ನಾಡಹಬ್ಬ ದಸರಾಗೆ ದಿನಗಣನೆ ಆರಂಭ –  ಈ ಬಾರಿಯ ಜಂಬೂ ಸವಾರಿಯಲ್ಲಿ ಗಜಪಡೆಗೆ ಸಾರಥಿ ಯಾರು?  

ನಾಡಹಬ್ಬ ದಸರಾಗೆ ದಿನಗಣನೆ ಆರಂಭ –  ಈ ಬಾರಿಯ ಜಂಬೂ ಸವಾರಿಯಲ್ಲಿ ಗಜಪಡೆಗೆ ಸಾರಥಿ ಯಾರು?  

ನಾಡಹಬ್ಬ ಮೈಸೂರು ದಸರಾಗೆ ದಿನಗಣನೆ ಆರಂಭವಾಗಿದೆ. ಇದೀಗ ದಸರಾ – 2024ರ ವೇಳಾಪಟ್ಟಿ ಘೋಷಣೆಯಾಗಿದ್ದು, ಅಕ್ಟೋಬರ್ 3ರಂದು ದಸರಾ ಉದ್ಘಾಟನೆಯಾಗಲಿದೆ. ಅಕ್ಟೋಬರ್ 12ರಂದು ಐತಿಹಾಸಿಕ ಜಂಬೂ ಸವಾರಿ ನಡೆಯಲಿದೆ. ಇದೀಗ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಇದನ್ನೂ ಓದಿ: ಎಂಡಿ, ಚೀಫ್ ಇಂಜಿನಿಯರ್​ಗೆ ಎಷ್ಟು ಫಿಕ್ಸ್‌ ಮಾಡಿದ್ದೀರಿ? – ರಾಜ್ಯ ಸರ್ಕಾರದ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಈ ಬಾರಿಯ ಮೈಸೂರು ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಆನೆಗಳ ಪಟ್ಟಿಯನ್ನ ಅರಣ್ಯ, ಜೀವವಿಜ್ಞಾನ ಮತ್ತು ಪರಿಸರ ಸಚಿವ ಈಶ್ವರ ಬಿ. ಖಂಡ್ರೆ  ಬಿಡುಗಡೆ ಮಾಡಿದ್ದಾರೆ. ಈ ಬಾರಿಯೂ ಮೈಸೂರು ದಸರಾ ಅಂಬಾರಿಯನ್ನು ಕ್ಯಾಪ್ಟನ್‌ ಅಭಿಮನ್ಯು ಹೊರಲಿದ್ದಾನೆ. ಮಹೇಂದ್ರ, ಗೋಪಿ, ಭೀಮ, ಪ್ರಶಾಂತ, ಧನಂಜಯ, ಸುಗ್ರೀವ, ಹಿರಣ್ಯ, ರೋಹಿತ, ಏಕಲವ್ಯ, ಕಂಜನ್, ಲಕ್ಷ್ಮಿ, ವರಲಕ್ಷ್ಮಿ ಮತ್ತು ದೊಡ್ಡಹರವೆ ಲಕ್ಷ್ಮಿ ಆನೆಗಳು ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲಿವೆ.

ಸಂಪ್ರದಾಯದಂತೆ ಜಿಲ್ಲಾಡಳಿತದ ಸಹಯೋಗದಲ್ಲಿ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಆ.21ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಮೊದಲ ತಂಡದ ಆನೆಗಳಿಗೆ ಪೂಜೆ ಸಲ್ಲಿಸಿ, ಮಾವುತರು ಮತ್ತು ಕಾವಾಡಿಗರಿಗೆ ಸತ್ಕರಿಸಿ ಆನೆಗಳನ್ನು ಕಾಡಿನಿಂದ ನಾಡಿಗೆ ಕಳುಹಿಸುವ ಗಜಪಯಣ ನಡೆಯಲಿದೆ. ಮೊದಲ ತಂಡದಲ್ಲಿ 9 ಆನೆಗಳು ಹಾಗೂ 2ನೇ ಹಂತದಲ್ಲಿ 5 ಆನೆಗಳು ನಾಡಿಗೆ ಬರಲಿವೆ ಎಂದು ತಿಳಿಸಿದ್ದಾರೆ.

Shwetha M

Leave a Reply

Your email address will not be published. Required fields are marked *