇ ಸಂಸತ್ ಪ್ರವೇಶ ಮಾಡಲಿದ್ದಾರೆ. ಇನ್ನು ಹಾವೇರಿ ಲೋಕಸಭಾ ಕ್ಷೇತ್ರದ ಬಗ್ಗೆ ನೋಡೋದಾದ್ರೆ 2008ರಲ್ಲಿ ನಡೆದ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಹಾವೇರಿ ಲೋಕಸಭಾ ಕ್ಷೇತ್ರ ಉಗಮವಾಯ್ತು. 2009ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಿವಕುಮಾರ ಉದಾಸಿ ಅಂದಿನಿಂದ ಇಂದಿನವರೆಗೂ ಸಂಸದರು ಹಾಗೂ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ. 2009ರ ಬಳಿಕ 2014 ಹಾಗೂ 2019ರ ಲೋಕಸಭಾ ಚುನಾವಣೆಗಳಲ್ಲೂ ಶಿವಕುಮಾರ್ ಉದಾಸಿ ಅವರೇ ಸತತವಾಗಿ ಗೆಲುವು ಸಾಧಿಸಿ ಹ್ಯಾಟ್ರಿಕ್ ಸಾಧನೆ ಮಾಡಿದ್ದರು. ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಶಿವಕುಮಾರ ಉದಾಸಿ ಬದಲಾಗಿ ಬಿಜೆಪಿಯು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡಿತ್ತು. ಈ ಕ್ಷೇತ್ರದಲ್ಲಿ ಭಾರೀ ಲೆಕ್ಕಾಚಾರದೊಂದಿಗೆ ಕಾಂಗ್ರೆಸ್‌ ಮಾಜಿ ಶಾಸಕ ಜಿಎಸ್‌ ಗಡ್ಡದೇವರಮಠ ಅವರ ಪುತ್ರ ಆನಂದಸ್ವಾಮಿ ಗಡ್ಡದೇವರಮಠಗೆ ಟಿಕೆಟ್ ನೀಡಿತ್ತು. ಎರಡೂ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಕಾರ್ಡ್ ಪ್ಲೇ ಮಾಡಿದ್ದು ರೋಚಕತೆ ಹೆಚ್ಚಿಸಿತ್ತು. ಇನ್ನು ಈ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಎಂಟು ವಿಧಾನಭಾ ಕ್ಷೇತ್ರಗಳು ಬರುತ್ತವೆ. ಈ ಪೈಕಿ ಏಳು ಕ್ಷೇತ್ರಗಳನ್ನು ಕಾಂಗ್ರೆಸ್‌ ಗೆದ್ದು ಕೊಂಡಿದ್ದು, ಬಿಜೆಪಿ ಕೇವಲ ಒಂದು ಸ್ಥಾನವನ್ನು ಪಡೆದಿದೆ. ಅಂತಿಮವಾಗಿ ಹಾವೇರಿ ಕ್ಷೇತ್ರ ಮತ್ತೊಮ್ಮೆ ಬಿಜೆಪಿ ಪಾಲಾಗಿದೆ.

 

suddiyaana