ಚಿನ್ನ, ಬೆಳ್ಳಿ ಬೆಲೆ ಇಳಿಕೆ – ಯುವಕರಿಗೆ ಮೋದಿ ಬಂಪರ್ ಗಿಫ್ಟ್

ಚಿನ್ನ, ಬೆಳ್ಳಿ ಬೆಲೆ ಇಳಿಕೆ – ಯುವಕರಿಗೆ ಮೋದಿ ಬಂಪರ್ ಗಿಫ್ಟ್

ಲೋಕಸಭೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ದಾಖಲೆಯ 7ನೇ ಬಜೆಟ್‌ ಮಂಡಿಸಿದ್ದಾರೆ. 2024ರ ಕೇಂದ್ರ ಬಜೆಟ್‌ನಲ್ಲಿ ಎಲ್ಲಾ ವಲಯಗಳಿಗೂ ಒತ್ತು ನೀಡಲಾಗಿದೆ. ಪ್ರಮುಖವಾಗಿ ನರೇಂದ್ರ ಮೋದಿ ಸರ್ಕಾರ ಈ ಬಾರಿ ಯುವಸಮುದಾಯದ ಉದ್ಯೋಗವಲಯಕ್ಕೂ ಹೆಚ್ಚಿನ ಆದ್ಯತೆ ನೀಡಿದೆ. ಬಜೆಟ್ ಮಂಡನೆಯಲ್ಲಿ ಪ್ರಮುಖ ಘೋಷಣೆಗಳು ಯಾವುದು ಅನ್ನೋ ಮಾಹಿತಿ ಇಲ್ಲಿದೆ.

ಇದನ್ನೂ ಓದಿ : ಬಜೆಟ್‌ ಮಂಡನೆಗೆ ಕೌಂಟ್‌ಡೌನ್‌ – ಹಣಕಾಸು ಇಲಾಖೆಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್

ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯನ್ನ ಘೋಷಣೆ ಮಾಡಲಾಗಿದೆ. ಉಚಿತ ಸೌರ ವಿದ್ಯುತ್ ಯೋಜನೆ ಕುರಿತು ಮಾತನಾಡಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ. ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್​​​ಗಳನ್ನು ಪಡೆಯಲು ಸಾಧ್ಯವಾಗಲಿದೆ. ಮೊದಲ ಬಾರಿಗೆ ಕೆಲಸಕ್ಕೆ ಸೇರುವ ಉದ್ಯೋಗಿಗಳಿಗೆ ಒಂದು ತಿಂಗಳ ವೇತನವನ್ನು ನೀಡಲಾಗುವುದು. ಹಾಗೇ ಮೊದಲ ಬಾರಿಗೆ ಉದ್ಯೋಗಿಗಳಿಗೆ, ಒಂದು ತಿಂಗಳ ವೇತನವು 15,000 ರೂಪಾಯಿವರೆಗೆ DBT ಆಗಿರುತ್ತದೆ, ಅರ್ಹತೆಯ ಮಿತಿಯು ತಿಂಗಳಿಗೆ 1 ಲಕ್ಷ ರೂಪಾಯಿ ಆಗಿರಲಿದ್ದು, ಇದರಿಂದ 2 ಕೋಟಿ ಯುವಕರು ಪ್ರಯೋಜನ ಪಡೆಯಲಿದ್ದಾರೆ ಎಂದು ಹಣಕಾಸು ಸಚಿವರು ಹೇಳಿದರು. ಅಂದರೆ ನೀವು ಮೊದಲು ಕೆಲಸಕ್ಕೆ ಸೇರಿದಾಗ ಒಂದು ತಿಂಗಳ ಭತ್ಯೆಯನ್ನು ಸರ್ಕಾರದಿಂದ ಪಡೆಯುತ್ತೀರಿ, 1 ಲಕ್ಷ ರೂಪಾಯಿಗಳ ಸಂಬಳದಲ್ಲಿ, ಸರ್ಕಾರವು 3000 ರೂಪಾಯಿಗಳನ್ನು ನಿಮ್ಮ ಪಿಎಫ್‌ಗೆ ಹಾಕುತ್ತದೆ.

ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ವಿಶಾಖಪಟ್ಟಣ ಚೆನ್ನೈ ಕೈಗಾರಿಕಾ ಕಾರಿಡಾರ್, ಹೈದರಾಬಾದ್ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಮಾಡುವುದಾಗಿ ಬಜೆಟ್​​ನಲ್ಲಿ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.

ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯನ್ನ 5 ವರ್ಷ ವಿಸ್ತರಣೆ ಮಾಡಲಾಗಿದೆ.  ಭಾರತದ ಆರ್ಥಿಕತೆ ವೃದ್ಧಿಯಾಗಿದೆ, ಹಣದುಬ್ಬರ ನಿಯಂತ್ರಣದಲ್ಲಿದೆ. ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆ 5 ವರ್ಷ ವಿಸ್ತರಣೆ ಮಾಡುತ್ತೇವೆ ಎಂದು ಬಜೆಟ್ ನಲ್ಲಿ ವಿತ್ತ ಸಚಿವೆ ಘೋಷಣೆ ಮಾಡಿದ್ದಾರೆ.

ಪಿಎಂ ಆವಾಸ್ ಯೋಜನೆಯಡಿ 3 ಕೋಟಿ ಮನೆಗಳ ನಿರ್ಮಾಣ ಗುರಿಯನ್ನ ಹೊಂದಲಾಗಿದೆ ಎಂದು ವಿತ್ತ ಸಚಿವೆ ಘೋಷಿಸಿದ್ದಾರೆ. ನಗರ, ಗ್ರಾಮಾಂತರ ಪ್ರದೇಶದಲ್ಲಿ 3 ಕೋಟಿ ಮನೆಗಳ ನಿರ್ಮಾಣ ಮಾಡುವುದಾಗಿ ಬಜೆಟ್‌ನಲ್ಲಿ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ

ಇನ್ನು ಬಂಗಾರ ಪ್ರಿಯರಿಗೆ ಮೋದಿ ಬಜೆಟ್‌ನಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನ ಮತ್ತು ಬೆಳ್ಳಿ ಮೇಲಿನ ದರವನ್ನು ಇಳಿಕೆ ಮಾಡಲಾಗಿದೆ. ಅಂದರೆ ಚಿನ್ನ ಮತ್ತು ಬೆಳ್ಳಿ ಮೇಲಿನ ಕಸ್ಟಮ್ಸ್ ಸುಂಕವನ್ನು ಕಡಿಮೆ ಮಾಡಲಾಗಿದ್ದು ಇದ್ರಿಂದಾಗಿ ಬಂಗಾರ ಬೆಳ್ಳಿಯ ಬೆಲೆ ಕಡಿಮೆಯಾಗಲಿದೆ.

ಇನ್ಮುಂದೆ ಮೊಬೈಲ್ ಫೋನ್ ಚಾರ್ಜರ್ ಅಗ್ಗವಾಗಲಿದೆ. ಜೊತೆಗೆ ಮೂರು ಕ್ಯಾನ್ಸರ್ ಔಷಧಿಗಳು ಅಗ್ಗವಾಗಿವೆ. ಮೂರು ಕ್ಯಾನ್ಸರ್ ಔಷಧಗಳ ಮೇಲಿನ ಕಸ್ಟಮ್ ಡ್ಯೂಟಿ ತೆರವುಗೊಳಿಸಲಾಗಿದೆ. ಅಂದರೆ ಈ ಮೂರು ಔಷಧಿಗಳು ಕಡಿಮೆಯಾಗಲಿವೆ. ಎಕ್ಸ್-ರೇ ಟ್ಯೂಬ್‌ಗಳು ಮತ್ತು ಫ್ಲಾಟ್ ಪ್ಯಾನಲ್ ಡಿಟೆಕ್ಟರ್‌ಗಳ ಮೇಲಿನ ಕಸ್ಟಮ್ಸ್ ಸುಂಕವನ್ನು ಶೇ 6 ರಷ್ಟು ಮತ್ತು ಪ್ಲಾಟಿನಂ ಮೇಲೆ ಶೇಕಡಾ 6.4 ರಷ್ಟು ಕಡಿಮೆ ಮಾಡಲಾಗುವುದು ಎಂದು ಹಣಕಾಸು ಸಚಿವರು ಬಜೆಟ್​​ನಲ್ಲಿ ಘೋಷಿಸಿದ್ದಾರೆ.

Shwetha M