ಒಂದು ಸಾವಿರ ಅಕೌಂಟ್‌ ಬ್ಲಾಕ್‌ ಮಾಡಿದ ಜ್ಯೋತಿ ರೈ – ಖಡಕ್‌ ನಿರ್ಧಾರ ಕೈಗೊಂಡಿದ್ದೇಕೆ ನಟಿ?

ಒಂದು ಸಾವಿರ ಅಕೌಂಟ್‌ ಬ್ಲಾಕ್‌ ಮಾಡಿದ ಜ್ಯೋತಿ ರೈ – ಖಡಕ್‌ ನಿರ್ಧಾರ ಕೈಗೊಂಡಿದ್ದೇಕೆ ನಟಿ?

ನಟಿ ಜ್ಯೋತಿ ರೈ ಸದಾ ಒಂದಲ್ಲ ಒಂದು ವಿಚಾರವಾಗಿ ಸುದ್ದಿಯಲ್ಲಿರುತ್ತಾರೆ. ಕಿನ್ನರಿ ಕನ್ನಡ ಸೀರಿಯಲ್‌ ಮೂಲಕ ಜನಪ್ರೀಯತೆ ಪಡೆದುಕೊಂಡಿರುವ ಜ್ಯೋತಿ ರೈ ಸದ್ಯ ಕಾಲಿವುಡ್‌ ಸಿನಿಮಾಗಳಲ್ಲಿ ಬ್ಯೂಸಿಯಾಗಿದ್ದಾರೆ. ಇದೀಗ ಈ ನಟಿ ಒಂದಲ್ಲ.. ಎರಡಲ್ಲ.. ಬರೋಬ್ಬರಿ ಒಂದು ಸಾವಿರ ಅಕೌಂಟ್‌ಗಳನ್ನ ಸೋಶಿಯಲ್‌ ಮೀಡಿಯಾದಲ್ಲಿ ಬ್ಲಾಕ್‌ ಮಾಡಿದ್ದಾರೆ.

ಇದನ್ನೂ ಓದಿ:ಸ್ಯಾಂಡಲ್‌ವುಡ್‌, ಮಾಲಿವುಡ್‌ ಆಯ್ತು.. ಈಗ ಬಾಲಿವುಡ್‌ನತ್ತ ಕರಾವಳಿ ಹೈದ – ಬಾಬಿ ಡಿಯೋಲ್ ಜತೆ ಅಬ್ಬರಿಸಲಿದ್ದಾರೆ ನಟ!

ಕರಾವಳಿ ಬೆಡಗಿ ಜ್ಯೋತಿ ರೈ, ಸದ್ಯ ಹಾಟ್‌ ಹಾಟ್‌ ಫೋಟೋ ಮೂಲಕ ಸೋಶಿಯಲ್‌ ಮೀಡಿಯಾಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ತಮ್ಮ ಬೋಲ್ಡ್‌ ಲುಕ್ ಮೂಲಕವೇ ಪಡ್ಡೆ ಹುಡುಗರ ನಿದ್ದೆಗೆಡಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಜ್ಯೋತಿ ರೈ ಡೀಫ್‌ ಫೇಕ್‌ ಗೂ ಬಲಿಯಾಗಿದ್ರು. ಇದೀಗ ಸೋಶಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್ ಮಾಡುವವರಿಗೆ ನಟಿ ಖಡಕ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಕೆಟ್ಟ ಸಂದೇಶ ಕಳುಹಿಸುತ್ತಿದ್ದ 1 ಸಾವಿರ ಅಕೌಂಟ್ ಅನ್ನು ನಟಿ ಬ್ಲಾಕ್ ಮಾಡುವ ಮೂಲಕ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.

ಈ ಬಗ್ಗೆ ಜ್ಯೋತಿ ರೈ ತಮ್ಮ ಸೋಶಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ವೊಂದನ್ನ ಹಾಕಿದ್ದಾರೆ. ತಮಗಾಗುತ್ತಿರುವ ತೊಂದರೆ ಬಗ್ಗೆ ಹಾಗೂ ತಾನು ತೆಗೆದುಕೊಂಡ ದಿಟ್ಟ ನಿರ್ಧಾರದ ಬಗ್ಗೆ ತಿಳಿಸಿದ್ದಾರೆ. ಇನ್ಸ್ಟಾಗ್ರಾಂ ಬ್ಲಾಕ್ ಫೀಚರ್ ಅನ್ನು ನಾನು ಉತ್ತಮವಾಗಿ ಬಳಸಿಕೊಂಡಿದ್ದೇನೆ. ಕಾಮೆಂಟ್ ಸೆಕ್ಷನ್‌ನಲ್ಲಿ ಕೆಟ್ಟ ಹಾಗೂ ಅಗೌರವದಿಂದ ಮೆಸೇಜ್ ಮಾಡುವ ಮೂಲಕ ಕೆಟ್ಟ ವರ್ತನೆ ತೋರಿದ್ದ 1 ಸಾವಿರಕ್ಕೂ ಅಧಿಕ ವೈಯಕ್ತಿಕ ಖಾತೆಗಳನ್ನು ನಾನು ತೆಗೆದು ಹಾಕಿದ್ದೇನೆ. ಅವರೊಂದಿಗೆ ಮಾತುಕತೆ ಮಾಡುವ ಮೂಲಕ ಚರ್ಚೆ ಮಾಡೋದು ನನಗೆ ಇಷ್ಟವಿಲ್ಲ. ಪಾಸಿಟಿವ್ ಆಗಿ ಪರಿಸರವನ್ನು ರಚನೆ ಮಾಡಲು ನೀವು ಕೂಡ ಇಂಥ ಟೂಲ್‌ಗಳನ್ನು ಬಳಕೆ ಮಾಡಿ ಎಂದಿದ್ದಾರೆ. ಈ ವಿಚಾರದಲ್ಲಿ ಯಾರಾದರೂ ಕಲಿಯಬೇಕು ಎಂದಿದ್ದರೆ, ಅದಕ್ಕೆ ನಾನು ಸ್ವಾಗತ ನೀಡುತ್ತಿದ್ದೇನೆ. ಅವಕಾಶಕ್ಕಾಗಿ ಹಾಗೂ ನನ್ನ ಅಭಿಮಾನಿಗಳ ಬೆಂಬಲಕ್ಕೆ ನಾನು ಸದಾ ಚಿರಋಣಿ ಎಂದು ಜ್ಯೋತಿ ರೈ ಬರೆದಿದ್ದಾರೆ.

Shwetha M

Leave a Reply

Your email address will not be published. Required fields are marked *