ರೇಣುಕಾಸ್ವಾಮಿ ಕೊಲೆ ಕೇಸ್‌ – ಪವಿತ್ರಾಗೌಡ ವಿರುದ್ಧ ಮತ್ತೊಂದು ಪ್ರಬಲ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ ಕೇಸ್‌ – ಪವಿತ್ರಾಗೌಡ ವಿರುದ್ಧ ಮತ್ತೊಂದು ಪ್ರಬಲ ಸಾಕ್ಷಿ!

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ನಟಿ ಪವಿತ್ರಾ ಗೌಡ ಹಾಗೂ ನಟ ದರ್ಶನ್‌ ಜೈಲು ಸೇರಿದ್ದಾರೆ. ದರ್ಶನ್‌ ಹಾಗೂ ಪವಿತ್ರಾ ವಿರುದ್ಧ ಈಗಾಗಲೇ ನೂರಾರು ಸಾಕ್ಷಿಗಳು ಸಿಕ್ಕಿವೆ. ಮೊನ್ನೆಯಷ್ಟೇ ದರ್ಶನ್‌ ಬಟ್ಟೆಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿರುವುದು ದೃಢಪಟ್ಟಿತ್ತು. ಇದೀಗ ಪವಿತ್ರಾ ಗೌಡ ಚಪ್ಪಲಿಯಲ್ಲಿ ರೇಣುಕಾಸ್ವಾಮಿ ರಕ್ತದ ಕಲೆ ಪತ್ತೆಯಾಗಿದೆ.

ಇದನ್ನೂ ಓದಿ: ನಾಡಹಬ್ಬ ದಸರಾಗೆ ದಿನಗಣನೆ ಆರಂಭ –  ಈ ಬಾರಿಯ ಜಂಬೂ ಸವಾರಿಯಲ್ಲಿ ಗಜಪಡೆಗೆ ಸಾರಥಿ ಯಾರು?  

ನಟಿ ಪವಿತ್ರಾ ಗೌಡ ಪಟ್ಟಣಗೆರೆ ಶೆಡ್‌ಗೆ ಹೋಗಿ ರೇಣುಕಾಸ್ವಾಮಿಗೆ ಚಪ್ಪಲಿಯಲ್ಲಿ ಹೊಡೆದಿದ್ದಾಳೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ತನಿಖೆ ವೇಳೆ ಪವಿತ್ರಾ ಗೌಡ ಮನೆಯಲ್ಲಿ ಕೊಲೆ ದಿನ ಆಕೆ ಧರಿಸಿದ್ದ ಚಪ್ಪಲಿಯನ್ನು ಪೊಲೀಸರು ವಶಪಡಿಸಿಕೊಂಡಿದ್ದರು. ಅದನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಲಾಗಿತ್ತು. ಚಪ್ಪಲಿ ಮೇಲೆ ರೇಣುಕಾಸ್ವಾಮಿ ರಕ್ತದ ಕಲೆ ಇರುವುದು ಪತ್ತೆಯಾಗಿದೆ.  ಪವಿತ್ರಾಗೌಡ ವಿರುದ್ಧ ಈ ಚಪ್ಪಲಿ ಪ್ರಬಲ ಸಾಕ್ಷಿಯಾಗಲಿದೆ.

ಇನ್ನು, ಕೊಲೆ ಪ್ರಕರಣ ಸಂಬಂಧ ದರ್ಶನ್‌ ಆಪ್ತ ಬಳಗದ ಮತ್ತೊಬ್ಬ ನಟನ ಸಾಕ್ಷಿ ಹೇಳಿಕೆಯನ್ನು ನ್ಯಾಯಾಲಯದಲ್ಲಿ ಸಿಆರ್‌ಪಿಸಿ 164ರಡಿ ಪೊಲೀಸರು ದಾಖಲಿಸಿದ್ದಾರೆ. ಹತ್ಯೆಗೂ ಮುನ್ನ ದರ್ಶನ್‌ ಜೊತೆ ಭೋಜನ ಕೂಟದಲ್ಲಿದ್ದ ಕಾರಣಕ್ಕೆ ನಟ ಯಶಸ್‌ ಅವರನ್ನು ಸಾಕ್ಷಿಯಾಗಿ ಪರಿಗಣಿಸಿ ಪೊಲೀಸರು ಹೇಳಿಕೆ ಪಡೆದಿದ್ದಾರೆ.

Shwetha M

Leave a Reply

Your email address will not be published. Required fields are marked *