ಬೆಳ್ಳಿ ಗೆದ್ದ ನೀರಜ್‌ ಚೋಪ್ರಾ – ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 5ನೇ ಪದಕ

ಬೆಳ್ಳಿ ಗೆದ್ದ ನೀರಜ್‌ ಚೋಪ್ರಾ – ಪ್ಯಾರಿಸ್‌ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ 5ನೇ ಪದಕ

ಟೋಕಿಯೋ ಒಲಿಂಪಿಕ್ಸ್​ನಲ್ಲಿ ಚಿನ್ನ ಗೆದ್ದಿದ್ದ ಭಾರತದ ಸ್ಟಾರ್​ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ 2024ರ ಪ್ಯಾರಿಸ್ ಒಲಿಂಪಿಕ್ಸ್​​ನಲ್ಲೂ ಇತಿಹಾಸ ಸೃಷ್ಟಿಸಿದ್ದಾರೆ. ಪ್ಯಾರಿಸ್​ನಲ್ಲಿ ಬೆಳ್ಳಿ ಗೆದ್ದು ಐತಿಹಾಸಿಕ ಸಾಧನೆ ಮಾಡಿದ್ದಾರೆ.

ಇದನ್ನೂ ಓದಿ: 40 ವರ್ಷ.. ಕಪ್ ಇಲ್ಲ.. ಫಾಫ್ OUT – ಡುಪ್ಲೆಸಿಸ್ ಕೊಕ್​ಗೆ ಇದೇ 3 ಕಾರಣ!

ಪ್ರತಿ ಕ್ರೀಡಾಕೂಟದಲ್ಲೂ ಉತ್ತಮ ಆರಂಭ ಪಡೆಯುತ್ತಿದ್ದ ನೀರಜ್​ಗೆ ಈ ಬಾರಿ ಕೊಂಚ ಆಘಾತ ಕಾದಿತ್ತು. ಅವರ ಮೊದಲ ಎಸೆತವೇ ಫೌಲ್ ಆಗಿತ್ತು. ಈ ಥ್ರೋ 86 ಮೀಟರ್‌ಗಿಂತ ಹೆಚ್ಚಿದ್ದರೂ ಅದನ್ನು ಪರಿಗಣಿಸಲಾಗಿಲ್ಲ. ಪಾಕಿಸ್ತಾನದ ಅರ್ಷದ್ ನದೀಮ್ ಕೂಡ ಮೊದಲ ಎಸೆತವನ್ನು ಫೌಲ್ ಮಾಡಿದರೂ, ನಂತರದ ಎಸೆತದಲ್ಲಿ 92.97 ಮೀಟರ್ ದೂರ ಎಸೆದು ಚಿನ್ನದ ಪದಕವನ್ನು ಭದ್ರಪಡಿಸಿಕೊಂಡರು. ಇದರೊಂದಿಗೆ ಹೊಸ ಒಲಿಂಪಿಕ್ ದಾಖಲೆಯನ್ನೂ ನಿರ್ಮಿಸಿದರು. ಮುಂದಿನ ಪ್ರಯತ್ನದಲ್ಲಿ ಪುನರಾಗಮನ ಮಾಡಿದ ನೀರಜ್, 89.45 ಮೀಟರ್‌ ದೂರ ಎಸೆದು ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಳ್ಳುವಂತೆ ಆಗಿದೆ. ಈ ಮೂಲಕ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಳ್ಳುವುದರೊಂದಿಗೆ ನೀರಜ್, ಒಲಿಂಪಿಕ್ಸ್‌ನಲ್ಲಿ ಸತತ ಎರಡು ಪದಕ ಗೆದ್ದ ಭಾರತದ ನಾಲ್ಕನೇ ಅಥ್ಲೀಟ್ ಎನಿಸಿಕೊಂಡರು.

ಇನ್ನು  ಒಲಿಂಪಿಕ್ಸ್‌ನಲ್ಲಿ ವೈಯಕ್ತಿಕ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದ ಪಾಕಿಸ್ತಾನದ ಮೊದಲ ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಅರ್ಷದ್ ನದೀಮ್ ಪಾತ್ರರಾಗಿದ್ದಾರೆ. ಇದರೊಂದಿಗೆ ಪಾಕಿಸ್ತಾನದ 32 ವರ್ಷಗಳ ಒಲಿಂಪಿಕ್ಸ್‌ ಪದಕದ ಬರವನ್ನು ನದೀಮ್ ನೀಗಿಸಿದ್ದಾರೆ.

Shwetha M