‘ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪ ಮುಖ್ಯಮಂತ್ರಿ ಪಟ್ಟ’- ಕುಮಾರಸ್ವಾಮಿ ಘೋಷಣೆ
ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಜನರ ಬೆಂಬಲ

ಕೋಲಾರ : ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಕೋಲಾರದಲ್ಲಿ ಪಂಚರತ್ನ ರಥಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ಜೆಡಿಎಸ್ ರಥಯಾತ್ರೆ ನಡೆಯುತ್ತಿದೆ. ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಘೋಷಿಸಿದ್ದಾರೆ. ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಲು ಈ ನಿರ್ಧಾರಕ್ಕೆ ಬಂದಿದ್ದಾಗಿ ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ : ‘ರೈತರು ಎಂದರೆ ಹೆಣ್ಣು ಕೊಡುವುದಿಲ್ಲ. ಕನ್ಯೆಯರ ಪಾಲಕರನ್ನು ಒಪ್ಪಿಸಿ’ – ಸರ್ಕಾರಕ್ಕೆ ಯುವ ರೈತರ ಮನವಿ
ವಿಧಾನಸಭೆ ಚುನಾವಣೆಗಾಗಿ ಮೂರು ಪ್ರಮುಖ ರಾಜಕೀಯ ಪಕ್ಷಗಳು ಯಾತ್ರೆಯಲ್ಲಿ ಬ್ಯುಸಿಯಾಗಿವೆ. ಕಾಂಗ್ರೆಸ್ ಈಗಾಗಲೇ ಕರ್ನಾಟಕದಲ್ಲಿ ಭಾರತ್ ಜೋಡೋ ಪಾದಯಾತ್ರೆ ಮುಗಿಸಿಯಾಗಿದೆ. ಬಿಜೆಪಿ ಜನಸಂಕಲ್ಪ ಯಾತ್ರೆಯಲ್ಲಿದೆ. ಜೆಡಿಎಸ್ ಕೂಡಾ ಪಂಚರತ್ನ ರಥಯಾತ್ರೆ ಮಾಡುತ್ತಿದೆ. ಈ ರಥಯಾತ್ರೆ ಉದ್ದೇಶಗಳಲ್ಲಿ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡುವುದು ಕೂಡಾ ಸೇರಿದೆ. ಹೀಗಾಗಿಯೇ ಜೆಡಿಎಸ್ ಅಧಿಕಾರಕ್ಕೆ ಬಂದರೆ ಮಹಿಳೆಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ರು. ಇದೇ ವೇಳೆ ಮಾತನಾಡಿದ ಹೆಚ್.ಡಿ ಕೆ, ಮಹಿಳೆಯರ ಪ್ರಾಮಾಣಿಕ ಅಭಿವೃದ್ಧಿಗೆ ಜೆಡಿಎಸ್ ಬದ್ದವಾಗಿದೆ. ಶಾಲೆಗೆ ಹೋಗುವ ಮಕ್ಕಳು ಬಂದು ನೀವು ಸಿಎಂ ಆಗ್ಬೇಕು ಅಂದರು. ಆರತಿ ಮಾಡಿದಾಗ ದಕ್ಷಿಣೆ ಕೊಟ್ಟಾಗ ದುಡ್ಡು ಬೇಡ ಒಳ್ಳೆ ಶಾಲೆ ಮಾಡಿ ಅಂತ ಮಕ್ಕಳು ಹೇಳಿದರು ಎಂದು ತಿಳಿಸಿದರು. ಮುಂದೆ ದುಡ್ಡು ಕೊಟ್ಟು ಮತ ಪಡೆಯೋದನ್ನು ಜನ ನಿಷೇಧ ಮಾಡ್ತಾರೆ. ಐದು ವರ್ಷಗಳ ಆಡಳಿತ ಸಿಕ್ಕರೆ ಜನ ಹಣವನ್ನು ಪಡೆಯಬಾರದು, ಆ ರೀತಿಯಾಗಿ ಜನರನ್ನು ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು.