ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!

ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ಖಾಸಗಿ ದೂರು – ಇಂದು ಕೋರ್ಟ್‌ನಲ್ಲಿ ಭವಿಷ್ಯ!

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಹಗರಣ ಈಗ ಸಿಎಂ ಸಿದ್ದರಾಮಯ್ಯ ಬುಡಕ್ಕೆ ಬಂದು ನಿಂತಿದೆ.  ಸಿಎಂ ವಿರುದ್ಧ ದೂರು ದಾಖಲಾಗಿದ್ದು,  ಈ ಸಂಬಂಧ ಕಾನೂನು ಹೋರಾಟ ನಡೆಸುವಂತೆ ಆಗಿದೆ. ಇದೀಗ ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ  ಪ್ರಕಟಿಸಲಿದೆ.

ಇದನ್ನೂ ಓದಿ: ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ – ಮೆಟ್ರೋ ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದ ಬಿಎಂಆರ್‌ಸಿಎಲ್‌!

ಹೌದು, ಮುಡಾ ಹಗರಣದ ಸಂಬಂಧ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಎಂಬುವರು ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಮ್ಮ, ಮಲ್ಲಿಕಾರ್ಜುನ , ನಿಂಗಾ (ಜವರ) ಮತ್ತು ಇನ್ನಿತರರ ವಿರುದ್ಧ ದೂರು ದಾಖಲಾಗಿದೆ. ಇದೀಗ ಈ ಪ್ರಕರಣ ಕೋರ್ಟ್‌ ಮೆಟ್ಟಿಲೇರಿದೆ. ಸಿದ್ದರಾಮಯ್ಯ ವಿರುದ್ಧ ದಾಖಲಾದ ಖಾಸಗಿ ದೂರನ್ನು ವಿಚಾರಣೆಗೆ ಸ್ವೀಕರಿಸಬೇಕೇ ಅಥವಾ ಬೇಡವೇ ಎಂಬುದರ ಕುರಿತ ಆದೇಶವನ್ನು ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ  ಪ್ರಕಟಿಸಲಿದೆ.

ಕೋರ್ಟ್‌ ಆದೇಶ ಹೊರಬಂದ ಬಳಿಕ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರನ್ನು ಅಭಿಯೋಜನೆಗೆ ಅನುಮತಿ ಪರಿಗಣಿಸಿ ನೀಡಬೇಕೇ ಅಥವಾ ಬೇಡವೇ ಎಂಬುದನ್ನು ರಾಜ್ಯಪಾಲರು ನಿರ್ಧರಿಸುವ ಸಾಧ್ಯತೆಯಿದೆ. ಮಂಗಳವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದತ್ತ ಎಲ್ಲರ ಚಿತ್ರ ಇದೆ.

ದೂರುದಾರರ ಪರವಾಗಿ ವಕೀಲರಾದ ಲಕ್ಷ್ಮಿ ಐಯ್ಯಂಗಾರ್ ಅವರು ವಾದ ಮಂಡಿಸಿದ್ದರು. ಮುಡಾ ಹಗರಣದ ವಿಚಾರದಲ್ಲಿ ತಕ್ಷಣಕ್ಕೆ ಅಭಿಯೋಜನೆಯ ಅಗತ್ಯ ಇಲ್ಲ. ಅದಿಲ್ಲದೆಯೇ ಪ್ರಕರಣವನ್ನ ವಿಚಾರಣೆಗೊಳಪಡಿಸಬಹುದು ಎಂದು ವಾದ ಮಂಡಿಸಿ, ಅಯ್ಯಪ್ಪ ಮತ್ತು ಮಂಜು ಸುರಾನಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲೇಖಿಸಿದರು.

Shwetha M

Leave a Reply

Your email address will not be published. Required fields are marked *