ಚನ್ನಪಟ್ಟಣ ಬೈ ಎಲೆಕ್ಷನ್‌ – ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಎಂದ ವಿಜಯೇಂದ್ರ

ಚನ್ನಪಟ್ಟಣ ಬೈ ಎಲೆಕ್ಷನ್‌ – ಅಭ್ಯರ್ಥಿ ಕುರಿತು ದೆಹಲಿ ಮಟ್ಟದಲ್ಲಿ ಚರ್ಚಿಸಿ ನಿರ್ಧಾರ ಎಂದ ವಿಜಯೇಂದ್ರ

ಚನ್ನಪಟ್ಟಣ ಉಪಚುನಾವಣೆಯ ಕಾವು ಜೋರಾಗಿದೆ. ಮೈತ್ರಿ ಪಕ್ಷದ ಅಭ್ಯರ್ಥಿ ಯಾರಾಗಲಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಚನ್ನಪಟ್ಟಣದಲ್ಲಿ ಟಿಕೆಟ್‌ ನೀಡಬೇಕೆಂದ್ರ ಸಿಪಿ ಯೋಗೀಶ್ವರ್‌ ಪಟ್ಟು ಹಿಡಿದಿದ್ದಾರೆ. ಇದೀಗ ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿ ಕುರಿತು ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಮೊಸಳೆ ಬಾಯಿಗೆ ಆಹಾರವಾಗುತ್ತಿದ್ದ ಮರಿಯನ್ನ ರಕ್ಷಿಸಿದ ತಾಯಿ ಆನೆ – ಅಬ್ಬಬ್ಬಾ.. ರೋಚಕ ದೃಶ್ಯ ಸೆರೆ!

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿರುವ ವಿಜಯೇಂದ್ರ, ಯೋಗೀಶ್ವರ್  ಅವರು ಚನ್ನಪಟ್ಟಣದಲ್ಲಿ ತಾವೂ ಸ್ಪರ್ಧಾಕಾಂಕ್ಷಿ ಎಂದು ಹೇಳಿದ್ದು ತಪ್ಪೆನ್ನುವುದಿಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಅವರಿಗೆ ಅವರದ್ದೇ ಆದ ಹಿಡಿತ, ಬೆಂಬಲ ಇದೆ. ಆದರೆ ಬಿಜೆಪಿ-ಜೆಡಿಎಸ್ ಪಕ್ಷಗಳು ಒಟ್ಟಾಗಿ ಹೋಗುವ ಸಂದರ್ಭ ಇದು. ಅಲ್ಲಿ ಕುಮಾರಸ್ವಾಮಿ ಅವರು ಆಯ್ಕೆ ಆಗಿದ್ದರು. ಎರಡೂ ಪಕ್ಷಗಳ ವರಿಷ್ಠರು ದೆಹಲಿ ಮಟ್ಟದಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದ್ದಾರೆ.

ಬಿಜೆಪಿ- ಜೆಡಿಎಸ್ ಪಕ್ಷಗಳು ಲೋಕಸಭಾ ಚುನಾವಣೆಯನ್ನು ಒಟ್ಟಾಗಿ ಎದುರಿಸಿದ್ದೇವೆ. ವಿಧಾನಸಭಾ ಉಪ ಚುನಾವಣೆ ಅಭ್ಯರ್ಥಿ ಆಯ್ಕೆ ಸಂಬಂಧ ಸಮಿತಿ ರಚಿಸಿ ಅಭಿಪ್ರಾಯ ಪಡೆದಿದ್ದೇವೆ. ಅಶ್ವಥ್ ನಾರಾಯಣ್ ಅವರ ಸಮಿತಿಯ ವರದಿ ಬಗ್ಗೆ ಮಾಹಿತಿ ಇಲ್ಲ. ನಾನು ಕೂಡ ಅಶ್ವತ್ಥ್ ನಾರಾಯಣ್ ಜೊತೆ ಚರ್ಚೆ ಮಾಡುವೆ. ವರಿಷ್ಠರ ಗಮನಕ್ಕೆ ತರುತ್ತೇನೆ ಎಂದಿದ್ದಾರೆ.

Shwetha M

Leave a Reply

Your email address will not be published. Required fields are marked *